ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಇಲ್ಲಿನ ಬಸ್ರೂರು ಶ್ರಿ ಶಾರದಾ ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರದ ಉದ್ಘಾಟನಾ ಸಮಾರಂಭವು ಉಳ್ಳೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಗುರುವಾರದಂದು ಜರುಗಿತು.
ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಬ್ರಾಹ್ಮೀ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ಕಮಲಶಿಲೆ ಇದರ ಧರ್ಮದರ್ಶಿಗಳಾದ ಎಸ್. ಸಚ್ಚಿದಾನಂದ ಚಾತ್ರ ಅವರು ಸ್ಪೂರ್ತಿದಾಯಕ ಭಾಷಣ ಮಾಡಿ, ಸಾಮಾಜಿಕ ಆರ್ಥಿಕ ಸವಾಲುಗಳನ್ನು ಎದುರಿಸುವಲ್ಲಿ ಎನ್.ಎಸ್.ಎಸ್.ನ ಮಹತ್ವವನ್ನು ಒತ್ತಿ ಹೇಳಿದರು. ಜೊತೆಗೆ ಸಮಾಜದ ಕಲ್ಯಾಣಕ್ಕೆ ಕೊಡುಗೆ ನೀಡುವಂತೆ ವಿದ್ಯಾರ್ಥಿಗಳಿಗೆ ಮನವರಿಕೆ ಮಾಡಿದರು.
ಉಳ್ಳೂರು ಶ್ರೀ ಬನಶಂಕರಿ ದೇವಸ್ಥಾನದ ಆಡಳಿತ ಮೊಕ್ತೇಸರರಾದ ಸಂಪಿಗೇಡಿ ಸಂಜೀವ ಶೆಟ್ಟಿ ಮಾತನಾಡಿ, ಎನ್.ಎಸ್.ಎಸ್. ಘಟಕ ಸ್ವಚ್ಚತೆ, ನೈರ್ಮಲ್ಯ ಸಮಯಪಾಲನೆ, ವ್ಯಕ್ತಿತ್ವ ವಿಕಸನಕ್ಕೆ ಬೇಕಾಗುವ ಕೌಶಲ್ಯಗಳ ಬಗ್ಗೆ ತಿಳಿಸುತ್ತಾ ತಮ್ಮ ಕಾಲೇಜು ಜೀವನದ ಬಗ್ಗೆ ಮೆಲುಕು ಹಾಕಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಡಾ. ಚಂದ್ರಾವತಿ ಶೆಟ್ಟಿ ಅವರು ನಿರ್ವಹಿಸಿದರು.
ಕಾರ್ಯಕ್ರಮದಲ್ಲಿ ಕಾಲೇಜಿನ ನಿವೃತ್ತ ಪ್ರಾಂಶುಪಾಲರಾದ ಕೆ. ರಾಧಾಕೃಷ್ಣ ಶೆಟ್ಟಿ, ಡಾ. ದಿನೇಶ ಹೆಗ್ಡೆ, ಗ್ರಾಮದ ನಾಗರಿಕರಾದ ರಾಜೇಶ ಹೆಬ್ಬಾರ್, ಪ್ರಸಾದ್ ಶೆಟ್ಟಿ, ಕೋಟಿ ಪೂಜಾರಿ, ರತ್ನಾಕರ ಶೆಟ್ಟಿ, ಗಣೇಶ ಪೂಜಾರಿ, ಪ್ರಕಾಶ್ ಕುಲಾಲ್ ಉಪಸ್ಥಿತರಿದ್ದರು.
ಎನ್.ಎಸ್.ಎಸ್. ಘಟಕ ಸಂಯೋಜಕರಾದ ರಾಘವೇಂದ್ರ ಶೆಟ್ಟಿ ಎಸ್. ಪ್ರಾಸ್ತಾವಿಕ ಮಾತನಾಡಿದರು. ಉಪನ್ಯಾಸಕ ರಾಘವೇಂದ್ರ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು. ವಿದ್ಯಾರ್ಥಿನಿ ಕೀರ್ತಿಕಾ ವಂದಿಸಿದರು.