ಕುಂದಾಪ್ರ ಡಾಟ್ ಕಾಂ ಸುದ್ದಿ.
ಗಂಗೊಳ್ಳಿ: ಇಲ್ಲಿನ ಖಾರ್ವಿಕೇರಿಯ ಕೊಂಚಾಡಿ ರಾಧಾ ಶೆಣೈ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಅಮೃತ ಮಹೋತ್ಸವ-2025 ಸಮಾರಂಭದ ಬಹುಮಾನ ವಿತರಣಾ ಕಾರ್ಯಕ್ರಮ ಗಂಗೊಳ್ಳಿ ಖಾರ್ವಿಕೇರಿಯ ಶ್ರೀ ಮಹಾಂಕಾಳಿ ಅಮ್ಮನವರ ದೇವಸ್ಥಾನದ ವಠಾರದಲ್ಲಿ ಗುರುವಾರ ನಡೆಯಿತು.
ಗಂಗೊಳ್ಳಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಜಯಂತಿ ಖಾರ್ವಿ ಧ್ವಜಾರೋಹಣ ನೆರವೇರಿಸಿದರು. ಶಾಲೆಯ ಎಸ್‌ಡಿಎಂಸಿ ಅಧ್ಯಕ್ಷ ರವಿಶಂಕರ ಖಾರ್ವಿ ಅಧ್ಯಕ್ಷತೆ ವಹಿಸಿದ್ದರು. ಇದೇ ಸಂದರ್ಭ ಶಾಲೆಯ ಕಟ್ಟಡ ನಿರ್ಮಾಣಕ್ಕೆ ಸಹಕರಿಸಿದ ಉದ್ಯಮಿ ಎಚ್. ಗಣೇಶ ಕಾಮತ್ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.
ಗ್ರಾಪಂ ಉಪಾಧ್ಯಕ್ಷ ತಬ್ರೇಜ್, ಸದಸ್ಯರಾದ ಸುರೇಖಾ ಕಾನೋಜಿ, ಶ್ರೀನಾಥ ಖಾರ್ವಿ, ಗಂಗೊಳ್ಳಿ ವಲಯದ ಸಮೂಹ ಸಂಪನ್ಮೂಲ ವ್ಯಕ್ತಿ ಪ್ರದೀಪ್ ಕುಮಾರ್ ಶೆಟ್ಟಿ ಶುಭ ಹಾರೈಸಿದರು. ಮಡಿ ಲೈಟ್‌ಹೌಸ್ ಹೋಳಿ ಉತ್ಸವ ಸಮಿತಿ ಅಧ್ಯಕ್ಷ ಲಿಂಗನ ರವಿ ಖಾರ್ವಿ, ಖಾರ್ವಿಕೇರಿ ಮಹಾಂಕಾಳಿ ಮಠ ಗಣೇಶೋತ್ಸವ ಸಮಿತಿ ಉಪಾಧ್ಯಕ್ಷ ತಾರ‍್ಯ ಕೃಷ್ಣ ಖಾರ್ವಿ, ಅಮೃತ ಮಹೋತ್ಸವ ಸಮಿತಿ ಅಧ್ಯಕ್ಷ ದಿವಾಕರ ಖಾರ್ವಿ, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಲಕ್ಷ್ಮಣ ಖಾರ್ವಿ, ಶಾಲೆಯ ಪ್ರಭಾರ ಮುಖ್ಯ ಶಿಕ್ಷಕಿ ಯಶೋಧಾ, ಶಾಲಾ ವಿದ್ಯಾರ್ಥಿ ನಾಯಕಿ ಅಂಜನಾ, ಶಾಲೆಯ ಶಿಕ್ಷಕಿಯರು, ಮತ್ತಿತರರು ಉಪಸ್ಥಿತರಿದ್ದರು.










