ಗಿಳಿಯಾರು ಶಾಂಭವಿ ಶಾಲೆ: ಶತಮಾನೋತ್ಸವ ಸಂಭ್ರಮಾಚರಣೆಗೆ ಚಾಲನೆ

Click Here

Call us

Call us

Call us

ಕುಂದಾಪ್ರ ಡಾಟ್‌ ಕಾಂ ಸುದ್ದಿ.
ಕೋಟ:
ಲಕ್ಷಾಂತರ ವಿದ್ಯಾರ್ಥಿಗಳನ್ನು ಈ ಸಮಾಜಕ್ಕೆ ರೂಪಿಸಿಕೊಟ್ಟ ಹಿರಿಮೆ ಈ ಶಾಂಭವಿ ಶಾಲೆಗೆ ದೊರಕಬೇಕಿದೆ ಎಂದು ಕೋಟದ ಮಣೂರು ಗೀತಾನಂದ ಫೌಂಡೇಶನ್ ಪ್ರವರ್ತಕ ಆನಂದ್ ಸಿ. ಕುಂದರ್ ನುಡಿದರು.

Call us

Click Here

ಅವರು ಶನಿವಾರ ಕೋಟದ ಗಿಳಿಯಾರು ಶಾಂಭವಿ ವಿದ್ಯಾದಾಯಿನಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಇದರ ಶತಮಾನೋತ್ಸವ ಸಂಭ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು. ಆ ಕಾಲಘಟ್ಟದಲ್ಲೆ ಶೈಕ್ಷಣಿಕ ಕ್ಷೇತ್ರದ ಭಾಷ್ಯ ಬರೆದ ಈ ಶಾಲೆ ಗತವೈಭವವನ್ನು ಮರುಕಳಿಸಬೇಕಿದೆ ಅಲ್ಲದೆ ಇದರ ಉಳಿವಿಗೆ ಶಾಲಾ ಹಳೆ ವಿದ್ಯಾರ್ಥಿಗಳು, ಗ್ರಾಮಸ್ಥರು ಮುಂದಡಿ ಇಡಬೇಕಿದೆ ಎಂದರು.

ಶಾಲಾ ಆಡಳಿತ ಮಂಡಳಿಯ ಅಧ್ಯಕ್ಷ ಕೆ. ರಾಜಾರಾಮ್ ಐತಾಳ್ ಅವರು ಅಧ್ಯಕ್ಷತೆ ವಹಿಸಿದ್ದರು.

ಬ್ರಹ್ಮಾವರ ಕ್ಷೇತ್ರ ಶಿಕ್ಷಣಾಧಿಕಾರಿ ಶಬನಾ ಅಜುಂ ಅರಳು ಹಸ್ತ ಪತ್ರಿಕೆ ಬಿಡುಗಡೆಗೊಳಿಸಿದರು. ಕೋಟ ಗ್ರಾಮ ಪಂಚಾಯತ್ ಅಧ್ಯಕ್ಷೆ ಜ್ಯೋತಿ ಬಿ. ಶೆಟ್ಟಿ ಹಾಗೂ ಕೋಟತಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷ ಸತೀಶ್ ಬಾರಕೆರೆ ವಿವಿಧ ಸ್ಪರ್ಧೆಗಳಲ್ಲಿ ಭಾಗವಹಿಸಿದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಿದರು.

ಇದೇ ವೇಳೆ ಶಾಲಾ ಹಿಂದಿನ ವಿದ್ಯಾರ್ಥಿಯಾದ ಗಣೇಶ್ ಪೂಜಾರಿ ಅವರು ಶಾಲೆಗೆ ಕುರ್ಚಿಯನ್ನು ಹಸ್ತಾಂತರಿಸಿದರು. ಶಾಲಾ ಆಡಳಿತ ಮಂಡಳಿಯ ವತಿಯಿಂದ ಶಾಲೆಗೆ ಉಚಿತ ತರಕಾರಿ ಒದಗಿಸುತ್ತಿರುವ ಮಂಜುನಾಥ ಪೂಜಾರಿ, ಕುರ್ಚಿ ನೀಡಿದ ಗಣೇಶ್ ಪೂಜಾರಿ ಅವರನ್ನು ಗುರುತಿಸಿ ಗೌರವಿಸಲಾಯಿತು.

Click here

Click here

Click here

Call us

Call us

ಅತಿ ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳಿಗೆ ಗೀತಾನಂದ ಫೌಂಡೇಶನ್ ಕೊಡಮಾಡಿದ ವಿದ್ಯಾರ್ಥಿವೇತನವನ್ನು ನೀಡಲಾಯಿತು.

ವಿವಿಧ ಸ್ತರಗಳಲ್ಲಿ ಗುರುತಿಸಿಕೊಂಡ ಪ್ರತಿಭೆಗಳಿಗೆ ದಾನಿಗಳು ಕೊಡಮಾಡಿದ  ದತ್ತಿನಿಧಿಗಳನ್ನು ನೀಡಲಾಯಿತು.

ಮುಖ್ಯ ಅಭ್ಯಾಗತರಾಗಿ ಕ್ಷೇತ್ರ ಶಿಕ್ಷಣ ಸಂಯೋಜಕ ಪ್ರಕಾಶ್ ಬಿ.ಬಿ, ಸಿಆರ್ ಪಿ ಸವಿತಾ ಆಚಾರ್, ಕೋಟ ಗ್ರಾಮಪಂಚಾಯತ್ ಸದಸ್ಯ ಅಜಿತ್ ದೇವಾಡಿಗ, ಶಾಲಾ ಆಡಳಿತ ಸಂಚಾಲಕ ಸಚಿನ್ ಕಾರಂತ್, ಹಿಂದಿನ ವಿದ್ಯಾರ್ಥಿ ಸಂಘದ ಅಧ್ಯಕ್ಷ ಸದಾನಂದ ಗಿಳಿಯಾರು, ಶಾಲಾ ಎಸ್‌ಡಿಎಂಸಿ ಅಧ್ಯಕ್ಷ ರವೀಂದ್ರ ಜೋಗಿ ಉಪಸ್ಥಿತರಿದ್ದರು.

ಶಾಲಾ ಮುಖ್ಯ ಶಿಕ್ಷಕ ದಿವಾಕರ್ ರಾವ್ ಸ್ವಾಗತಿಸಿದರು. ಕಾರ್ಯಕ್ರಮವನ್ನು ವಿನೋದ ವಿಜಯ್,ಸರಿತಾ ಪ್ರಸಾದ್ ನಿರ್ವಹಿಸಿದರು.

Leave a Reply