ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ಸಾಗರ್ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಬೈಂದೂರು ಇದರ ಪ್ರಧಾನ ಕಛೇರಿಯಲ್ಲಿ ಆರಂಭಿಸಲಾದ ಇ –ಸ್ಟಾಂಪ್ ಪೇಪರ್ ಸೌಲಭ್ಯವನ್ನು ಶುಕ್ರವಾರ ಸಂಸ್ಥೆಯ ಅಧ್ಯಕ್ಷರು ಹಾಗೂ ಮಾಜಿ ಶಾಸಕರಾದ ಕೆ. ಗೋಪಾಲ ಪೂಜಾರಿ ಅವರು ಉದ್ಘಾಟಿಸಿದರು.

ವೇಳೆ ನಿರ್ದೇಶಕರಾದ ಎಸ್. ರಾಜು ಪೂಜಾರಿ, ಕೆ. ಶಂಕರ ಪೂಜಾರಿ, ಚಿಕ್ಕು ಪೂಜಾರಿ, ಯು. ಕೇಶವ ಪೂಜಾರಿ, ಕಲ್ಪನಾ ಭಾಸ್ಕರ್, ಉದಯ ಜಿ. ಪೂಜಾರಿ, ಶೇಖರ ಪೂಜಾರಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಗಣೇಶ್ ಬಿ. ಪೂಜಾರಿ ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.