ಕುಂದಾಪ್ರ ಡಾಟ್ ಕಾಂ ಸುದ್ದಿ.
ಕೋಟ: ವಿದ್ಯಾರ್ಥಿಗಳ ಭೌತಿಕ ಬೆಳವಣಿಗೆಗೆ ಬೇಸಿಗೆ ಶಿಬಿರಗಳು ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸುತ್ತದೆ ಎಂದು ಪತ್ರಕರ್ತ ರವೀಂದ್ರ ಕೋಟ ಹೇಳಿದರು.
ಅವರು ಶುಕ್ರವಾರ ಕೋಟದ ಕಾರಂತ ಥೀಮ್ ಪಾಕ್೯ನಲ್ಲಿ ಗೀತಾನಂದ ಫೌಂಡೇಶನ್ ಮಣೂರು-ಪಡುಕರೆ, ಡಾ| ಶಿವರಾಮ ಕಾರಂತ ಹುಟ್ಟೂರ ಪ್ರಶಸ್ತಿ ಪ್ರತಿಷ್ಠಾನ ಕೋಟ, ಕೋಟತಟ್ಟು ಗ್ರಾಮ ಪಂಚಾಯತ್, ಉಸಿರು, ಕೋಟ ಅರಿವು ಕೇಂದ್ರ ಡಿಜಿಟಲ್ ಗ್ರಂಥಾಲಯ ಹಾಗೂ ಮಾಹಿತಿ ಕೇಂದ್ರ ಕೋಟತಟ್ಟು ಇವರ ಸಂಯುಕ್ತ ಆಶ್ರಯದಲ್ಲಿ ಕರಾವಳಿ ಕಣ್ಮಣಿ ದಿ| ಕೆ.ಸಿ. ಕುಂದರ್ ಸ್ಮರಣಾರ್ಥ ಬೆಳ್ಳಿ ವರ್ಷಾಚರಣೆಯ ಹಿನ್ನಲ್ಲೆಯಲ್ಲಿ ವಿದ್ಯಾರ್ಥಿಗಳ ಬೇಸಿಗೆ ಶಿಬಿರ ವಿಕಸನ 2025 ಪ್ರತಿಭೆಗಳ ದಿಬ್ಬಣ ಶೀರ್ಷಿಕೆಯಡಿ ಕಾರ್ಯವನ್ನು ಉದ್ಘಾಟಿಸಿ ಮಾತನಾಡಿದರು.
ಇಪ್ಪತೈದು ಸಂವತ್ಸರಗಳನ್ನು ಸಮಾಜಕ್ಕೆ ಶಿಬಿರದ ಮೂಲಕ ಒಂದಿಷ್ಟು ಪ್ರತಿಭೆಗಳನ್ನು ಸಮಾಜಕ್ಕೆ ಧಾರೆ ಎರೆಯುವ ಕಾರ್ಯ ನಿಜಕ್ಕೂ ಪ್ರಶಂಸನೀಯ ಕಾರ್ಯ, ಶಿಬಿರದಲ್ಲಿ ಅರ್ಥಪೂರ್ಣ ಸಂಪನ್ಮೂಲ ವ್ಯಕ್ತಿಗಳ ಮೂಲಕ ಪ್ರತಿಭೆಗಳು ಹೊರಹೊಮ್ಮಲಿದೆ ಎಂದರು.
ಕಾರ್ಯಕ್ರಮದಲ್ಲಿ ಶಿಬಿರಾರ್ಥಿಗಳ ನಾಲ್ಕು ತಂಡಗಳನ್ನು ವಿಗಂಡಿಸಿ ಅವರ ತಂಡದ ನಾಯಕರುಗಳಿಗೆ ದಾಖಲೆಗಳನ್ನು ಗಣ್ಯರ ಸಮ್ಮುಖದಲ್ಲಿ ಹಸ್ತಾಂತರಿಸಲಾಯಿತು.
ಕಾರ್ಯಕ್ರಮದಲ್ಲಿ ಕೋಟತಟ್ಟು ಗ್ರಾಮಪಂಚಾಯತ್ ಅಭಿವೃದ್ಧಿ ಅಧಿಕಾರಿ ರವೀಂದ್ರ ರಾವ್, ಕಾರ್ಯದರ್ಶಿ ಸುಮತಿ ಅಂಚನ್ ಇದ್ದರು.
ಕಾರಂತ ಹುಟ್ಟೂರ ಪ್ರತಿಷ್ಠಾನದ ಕಾರ್ಯದರ್ಶಿ ನರೇಂದ್ರ ಕುಮಾರ್ ಕೋಟ ಪರಿಚಯಿಸಿ, ಸ್ವಾಗತಿಸಿ. ಟ್ರಸ್ಟ್ ನ ಸದಸ್ಯರಾದ ಶಿಕ್ಷಕ ಸತೀಶ್ ವಡ್ಡರ್ಸೆ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.















