ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಕೋಟೇಶ್ವರ ಬಾಂಡ್ಯಾ ಎಜುಕೇಶನಲ್ ಟ್ರಸ್, ವಕ್ವಾಡಿ ಗುರುಕುಲ ಪದವಿಪೂರ್ವ ಕಾಲೇಜಿನ 46 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, 46 ವಿದ್ಯಾರ್ಥಿಗಳು ಉತೀರ್ಣರಾಗಿ ಶೇ.100 ಫಲಿತಾಂಶ ಬಂದಿದೆ. 15 ಮಂದಿ ವಿಶಿಷ್ಟ ಶ್ರೇಣಿ ಮತ್ತು 31 ವಿದ್ಯಾರ್ಥಿಗಳು ಪ್ರಥಮ ದರ್ಜೆಯಲ್ಲಿ ಉತೀರ್ಣರಾಗಿದ್ದಾರೆಂದು ಕಾಲೇಜಿನ ಪ್ರಾಂಶುಪಾಲ ಅವಿನಾಶ್ ಅವರು ತಿಳಿಸಿದ್ದಾರೆ.
ಕಾಲೇಜಿನ ವಿಜ್ಞಾನ ವಿಭಾಗದ ಆಪ್ತ ಎಚ್ ಆರ್ (584), ಹಿಮಾನಿ ಡಿ.ಎಮ್(575), ಕೆ.ಅಮೂಲ್ಯ ಶೇಟ್(546) ವಾಣಿಜ್ಯ ವಿಭಾಗದ ಸಿಯಾ ಎಸ್ ಶೆಟ್ಟಿ (579), ಕಾವ್ಯ (572), ವೈಭವ್ ಜಿ (546) ಅಂಕ ಗಳಿಸಿದ್ದಾರೆ.