ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಮಂಗಳೂರು ವಿಶ್ವವಿದ್ಯಾನಿಲಯ ಅಂತರ್-ಕಾಲೇಜು ಮಟ್ಟದ ವಾರ್ಷಿಕ ಸಂಚಿಕೆ ಸ್ಪರ್ಧೆಯಲ್ಲಿ ಗಮನ ಸೆಳೆದ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ 2023-24ನೇ ಸಾಲಿನ ವಾರ್ಷಿಕ ಸಂಚಿಕೆ ‘ಶಿಖರʼವನ್ನು ಕೋಟ ವಿವೇಕ ಪದವಿ ಪೂರ್ವ ಕಾಲೇಜಿನ ನಿವೃತ್ತ ಉಪನ್ಯಾಸಕ ಶ್ರೀನಿವಾಸ ಸೋಮಯಾಜಿ ಅವರು ಅನಾವರಣಗೊಳಿಸಿ, ಶುಭ ಹಾರೈಸಿದರು.
ಕಾಲೇಜಿನ ಪ್ರಾಂಶುಪಾಲರಾದ ಕೆ. ಉಮೇಶ್ ಶೆಟ್ಟಿ ಅವರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು.
ಉಪ-ಪ್ರಾಂಶುಪಾಲರಾದ ಡಾ| ಚೇತನ್ ಶೆಟ್ಟಿ ಕೋವಾಡಿ ಪ್ರಾಸ್ತಾವಿಕ ಮಾತುಗಳನ್ನಾಡಿದರು. ವಾಣಿಜ್ಯ ವಿಭಾಗದ ಪ್ರಾಧ್ಯಾಪಕಿ ದೀಪಾ ಪೂಜಾರಿ ಅತಿಥಿಗಳನ್ನು ಪರಿಚಯಿಸಿದರು. ಗಣಕ ವಿಜ್ಞಾನ ವಿಭಾಗದ ಪ್ರಾಧ್ಯಾಪಕ ಹರೀಶ್ ಕಾಂಚನ್ ನಿರೂಪಿಸಿದರು. ಇಂಗ್ಲೀಷ್ ವಿಭಾಗದ ಪ್ರಾಧ್ಯಾಪಕಿ ರವಿನಾ ಸಿ. ಪೂಜಾರಿ ಸ್ವಾಗತಿಸಿ, ಶಿಖರ ವಾರ್ಷಿಕ ಸಂಚಿಕೆಯ ನಿರ್ವಾಹಕ ಸಂಪಾದಕರಾದ ಪ್ರವೀಣ್ ಮೊಗವೀರ ಗಂಗೊಳ್ಳಿ ವಂದಿಸಿದರು.










