ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ಇತಿಹಾಸ ಪ್ರಸಿದ್ಧ ಬೈಂದೂರು ಮಹತೋಭಾರ ಶ್ರೀ ಸೇನೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಸದಸ್ಯರಾಗಿ ಬಿ. ದೊಟ್ಟಯ್ಯ ಪೂಜಾರಿ ಅವರು ನೇಮಕಗೊಂಡಿದ್ದಾರೆ.
ವೃತ್ತಿಯಲ್ಲಿ ಛಾಯಾಗ್ರಾಹಕರಾಗಿರುವ ಬಿ. ದೊಟ್ಟಯ್ಯ ಪೂಜಾರಿ ಅವರು ಸೌತ್ ಕೆನರಾ ಪೋಟೋಗ್ರಾಫರ್ಸ ಅಸೋಸಿಯೇಶನ್ ಕುಂದಾಪುರ- ಬೈಂದೂರು ವಲಯದ ನಿಕಟಪೂರ್ವ ಅಧ್ಯಕ್ಷರಾಗಿದ್ದಾರೆ. ಯಡ್ತರೆ ಬಿಲ್ಲವ ಸಂಘದ ಅಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದರು.










