Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಸುಜ್ಞಾನ ಎಜುಕೇಶನಲ್ ಟ್ರಸ್ಟ್ ನ ಬೇಸಿಗೆ ಶಿಬಿರಕ್ಕೆ ಚಾಲನೆ. ದಾಖಲೆಯ 1064 ವಿದ್ಯಾರ್ಥಿಗಳು ಭಾಗಿ
    ಊರ್ಮನೆ ಸಮಾಚಾರ

    ಸುಜ್ಞಾನ ಎಜುಕೇಶನಲ್ ಟ್ರಸ್ಟ್ ನ ಬೇಸಿಗೆ ಶಿಬಿರಕ್ಕೆ ಚಾಲನೆ. ದಾಖಲೆಯ 1064 ವಿದ್ಯಾರ್ಥಿಗಳು ಭಾಗಿ

    Updated:21/04/2025No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕುಂದಾಪುರ:
    ಶಿಕ್ಷಣ ಎಂದರೆ ಕೇವಲ ಅಕ್ಷರ ಅಭ್ಯಾಸ ಅಲ್ಲ. ಕ್ರೀಡೆ, ಕಲೆ ಮುಂತಾದ ಚಟುವಟಿಕೆಗಳು ಅದರ ಭಾಗವಾದರೆ ಮಾತ್ರ ಅವರೊಳಗಿನ ಪ್ರತಿಭೆಗಳು ಹೊರಹೊಮ್ಮಲು ಸಾಧ್ಯವಾಗುತ್ತದೆ. ಮಕ್ಕಳ ವ್ಯಕ್ತಿತ್ವ ವಿಕಸನಕ್ಕೆ ಇಂತಹ ಬೇಸಿಗೆ ಶಿಬಿರಗಳು ಹೆಚ್ಚು ಸಹಕಾರಿಯಾಗುತ್ತದೆ. ಮಕ್ಕಳು ರಜಾದಿನಗಳ ಸಮಯವನ್ನ ಸದುಪಯೋಗ ಪಡಿಸಿಕೊಂಡು ಇನ್ನಷ್ಟು ಕ್ರಿಯಾಶೀಲರಾಗಲು ಬೇಸಿಗೆ ಶಿಬಿರಗಳು ಉತ್ತಮ ಆಯ್ಕೆ ಆಗಿರುತ್ತದೆ ಎಂದು ಮಾಜಿ ಸಚಿವ ಕೆ. ಜಯಪ್ರಕಾಶ್ ಹೆಗ್ಡೆ ಹೇಳಿದರು.

    Click Here

    Call us

    Click Here

    ಅವರು ಇಲ್ಲಿನ ಕೋಟೇಶ್ವರ ಯಡಾಡಿ  -ಮತ್ಯಾಡಿ ಸುಜ್ಞಾನ ಪದವಿ ಪೂರ್ವ ಕಾಲೇಜು ಮತ್ತು ವಿದ್ಯಾರಣ್ಯ ಆಂಗ್ಲ ಮಾಧ್ಯಮ ಶಾಲೆ ಆಯೋಜಿಸಿದ ಬೇಸಿಗೆ ಶಿಬಿರ  ಮಂಥನ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಮಕ್ಕಳಿಗೆ ಶಾಲಾ ಮಟ್ಟದಲ್ಲಿಯೇ ದುಶ್ಚಟಗಳಿಂದ, ಕೆಟ್ಟ ಹವ್ಯಾಸಗಳಿಂದ ದೂರವಿರಿಸುವ ಅರಿವು ಕಾರ್ಯಕ್ರಮಗಳನ್ನ ಆಯೋಜಿಸಿದಾಗ ಉತ್ತಮ ಸಮಾಜದ ನಿರ್ಮಾಣ ಸಾಧ್ಯವಾಗುತ್ತದೆ. ಇಂತಹ ಬೇಸಿಗೆ ಶಿಬಿರಗಳು ಮಕ್ಕಳು ಉತ್ತಮ ಪ್ರಜೆಯಾಗಿ ರೂಪುಗೊಳ್ಳಲು ಸಹಕಾರಿ ಎಂದರು.

    ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಉಪಸ್ಥಿತರಿದ್ದ ಖ್ಯಾತ ಚಲನಚಿತ್ರ ನಟಿ ಸಂಗೀತ ಶೃಂಗೇರಿ ಮಾತನಾಡುತ್ತಾ ʼನಾವೆಲ್ಲರೂ ದ್ವೇಷವನ್ನ ಬಿಟ್ಟು ಮನುಷ್ಯತ್ವಕ್ಕೆ ಹೆಚ್ಚು ಬೆಲೆ ಕೊಟ್ಟು ಬದುಕುವ, ಮಾನವೀಯ ಮೌಲ್ಯಗಳಿಗೆ ಹೆಚ್ಚು ಮಾನ್ಯತೆ ದೊರೆಯುವ ಸಮಾಜ ನಮ್ಮದಾಗಬೇಕು. ಮಕ್ಕಳಿಗೆ ಬಾಲ್ಯದಲ್ಲಿಯೇ ಮಾನವೀಯ ಮೌಲ್ಯಗಳನ್ನು ಕಲಿಸಲು ಬೇಸಿಗೆ ಶಿಬಿರಗಳು ಹೆಚ್ಚು ಸಹಕಾರಿಯಾಗುತ್ತದೆ. ಪ್ರತಿಯೊಬ್ಬ ಸಾಧಕ ವ್ಯಕ್ತಿಯ ಯಶಸ್ಸಿನ ಹಿಂದೆ ಅವರ ಅವಿರತ ಶ್ರಮ ಮತ್ತು ಪ್ರಯತ್ನ ಅಡಗಿರುತ್ತದೆ. ನಾವು ಸೋಲು ಮತ್ತು ಗೆಲುವುಗಳನ್ನು ಸಮಾನ ಮನಸ್ಸಿನಿಂದ ಸ್ವೀಕರಿಸಿ ಯಶಸ್ಸು ಪಡೆಯಲು ಪ್ರಯತ್ನಿಸಿದರೆ ಸಾಧಕರಾಗಬಹುದುʼ ಎಂದರು.

    ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಸುಜ್ಞಾನ ಎಜುಕೇಶನಲ್ ಟ್ರಸ್ಟ್ ನ ಅಧ್ಯಕ್ಷರಾದ ಡಾ. ರಮೇಶ್ ಶೆಟ್ಟಿ ಮಾತನಾಡುತ್ತಾ “ನಮ್ಮ ಸಂಸ್ಥೆ ಕಳೆದ ಮೂರು ವರ್ಷಗಳಿಂದ ಯಶಸ್ವಿಯಾಗಿ ಬೇಸಿಗೆ ಶಿಬಿರಗಳನ್ನು ಈ ಪರಿಸರದ ಸಾವಿರಾರು ಮಕ್ಕಳು ಅದರ ಪ್ರಯೋಜನವನ್ನು ಪಡೆದಿದ್ದಾರೆ. ಈ ಬೇಸಿಗೆ ಶಿಬಿರ ‘ಮಂಥನ’ದ ಮೂಲಕ ಮಕ್ಕಳಿಗೆ ವಿಶೇಷ ತರಬೇತಿಗಳನ್ನು ನೀಡಿ ಮಕ್ಕಳಲ್ಲಿರುವ ಸೂಕ್ತ ಪ್ರತಿಭೆಯನ್ನು ಹೊರತರಬೇಕೆನ್ನುವುದು ನಮ್ಮ ಉದ್ದೇಶ . ಮಕ್ಕಳು ಶಿಬಿರದ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಪಾಲ್ಗೊಂಡಾಗ ಮಕ್ಕಳ ವ್ಯಕ್ತಿತ್ವ ವಿಕಸನ ಹೊಂದಲು ಸಾಧ್ಯವಾಗುತ್ತದೆ” ಎಂದರು .

    ಕಾರ್ಯಕ್ರಮದಲ್ಲಿ ಪ್ರಥಮ ದರ್ಜೆ ಗುತ್ತಿಗೆದಾರರಾದ ಅರುಣ್ ಕುಮಾರ್ ಹೆಗ್ಡೆ, ಸುಜ್ನಾನ ಎಜುಕೇಶನಲ್ ಟ್ರಸ್ಟ್ ನ ಕಾರ್ಯದರ್ಶಿಗಳಾದ ಪ್ರತಾಪ್ ಶೆಟ್ಟಿ ಉಪಸ್ಥಿತರಿದ್ದರು.

    Click here

    Click here

    Click here

    Click Here

    Call us

    Call us

    ಬೇಸಿಗೆ ಶಿಬಿರದಲ್ಲಿ 1064 ಮಕ್ಕಳು ವಿದ್ಯಾರ್ಥಿಗಳು ಭಾಗವಹಿಸಿದರು, ಉದ್ಘಾಟನಾ ಸಮಾರಂಭದಲ್ಲಿ 2500 ಅಧಿಕ ಪೋಷಕರು ಅವರ ಮಕ್ಕಳ ಜೊತೆ ಭಾಗವಹಿಸಿದ್ದರು.

    ಸುಜ್ಞಾನ ಎಜುಕೇಶನಲ್ ಟ್ರಸ್ಟ್ ನ ಖಜಾಂಚಿ ಭರತ್ ಶೆಟ್ಟಿ ಸ್ವಾಗತಿಸಿ, ಪ್ರಾಸ್ತಾವಿಕ ನುಡಿಗಳನ್ನಾ ಆಡಿದರು. ಕನ್ನಡ ಶಿಕ್ಷಕ ಸಂತೋಷ್ ಕಾರ್ಯಕ್ರಮ ನಿರೂಪಿಸಿ, ಸುಜ್ಞಾನ ಪದವಿ ಪೂರ್ವ ಕಾಲೇಜಿನ ಪ್ರಭಾರ ಪ್ರಾಂಶುಪಾಲ ರಂಜನ್ ಬಿ. ಶೆಟ್ಟಿ ವಂದಿಸಿದರು.

    kundapura
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಡಾ. ಬಿ. ಬಿ. ಹೆಗ್ಡೆ ಕಾಲೇಜು: ಜೀವನ ಮೌಲ್ಯ ಉಪನ್ಯಾಸ ಮಾಲಿಕೆ

    20/05/2026

    ಜೆಸಿಐ ಹಾಲಾಡಿ ವಾರಾಹಿ ವತಿಯಿಂದ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರ

    20/05/2026

    ಕೊರವಡಿ ಶಾಲಾ ಕಟ್ಟಡ ನಿರ್ಮಾಣಕ್ಕೆ ಶ್ರೀ‌ಕ್ಷೇತ್ರ ಧ.ಗ್ರಾ.ಯೋ. ಅನುದಾನ, ಮಂಜೂರಾತಿ ಪತ್ರ ಹಸ್ತಾಂತರ

    20/05/2026
    Leave A Reply Cancel Reply

    eight + two =

    Call us

    Click Here

    Call us

    Call us

    Call us
    Highest Viewed Recently
    • ಜೂ.1 ರಿಂದ 61 ದಿನಗಳ ಕಾಲ ಯಾಂತ್ರೀಕೃತ ಮೀನುಗಾರಿಕೆ ನಿಷೇಧ
    • ಡಾ. ಬಿ. ಬಿ. ಹೆಗ್ಡೆ ಕಾಲೇಜು: ಜೀವನ ಮೌಲ್ಯ ಉಪನ್ಯಾಸ ಮಾಲಿಕೆ
    • ಜೆಸಿಐ ಹಾಲಾಡಿ ವಾರಾಹಿ ವತಿಯಿಂದ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರ
    • ಕೊರವಡಿ ಶಾಲಾ ಕಟ್ಟಡ ನಿರ್ಮಾಣಕ್ಕೆ ಶ್ರೀ‌ಕ್ಷೇತ್ರ ಧ.ಗ್ರಾ.ಯೋ. ಅನುದಾನ, ಮಂಜೂರಾತಿ ಪತ್ರ ಹಸ್ತಾಂತರ
    • ಆಳ್ವಾಸ್‌ನ ‘ಲಿಪಿ’ ಮುದ್ರಣಾಲಯ ಲೋಕಾರ್ಪಣೆ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.