ಕ್ರಿಯೇಟಿವ್ ಪ.ಪೂ ಕಾಲೇಜಿನಲ್ಲಿ ಡಾ. ಬಾಬಾ ಸಾಹೇಬ್ ಅಂಬೇಡ್ಕರ್‌ ಅವರ 134ನೇ ಜನ್ಮದಿನಾಚರಣೆ

Click Here

Call us

Call us

Call us

ಕುಂದಾಪ್ರ ಡಾಟ್‌ ಕಾಂ ಸುದ್ದಿ.
ಕುಂದಾಪುರ:
ಇಲ್ಲಿನ ಕಾರ್ಕಳ ಕ್ರಿಯೇಟಿವ್ ಕಾಲೇಜಿನಲ್ಲಿ ಸಂವಿಧಾನ ಶಿಲ್ಪಿ, ಭಾರತ ರತ್ನ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರ 134ನೇ ಜನ್ಮದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಯಿತು.

Call us

Click Here

ಸಂಸ್ಥೆಯ ಸಹ ಸಂಸ್ಥಾಪಕರಾದ ಡಾ. ಗಣನಾಥ ಶೆಟ್ಟಿ ಮತ್ತು ಸಂಸ್ಥೆಯ ಪ್ರಾಂಶುಪಾಲರು ಹಾಗೂ ಸಹ ಸಂಸ್ಥಾಪಕರಾದ ವಿದ್ವಾನ್ ಗಣಪತಿ ಭಟ್ ಅಂಬೇಡ್ಕರ್ aವರ ಭಾವಚಿತ್ರಕ್ಕೆ ಪುಷ್ಪರ್ಚನೆ ಮಾಡುವುದರ ಮೂಲಕ ಮಹಾ ನಾಯಕನಿಗೆ ನಮನವನ್ನು ಸಲ್ಲಿಸಿದರು.

ಈ ಸಂದರ್ಭದಲ್ಲಿ ಉಪನ್ಯಾಸಕರಾದ ವಿನಾಯಕ ಜೋಗ್‌ ಅವರು ಅಂಬೇಡ್ಕರ್ ಅವರ ಹೋರಾಟ, ಸಾಧನೆ ಮತ್ತು ಸಂವಿಧಾನ ರಚನೆಯಲ್ಲಿ ಅವರ ಪಾತ್ರದ ಕುರಿತು ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತುಗಳನ್ನಾಡಿದರು.

ಈ ಸಂದರ್ಭದಲ್ಲಿ ಬೋಧಕ ಹಾಗೂ ಬೋಧಕೇತರ ಸಿಬ್ಬಂದಿಗಳು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ಉಪನ್ಯಾಸಕರಾದ ಸಂತೋಷ್ ನಿರೂಪಿಸಿ, ವಂದಿಸಿದರು.

Leave a Reply