ಗಂಗೊಳ್ಳಿ: ವಿದ್ಯುತ್‌ ಕಂಬಕ್ಕೆ ಬೈಕ್‌ ಢಿಕ್ಕಿಯಾಗಿ ಸಹ ಸವಾರ ಸಾವು

Click Here

Call us

Call us

Call us

ಕುಂದಾಪ್ರ ಡಾಟ್‌ ಕಾಂ ಸುದ್ದಿ.
ಗಂಗೊಳ್ಳಿ:
ವಿದ್ಯುತ್‌ ಕಂಬಕ್ಕೆ ಬೈಕ್‌ ಢಿಕ್ಕಿಯಾಗಿ ಸಹ ಸವಾರ ಸಾವನ್ನಪ್ಪಿದ ಘಟನೆ ತ್ರಾಸಿ -ಗಂಗೊಳ್ಳಿ ಮುಖ್ಯ ರಸ್ತೆಯ ಕೊಡಪಾಡಿಯ ಮಾರಿಕಾಂಬಾ ದೇವಸ್ಥಾನದ ಬಳಿ ನಡೆದಿದೆ. ಸಹ ಸವಾರ ಮೊಹಮ್ಮದ್ ಕೈಸ್‌ ಕಿದಿಯೂರು (17) ಸಾವನ್ನಪ್ಪಿದವರು.

Call us

Click Here

ಅವರು ಆಸಾಸ್ ಅವರ ಬೈಕ್‌ನಲ್ಲಿ ಸಂಚರಿಸುತ್ತಿದ್ದ ವೇಳೆ ಬೈಕ್ ‌ ನಿಯಂತ್ರಣ ತಪ್ಪಿ, ರಸ್ತೆ ಪಕ್ಕದಲ್ಲಿದ್ದ ವಿದ್ಯುತ್‌ ಕಂಬಕ್ಕೆ ಢಿಕ್ಕಿ ಹೊಡೆದಿದ್ದ ಪರಿಣಾಮ ಸಹ ಸವಾರ ಮೊಹಮ್ಮದ್ ‌ ಕೈಸ್‌ ಅವರ ತಲೆಗೆ ಗಂಭೀರ ಗಾಯವಾಗಿದ್ದು, ಅವರನ್ನು ಕುಂದಾಪುರದ ಖಾಸಗಿ ಆಸ್ಪತ್ರೆಗೆ ಕರೆ ತರಲಾಗಿತ್ತು. ಅಲ್ಲಿ ಪರೀಕ್ಷಿಸಿದ ವೈದ್ಯರು ಅದಾಗಲೇ ಸಾವನ್ನಪ್ಪಿರುವುದಾಗಿ ತಿಳಿಸಿದ್ದಾರೆ. ಬೈಕ್ ಸವಾರ ಆನಾಸ್ ಸಹ ಗಾಯಗೊಂಡಿದ್ದು, ಕುಂದಾಪುರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಈ ಬಗ್ಗೆ ಗಂಗೊಳ್ಳಿ ಪೋಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply