Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಭೂಮಾಲೀಕರ ಜಮೀನಿನ ಪಹಣಿಗೆ ಆಧಾರ್ ಲಿಂಕ್ ಕಡ್ಡಾಯ
    ಉಡುಪಿ ಜಿಲ್ಲೆ

    ಭೂಮಾಲೀಕರ ಜಮೀನಿನ ಪಹಣಿಗೆ ಆಧಾರ್ ಲಿಂಕ್ ಕಡ್ಡಾಯ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಉಡುಪಿ:
    ರೈತರು ತಮ್ಮ ಜಮೀನಿನ ಪಹಣಿಯನ್ನು ಆಧಾರ್‌ಗೆ ಲಿಂಕ್ ಮಾಡುವ ಕಾರ್ಯವು ಪ್ರಗತಿಯಲ್ಲಿದ್ದು, ಜಿಲ್ಲೆಯಲ್ಲಿ ಈವರೆಗೆ ಶೇ. 85 ರಷ್ಟು ಮಾತ್ರ ಪ್ರಗತಿ ಆಗಿರುತ್ತದೆ. ಮುಂದಿನ ಒಂದು ವಾರದೊಳಗೆ ಜಿಲ್ಲೆಯಲ್ಲಿ ಬಾಕಿ ಇರುವ ಭೂಮಾಲೀಕರ ಜಮೀನಿನ ಪಹಣಿಯನ್ನು ಆಧಾರ್‌ಗೆ ಲಿಂಕ್ ಮಾಡುವ ಬಗ್ಗೆ ಸರ್ಕಾರದಿಂದ ನಿರ್ದೇಶನ ನೀಡಲಾಗಿದ್ದು, ಆದರೆ, ಜಿಲ್ಲೆಯಲ್ಲಿ ನಿರೀಕ್ಷಿತ ಪ್ರಗತಿ ಆಗಿರುವುದಿಲ್ಲ.

    Click Here

    Call us

    Click Here

    ರೈತರಿಗೆ ನಿಗದಿತ ಸಮಯದಲ್ಲಿ ಸರ್ಕಾರದ ಸೌಲಭ್ಯಗಳನ್ನು ಒದಗಿಸುವ ನಿಟ್ಟಿನಲ್ಲಿ ಹಾಗೂ ಅಕ್ರಮ ಖಾತಾ ಬದಲಾವಣೆಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಈ ಆಧಾರ್ ಜೋಡಣೆಯು ಅವಶ್ಯಕವಾಗಿದ್ದು, ಜಿಲ್ಲೆಯ ರೈತರು ಮೂರು ದಿನದೊಳಗಾಗಿ ಪಹಣಿ ಆಧಾರ್ ದಾಖಲಾತಿಗಳೊಂದಿಗೆ ಹಾಗೂ ಆಧಾರ್ ಜೋಡಣೆಯಾಗಿರುವ ಮೊಬೈಲ್ ನೊಂದಿಗೆ ಸಂಬಂಧಪಟ್ಟ ಗ್ರಾಮ ಆಡಳಿತ ಅಧಿಕಾರಿಯವರನ್ನು ಸಂಪರ್ಕಿಸಿ ಆಧಾರ್ ಜೋಡಣೆ ಮಾಡಿಸಿಕೊಳ್ಳಬಹುದಾಗಿದೆ.

    ಜಿಲ್ಲೆಯಲ್ಲಿ ಜಮೀನು ಹೊಂದಿ ಬೇರೆ ರಾಜ್ಯ ಹಾಗೂ ವಿದೇಶದಲ್ಲಿ ವಾಸವಿದ್ದ ಭೂಮಾಲೀಕರು ಸ್ವಗ್ರಾಮಕ್ಕೆ ಬಂದ ಕೂಡಲೇ ಅಥವಾ ಅವರ ಕುಟುಂಬಸ್ಥರು/ಸಂಬಂಧಿಕರು ಜಿಲ್ಲೆಯಲ್ಲಿದ್ದಲ್ಲಿ ಕೂಡಲೇ ಸಂಬಂಧಪಟ್ಟ ಗ್ರಾಮ ಆಡಳಿತ ಅಧಿಕಾರಿಗಳನ್ನು ಸಂಪರ್ಕಿಸಿ ಪಹಣಿಗೆ ಆಧಾರ್ ಜೋಡಣೆ ಮಾಡಿಸಬೇಕು. ಸದ್ರಿ ಕಾರ್ಯವು ಗ್ರಾಮ ಆಡಳಿತ ಅಧಿಕಾರಿಗಳ ಮುಖಾಂತರವೇ ಆಗುತ್ತಿದ್ದು ಸೈಬರ್, ಗ್ರಾಮ ಒನ್ ಸೆಂಟರ್ ಇತ್ಯಾದಿ ಕಡೆಗಳಲ್ಲಿ ಮಾಡಲು ಅವಕಾಶ ಇರುವುದಿಲ್ಲ.

    ಆದ್ದರಿಂದ, ಈವರೆಗೆ ಆಧಾರ್ ಜೋಡಣೆ ಮಾಡದೇ ಇರುವ ಭೂಮಾಲೀಕರು ಮುಂದಿನ ದಿನಗಳಲ್ಲಿ ಸರ್ಕಾರದ ಸವಲತ್ತುಗಳಿಂದ ವಂಚಿತರಾಗುವ ಸಂಭವ ಇರುವುದರಿಂದ ಆಧಾರ್ ಜೋಡಣೆ ಮಾಡದೇ ಇರುವ ಭೂಮಾಲೀಕರು ತಕ್ಷಣವೇ ಗ್ರಾಮ ಆಡಳಿತ ಅಧಿಕಾರಿಗಳನ್ನು ಸಂಪರ್ಕಿಸಿ ಪಹಣಿಗೆ ಆಧಾರ್ ಜೋಡಣೆ ಮಾಡಲು ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಡಾ. ಕೆ. ವಿದ್ಯಾಕುಮಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಉಡುಪಿ: ವಿದ್ಯಾರ್ಥಿವೇತನ ಸೌಲಭ್ಯಕ್ಕೆ ಅರ್ಜಿ ಆಹ್ವಾನ

    04/07/2026

    ಮುಂಗಾರು ಹಂಗಾಮಿನಲ್ಲಿ ರೈತರಿಂದಲೇ ಬೆಳೆ ಸಮೀಕ್ಷೆಗೆ ಅವಕಾಶ

    04/07/2026

    ವಚನ ಸಾಹಿತ್ಯ ಉಳಿವಿಗೆ ಅವಿರತ ಶ್ರಮ ವಹಿಸಿದ ಫ.ಗು ಹಳಕಟ್ಟಿ: ಎಂ.ಎ ಗಫೂರ್

    03/07/2026
    Leave A Reply Cancel Reply

    16 − 1 =

    Call us

    Click Here

    Call us

    Call us

    Call us
    Highest Viewed Recently
    • ಮರಳಿ ಸಾಲಿಗ್ರಾಮ ಯಕ್ಷ ರಂಗದಂಗಳಕ್ಕೆ ಸಮಾರಂಭದಲ್ಲಿ ಕೋಟ ಶಿವಾನಂದ ಅವರಿಗೆ ಸನ್ಮಾನ
    • ಗಾಳಿಯಿಂದ ಹಾನಿಗೊಂಡ ಮನೆಗಳಿಗೆ ಮಾಜಿ ಸಂಸದ ಕೆ. ಜಯಪ್ರಕಾಶ್ ಹೆಗ್ಡೆ ಭೇಟಿ
    • ಜೆಸಿಐ ಶಿರೂರು ಘಟಕಕ್ಕೆ ಜೆಎಸಿ ಗೋಲ್ಡನ್ ಪ್ರೆಸಿಡೆಂಟ್ ಪ್ರಶಸ್ತಿ
    • ಕೋಟ ಸಹಕಾರಿ ವ್ಯವಸಾಯಕ ಸಂಘದ ಸಂಯೋಜನೆಯಲ್ಲಿ ಪಂಚವರ್ಣದ ಹಸಿರು ಹೆಜ್ಜೆ ಆಯೋಜನೆ
    • ಅರೆಶಿರೂರು ಪ್ರೌಢಶಾಲೆಯ ವಿದ್ಯಾರ್ಥಿ ಸರಕಾರ ಉದ್ಘಾಟನೆ ಮತ್ತು ಶ್ರೀ ದೇವಳದಿಂದ ನೀಡಿದ ವಿವಿಧ ಸವಲತ್ತುಗಳ ವಿತರಣೆ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.