Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಪರಿಶಿಷ್ಟ ಜಾತಿ ಕುಟುಂಬಗಳ ಸಮೀಕ್ಷಾ ಕಾರ್ಯವನ್ನು ಯಶಸ್ವಿಯಾಗಿ ನಿರ್ವಹಿಸಿ: ಜಿಲ್ಲಾಧಿಕಾರಿ ಸೂಚನೆ
    ಉಡುಪಿ ಜಿಲ್ಲೆ

    ಪರಿಶಿಷ್ಟ ಜಾತಿ ಕುಟುಂಬಗಳ ಸಮೀಕ್ಷಾ ಕಾರ್ಯವನ್ನು ಯಶಸ್ವಿಯಾಗಿ ನಿರ್ವಹಿಸಿ: ಜಿಲ್ಲಾಧಿಕಾರಿ ಸೂಚನೆ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಉಡುಪಿ:
    ಪರಿಶಿಷ್ಟ ಜಾತಿ ಒಳಮೀಸಲಾತಿಗಾಗಿ ಸಮೀಕ್ಷೆ ನಡೆಸುವ ಬಗ್ಗೆ ಗೌರವಾನ್ವಿತ ನ್ಯಾಯಮೂರ್ತಿ ಹೆಚ್.ಎನ್.ನಾಗಮೋಹನದಾಸ್ ಏಕಸದಸ್ಯ ವಿಚಾರಣಾ ಆಯೋಗದಿಂದ ಪರಿಶಿಷ್ಟ ಜಾತಿಗಳ ವಿವಿಧ ಅಂಶಗಳ ಬಗ್ಗೆ ಸಮೀಕ್ಷೆ ನಡೆಸಲು ಈಗಾಗಲೇ ರಚಿಸಿರುವ ಜಿಲ್ಲಾ ಮಟ್ಟದ ಸಮನ್ವಯ ಸಮಿತಿಯು ಪರಿಶಿಷ್ಟ ಜಾತಿ ಕುಟುಂಬಗಳ ಸಮೀಕ್ಷಾ ಕಾರ್ಯವನ್ನು ಯಶಸ್ವಿಯಾಗಿ ನಿರ್ವಹಿಸುವಂತೆ ಅಧಿಕಾರಿಗಳಿಗೆ  ಜಿಲ್ಲಾಧಿಕಾರಿ ಡಾ. ಕೆ. ವಿದ್ಯಾ ಕುಮಾರಿ ಸೂಚನೆ ನೀಡಿದರು.

    Click Here

    Call us

    Click Here

    ಅವರು ಅಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿಯ ಕೇಸ್ವಾನ್ ವಿಡಿಯೋ  ಕಾನ್ಫರೆನ್ಸ್ ಸಭಾಂಗಣದಲ್ಲಿ ಪರಿಶಿಷ್ಟ ಜಾತಿ ಒಳಮೀಸಲಾತಿ ವರ್ಗೀಕರಣ ಕುರಿತಂತೆ ನ್ಯಾಯಮೂರ್ತಿ ಹೆಚ್.ಎನ್, ನಾಗಮೋಹನದಾಸ್ ಏಕಸದಸ್ಯ ವಿಚಾರಣಾ ಆಯೋಗದಿಂದ ಪರಿಶಿಷ್ಟ ಜಾತಿಗಳ ವಿವಿಧ ಅಂಶಗಳ ಬಗ್ಗೆ ದತ್ತಾಂಶಗಳನ್ನು ಸಮೀಕ್ಷೆ ನಡೆಸುವ ಸಂಬಂಧ ನಡೆದ ಜಿಲ್ಲಾ ಮಟ್ಟದ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

    ಜಿಲ್ಲೆಯಲ್ಲಿ ಮೇ 5 ರಿಂದ ಮೂರು ಹಂತಗಳಲ್ಲಿ ಪರಿಶಿಷ್ಟ ಜಾತಿಗಳ ವಿವಿಧ ಅಂಶಗಳ ಬಗ್ಗೆ ದತ್ತಾಂಶಗಳನ್ನು ಶೇಖರಿಸಿ ಸಮೀಕ್ಷೆ ನಡೆಸುವ ಕಾರ್ಯವು ಶಾಲಾ ಶಿಕ್ಷಕರುಗಳಿಂದ ನಡೆಯಲಿದ್ದು, ಮನೆ ಮನೆಗೆ ದತ್ತಾಂಶ ಶೇಖರಣೆಗೆ ಆಗಮಿಸುವ ಶಿಕ್ಷಕರೊಂದಿಗೆ ಸಾರ್ವಜನಿಕರು ಸಹಕರಿಸಬೇಕು ಎಂದರು.

    ತಾಲ್ಲೂಕು ಮಟ್ಟದಲ್ಲಿ ಉಪವಿಭಾಗಾಧಿಕಾರಿಗಳ ನೇತೃತ್ವದಲ್ಲಿ ತಾಲ್ಲೂಕು ಮಟ್ಟದ ಸಮನ್ವಯ ಸಮಿತಿಯನ್ನು ರಚಿಸಲಾಗಿದ್ದು, ತಾಲ್ಲೂಕಿನ ತಹಸೀಲ್ದಾರ್, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗಳು ಮತ್ತು ತಾಲ್ಲೂಕು ಮಟ್ಟದ ಇತರ ಅಧಿಕಾರಿಗಳು ಸದಸ್ಯರಾಗಿರುತ್ತಾರೆ. ಸಮೀಕ್ಷೆಯ ಮೇಲ್ವೆಚಾರಣೆಗಾಗಿ ಕ್ಷೇತ್ರ ಶಿಕ್ಷಣಾಧಿಕಾರಿಗಳು, ಮುಖ್ಯ ಶಿಕ್ಷಕರನ್ನು ನಿಯೋಜಿಸಲು ಉಪನಿರ್ದೇಶಕರು, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ರವರು ಕ್ರಮವಹಿಸಲು ತಿಳಿಸಲಾಯಿತು. ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಹಾಗೂ ತಾಲ್ಲೂಕು ನೋಡಲ್ ಅಧಿಕಾರಿಗಳು ಸಮೀಕ್ಷೆಯ ಸಂಪೂರ್ಣ ಮೇಲುಸ್ತುವಾರಿ ವಹಿಸಲು ತಿಳಿಸಿದರು.

    ಕುಟುಂಬ ದತ್ತಾಂಶದ ಪ್ರಕಾರ ಗ್ರಾಮ ಹಾಗೂ ನಗರಗಳಲ್ಲಿನ ಕುಟುಂಬವಾರು ಸಂಖ್ಯೆಗಳನ್ನು ಬ್ರೇಕ್‌ಅಪ್‌ ಮಾಡಿ, ತಾಲ್ಲೂಕುಗಳಿಗೆ ಗ್ರಾಮ ಪಂಚಾಯಿತಿವಾರು/ಗ್ರಾಮವಾರು/ವಾರ್ಡ್ವಾರು ಪಾಸ್‌ವರ್ಡ್‌ ಅಥವಾ ಲೋಗೀನ್‌ ಮೂಲಕ ಮಾಹಿತಿ ಒದಗಿಸಲಾಗುವುದು. ಅದರಂತೆ ಎಚ್‌ಆರ್‌ಎಮ್‌ಎಸ್‌ನಿಂದ ಶಿಕ್ಷಕರನ್ನು ಮ್ಯಾಪೀನ್‌ ಮಾಡಿಕೊಂಡು ಸಮೀಕ್ಷಾ ಕಾರ್ಯ ಕೈಗೊಳ್ಳಲು ತಿಳಿಸಲಾಯಿತು.

    Click here

    Click here

    Click here

    Call us

    Call us

    ಜಿಲ್ಲೆಯಲ್ಲಿ ಪರಿಶಿಷ್ಟ ಜಾತಿಯ ಸುಮಾರು 75,000 ಕ್ಕೂ ಹೆಚ್ಚು ಜನಸಂಖ್ಯೆ ಇದ್ದು, ಇವರ ಸಮೀಕ್ಷೆ ನಡೆಸಲು ಸುಮಾರು 1000 ರಿಂದ 1100 ಗಣತಿದಾರರ ಅವಶ್ಯಕತೆ ಇದ್ದು, ಈ ಕಾರ್ಯಕ್ಕೆ ಶಿಕ್ಷಣ ಇಲಾಖೆಯ ಶಿಕ್ಷಕರನ್ನು ನೇಮಕಮಾಡಬೇಕು ಎಂದ ಅವರು, ಜಿಲ್ಲಾ ಮಾಸ್ಟರ್ ಟ್ರೆöÊನರ್‌ಗಳಿಗೆ ತರಬೇತಿಯನ್ನು ಏಪ್ರಿಲ್ 28 ರಂದು ಅಟಲ್ ಬಿಹಾರಿ ವಾಜಪೇಯಿ ಸಭಾಂಗಣದಲ್ಲಿ ತರಬೇತಿ ನೀಡಲಾಗುವುದು. ತರಬೇತಿಗೆ ತಪ್ಪದೇ ಭಾಗವಹಿಸಬೇಕು ಎಂದರು.

    ಸರ್ಕಾರದಿಂದ ಕಾಲಕಾಲಕ್ಕೆ ನೀಡುವ ನಿರ್ದೇಶನ ಹಾಗೂ ಮಾರ್ಗಸೂಚಿಗಳನ್ವಯ ಎಲ್ಲಾ ಇಲಾಖೆಗಳು ಸಮನ್ವಯದಿಂದ ಕರ್ತವ್ಯ ನಿರ್ವಹಿಸಿ ಸಮೀಕ್ಷೆ ಕಾರ್ಯ ಯಶಸ್ವಿ ಆಗುವಂತೆ ಕ್ರಮವಹಿಸಲು ತಿಳಿಸಿದರು.

      ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಆಬೀದ್ ಗದ್ಯಾಳ, ಜಿಲ್ಲಾ ಪಂಚಾಯತ್‌ನ ಉಪ ಕಾರ್ಯದರ್ಶಿ ಶ್ರೀನಿವಾಸ್ ರಾವ್, ಸಹಾಯಕ ಕಮೀಷನರ್ ರಶ್ಮಿ, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ನಾರಾಯಣ ಸ್ವಾಮಿ, ಡಯಟ್ ಉಪ ಪ್ರಾಂಶುಪಾಲ ಡಾ. ಅಶೋಕ್ ಕಾಮತ್, ವಿವಿಧ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.

    Like this:

    Like Loading...

    Related

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಪ್ರೋತ್ಸಾಹಧನ – ಅರ್ಜಿ ಸಲ್ಲಿಕೆ: ಅವಧಿ ವಿಸ್ತರಣೆ

    06/12/2025

    ಇಎಸ್ಐ ಮತ್ತು ಇಪಿಎಫ್ ಸೌಲಭ್ಯದಿಂದ ಉದ್ಯೋಗಳಿಗೆ ಭವಿಷ್ಯದಲ್ಲಿ ಆರ್ಥಿಕ ಭದ್ರತೆ: ಪ್ರತೀಕ್ ಬಾಯಲ್

    06/12/2025

    ಬೈಂದೂರು ಉತ್ಸವ: ಜಿಲ್ಲಾಧಿಕಾರಿ ಕಚೇರಿಯಲ್ಲಿ ಶಾಸಕ ಗಂಟಿಹೊಳೆ ನೇತೃತ್ವದಲ್ಲಿ ವಿವಿಧ ಇಲಾಖಾ ಅಧಿಕಾರಿಗಳ ಸಭೆ

    05/12/2025

    Leave a ReplyCancel reply

    Call us

    Click Here

    Call us

    Call us

    Call us
    Highest Viewed Recently
    • ಕೋಡಿ ಉಂಜಲೋತ್ಸವ, ಪುಷ್ಪಯಾಗ ಮಹೋತ್ಸವ ಚಪ್ಪರ ಮುಹೂರ್ತ
    • ಶಕ್ತಿ ಮತ್ತು ಸಾಮರ್ಥ್ಯದ ಮೇಲಿನ ನಂಬಿಕೆಯೇ ಗೆಲುವು: ಜೆ.ಪಿ. ಶೆಟ್ಟಿ ಕಟ್ಕೆರೆ
    • ಶಸ್ತ್ರಚಿಕಿತ್ಸೆಗೆ ನೆರವಾದ ಟೀಮ್ ಊರ್ಮನಿ ಮಕ್ಕಳ್‌ ತಂಡ
    • ಅಂತರಾಷ್ಟ್ರೀಯ ಮಟ್ಟದ ವೇದಿಕ್ ಮಾಥ್ಸ್ ಸ್ಪರ್ಧೆ: ಮದರ್ ತೆರೇಸಾ ಶಾಲೆಯ ವಿದ್ಯಾರ್ಥಿಗಳಿಗೆ ಚಾಂಪಿಯನ್‌ಶಿಪ್ ಗರಿ 
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನ ವಾರ್ಷಿಕ ಕ್ರೀಡಾಕೂಟ ಸಂಪನ್ನ

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.

    %d