ಕುಂದಾಪ್ರ ಡಾಟ್ ಕಾಂ ಸುದ್ದಿ.
ಕೋಟ: ಕಾರು ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ಮಹಿಳೆ ಸಾವನ್ನಪ್ಪಿದ ಘಟನೆ ಇತ್ತೀಚಿಗೆ ಮಣೂರು ರಾಜಲಕ್ಷ್ಮೀ ಸಭಾಂಗಣದ ಬಳಿ ಸಂಭವಿಸಿದೆ. ಮೃತ ಪಟ್ಟ ಮಹಿಳೆ ಗಿಳಿಯಾರು ನಿವಾಸಿ ಗಿರಿಜಾ ಎಂದು ಗುರುತಿಸಲಾಗಿದೆ
ಇವರು ತಮ್ಮ ಮನೆಯಾದ ಹೊನ್ನಾರಿಯಿಂದ ತಾಯಿ ಮನೆಯಾದ ಮಣೂರಿಗೆ ತೆರಳಲು ಸಭಾ ಭವನದ ಎದುರು ರಸ್ತೆ ದಾಟುತ್ತಿದ್ದಾಗ ಉಡುಪಿ ಕಡೆಯಿಂದ ಕುಂದಾಪುರ ಕಡೆಗೆ ಚಲಿಸುತ್ತಿದ್ದ ಕಾರು ಡಿಕ್ಕಿ ಹೊಡೆಯಿತು.
ಪರಿಣಾಮ ರಸ್ತೆಗೆ ಬಿದ್ದ ಅವರ ತಲೆಗೆ ತೀವ್ರ ಸ್ವರೂಪದ ರಕ್ತಗಾಯವಾಗಿದ್ದು ಕೂಡಲೇ ಅವರನ್ನು ಜೀವನ್ ಮಿತ್ತ ಆ್ಯಂಬುಲೆನ್ಸ್ ನಲ್ಲಿ ಚಿಕಿತ್ಸೆಗಾಗಿ ಕುಂದಾಪುರ ತಾಲೂಕು ಸರಕಾರಿ ಆಸ್ಪತ್ರೆಗೆ ಕರೆದೊಯ್ದಿದ್ದು ಪರೀಕ್ಷಿಸಿದ ವೈದ್ಯರು ಮೃತಪಟ್ಟಿರುವುದಾಗಿ ತಿಳಿಸಿರುತ್ತಾರೆ.
ಈ ಬಗ್ಗೆ ಕೋಟ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.