ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಉಡುಪಿಯ ಪೂರ್ಣಪ್ರಜ್ಞ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕಗಳ ಆಶ್ರಯದಲ್ಲಿ ನಡೆದ ಮಂಗಳೂರು ವಿಶ್ವವಿದ್ಯಾನಿಲಯ ವ್ಯಾಪ್ತಿಯ ಅಂತರ್ – ಕಾಲೇಜು ಸಾಂಸ್ಕೃತಿಕ ಸ್ಪರ್ಧೆ ಎನ್.ಎಸ್.ಎಸ್. ಉತ್ಸವ ಕ್ಷಿತಿಜದಲ್ಲಿ ಡಾ. ಬಿ.ಬಿ. ಹೆಗ್ಡೆಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕಗಳ ಸ್ವಯಂಸೇವಕರು ಸಮಗ್ರ ಪ್ರಶಸ್ತಿ ಪಡೆದರು.
ಸಮೂಹ ಗಾನ, ವೆರೈಟಿ ಡಾನ್ಸ್, ಪೇಸ್ ಪೇಂಟಿಂಗ್ ಸ್ಪರ್ಧೆಗಳಲ್ಲಿ ಪ್ರಥಮ ಹಾಗೂ ಬೀದಿ ನಾಟಕ, ಬೆಸ್ಟ್ ಔಟ್ ಆಫ್ ವೇಸ್ಟ್ ಸ್ಪರ್ಧೆಗಳಲ್ಲಿ ದ್ವಿತೀಯ ಸ್ಥಾನ ಪಡೆಯುವ ಮೂಲಕ ಸಮಗ್ರ ಪ್ರಶಸ್ತಿ ಪಡೆಯಿತು.
ಎನ್.ಎಸ್. ಎಸ್. ಸ್ವಯಂಸೇವಕರ ಈ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ ಅಧ್ಯಕ್ಷರಾದ ಬಿ.ಎಂ. ಸುಕುಮಾರ ಶೆಟ್ಟಿ, ಆಡಳಿತ ಮಂಡಳಿಯ ಸದಸ್ಯರು, ಪ್ರಾಂಶುಪಾಲರಾದ ಕೆ. ಉಮೇಶ್ ಶೆಟ್ಟಿ, ಎನ್.ಎಸ್.ಎಸ್. ಕಾರ್ಯಕ್ರಮ ಅಧಿಕಾರಿಗಳಾದ ಡಾ. ಚೇತನ್ ಶೆಟ್ಟಿ ಕೋವಾಡಿ, ದೀಪಾ ಪೂಜಾರಿ, ಬೋಧಕ- ಬೋಧಕೇತರರು ಹಾಗೂ ವಿದ್ಯಾರ್ಥಿಗಳು ಅಭಿನಂದಿಸಿದ್ದಾರೆ.