ಕುಂದಾಪ್ರ ಡಾಟ್ ಕಾಂ ಸುದ್ದಿ.
ಗಂಗೊಳ್ಳಿ: ಬಿಲ್ಲವರ ಹಿತರಕ್ಷಣಾ ವೇದಿಕೆ ಗಂಗೊಳ್ಳಿ ಮತ್ತು ಕಲಾಶ್ರೀ ಶಿಕ್ಷಣ ಪ್ರೇಮಿಗಳ ಬಳಗ ಗಂಗೊಳ್ಳಿ ಇವರ ಜಂಟಿ ಆಶ್ರಯದಲ್ಲಿ ವಿಶ್ವ ಮಹಿಳಾ ದಿನಾಚರಣೆ ಕಾರ್ಯಕ್ರಮವು ಗಂಗೊಳ್ಳಿಯ ಡಾ. ಅಂಬೇಡ್ಕರ್ ಭವನದಲ್ಲಿ ಮಂಗಳವಾರ ಜರಗಿತು.
ಗಂಗೊಳ್ಳಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಜಯಂತಿ ಖಾರ್ವಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಯಾಗಿದ್ದ ಕುಂದಾಪುರ ತಾಲೂಕು ಶಿಶು ಅಭಿವೃದ್ಧಿ ಯೋಜನಾಧಿಕಾರಿ ಉಮೇಶ ಟಿ. ಎಲ್. ಶುಭಾ ಶಂಸನೆಗೈದರು.
ಗಂಗೊಳ್ಳಿ ಗ್ರಾಮದ ಅಂಗನವಾಡಿ ಕಾರ್ಯಕರ್ತೆಯರಾದ ಫಿಲೋಮಿನಾ ಫೆರ್ನಾಂಡಿಸ್, ಶೇಷಮ್ಮ, ಶೋಭಾ ಎಸ್., ಕಮಲಾ, ರೇಖಾ ಕೆ., ಸಂಗೀತಾ, ಸಹನಾ ಹಾಗೂ ನಿಖಿತಾ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.
ಗಂಗೊಳ್ಳಿ ಬಿಲ್ಲವರ ಹಿತರಕ್ಷಣಾ ವೇದಿಕೆ ಅಧ್ಯಕ್ಷ ಗೋಪಾಲ ಪೂಜಾರಿ, ಅಂಗನವಾಡಿ ಮೇಲ್ವಿಚಾರಕಿ ರೇಖಾ ಕೆ., ಸರಕಾರಿ ಕಿರಿಯ ಪ್ರಾಥಮಿಕ (ಹವೇ) ಶಾಲೆ ಮುಖ್ಯ ಶಿಕ್ಷಕ ಗುರುರಾಜ್ ಆಚಾರ್ಯ, ಸಹಶಿಕ್ಷಕ ಯೋಗೀಶ್, ಜಿ.ವಿ.ಆರ್.ಲಕ್ಷ್ಮಣ ಪೂಜಾರಿ, ಎಸ್‌ಡಿಎಂಸಿ ಅಧ್ಯಕ್ಷೆ ಸವಿತಾ ಖಾರ್ವಿ, ಅರ್ಚನಾ ಮಹಿಳಾ ಮಂಡಲ ಅಧ್ಯಕ್ಷೆ ಜ್ಯೋತಿ ಆನಂದ, ಸುಮಿತ್ರಾ ಈಶ್ವರ, ಈಶ್ವರ ಜಿ. ಮತ್ತಿತರರು ಉಪಸ್ಥಿತರಿದ್ದರು.
ಶ್ರೀಮತಿ ಸ್ವಾಗತಿಸಿದರು. ಫಿಲೋಮಿನಾ ಫೆರ್ನಾಂಡಿಸ್ ಕಾರ್ಯಕ್ರಮ ನಿರ್ವಹಿಸಿದರು. ಸುಮಿತ್ರಾ ಜಿ. ವಂದಿಸಿದರು.















