ಕುಂದಾಪ್ರ ಡಾಟ್ ಕಾಂ ಸುದ್ದಿ.
ಉಡುಪಿ: ತೋಟಗಾರಿಕಾ ಇಲಾಖೆಯ ವತಿಯಿಂದ ರೈತರ ಮಕ್ಕಳಿಗೆ 10 ತಿಂಗಳ ತೋಟಗಾರಿಕಾ ತರಬೇತಿ ಕಾರ್ಯಕ್ರಮವನ್ನು ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತೋಟಗಾರಿಕೆ ತರಬೇತಿ ಕೇಂದ್ರದಲ್ಲಿ ಆಯೋಜಿಸಲಾಗುತ್ತಿದ್ದು, ಆಸಕ್ತ ಅರ್ಹ ರೈತರ ಮಕ್ಕಳಿಂದ ತರಬೇತಿಗೆ ಅರ್ಜಿ ಸಲ್ಲಿಸುವ ಅವಧಿಯನ್ನು ಏಪ್ರಿಲ್ 26 ರ ಸಂಜೆ 5 ಗಂಟೆಯವರೆಗೆ ವರೆಗೆ ವಿಸ್ತರಿಸಲಾಗಿದೆ.
ಅಭ್ಯರ್ಥಿಗಳು ಕನಿಷ್ಟ ಎಸ್.ಎಸ್.ಎಲ್.ಸಿ ಉತ್ತೀರ್ಣರಾಗಿರಬೇಕು. ಅಭ್ಯರ್ಥಿಯ ಪೋಷಕರು ಕೃಷಿ ಜಮೀನು ಹೊಂದಿರಬೇಕು. ಜೊತೆಗೆ ಪಹಣಿ ನೀಡುವುದು ಕಡ್ಡಾಯವಾಗಿರುತ್ತದೆ. ಕನಿಷ್ಠ 18 ವರ್ಷ ಮೇಲ್ಪಟ್ಟ ಮತ್ತು ಗರಿಷ್ಠ ವಯಸ್ಸು ಸಾಮಾನ್ಯ ಅಭ್ಯರ್ಥಿಗಳಿಗೆ 30 ವರ್ಷ ಹಾಗೂ ಪ.ಜಾತಿ ಮತ್ತು ಪ.ಪಂಗಡದ ಅಭ್ಯರ್ಥಿಗಳಿಗೆ 33 ವರ್ಷ, ಮಾಜಿ ಸೈನಿಕರು ಪ್ರವೇಶ ಪಡೆಯಲು ಇಚ್ಚಿಸಿದಲ್ಲಿ ವಯಸ್ಸಿನ ಮಿತಿ 33 ರಿಂದ 65 ವರ್ಷ ದೊಳಗಿನವರು ಅರ್ಜಿ ಸಲ್ಲಿಸಬಹುದಾಗಿದೆ.
ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಇಲಾಖಾ ವೆಬ್‌ಸೈಟ್ https://horticulturedir.karnataka.gov.in ಅಥವಾ ತೋಟಗಾರಿಕೆ ಉಪನಿರ್ದೇಶಕರು, ಉಡುಪಿ ಅಥವಾ ಉಡುಪಿ, ಕುಂದಾಪುರ ಹಾಗೂ ಕಾರ್ಕಳ ತಾಲೂಕು ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ.
ಅರ್ಹ ಅಭ್ಯರ್ಥಿಗಳಿಗೆ ಏಪ್ರಿಲ್ 28 ರಂದು ಬೆಳಗ್ಗೆ ಉಡುಪಿಯ ತೋಟಗಾರಿಕೆ ಉಪನಿರ್ದೇಶಕರ ಕಚೇರಿಯಲ್ಲಿ ಸಂದರ್ಶನ ನಡೆಯಲಿದ್ದು, ಅದೇ ದಿನ ತರಬೇತಿಗೆ ಆಯ್ಕೆಯಾದ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಲಾಗುವುದು ಎಂದು ತೋಟಗಾರಿಕೆ ಇಲಾಖೆಯ ಉಪನಿರ್ದೇಶಕರ ಕಚೇರಿ ಪ್ರಕಟಣೆ ತಿಳಿಸಿದೆ.