ಉಡುಪಿ: ವ್ಯವಸ್ಥಾಪನಾ ಸಮಿತಿ ರಚನೆಗೆ ಅರ್ಜಿ ಆಹ್ವಾನ

Click Here

Call us

Call us

Call us

Call us

ಕುಂದಾಪ್ರ ಡಾಟ್‌ ಕಾಂ ಸುದ್ದಿ.
ಉಡುಪಿ:
ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ಕಾಯ್ದೆ ಅಧಿನಿಮಯ 1997 ರ ಕಲಂ 25 ರನ್ವಯ ಹಾಗೂ ಧಾರ್ಮಿಕ ಪರಿಷತ್ತಿನ ಜಿಲ್ಲಾ ಧಾರ್ಮಿಕ ಪರಿಷತ್‌ನ ಸಭೆಯ ನಿರ್ಣಯದಂತೆ ಜಿಲ್ಲೆಯಲ್ಲಿರುವ ಪ್ರವರ್ಗ ಸಿ ಗೆ ಸೇರಿದ ಬ್ರಹ್ಮಾವರ ತಾಲೂಕಿನ ಮೂಡಹಡು ಗ್ರಾಮದ ಯಡಬೆಟ್ಟು ಶ್ರೀ ಗೋಪಾಲಕೃಷ್ಣ ದೇವಸ್ಥಾನಕ್ಕೆ ವ್ಯವಸ್ಥಾಪನ ಸಮಿತಿಯನ್ನು ಮೂರು ವರ್ಷಗಳ ಅವಧಿಗೆ ರಚಿಸಲು ಆಸಕ್ತ ಭಕ್ತಾದಿಗಳು ಹಾಗೂ ಸಾರ್ವಜನಿಕರಿಂದ ಅರ್ಜಿ ಆಹ್ವಾನಿಸಲಾಗಿದೆ.

Click Here

Call us

Click Here

ಕನಿಷ್ಠ 25 ವರ್ಷ ಮೇಲ್ಪಟ್ಟ ಆಸಕ್ತ ಭಕ್ತಾದಿಗಳು ಯಾವುದೇ ಒಂದು ಅಧಿಸೂಚಿತ ಸಂಸ್ಥೆಯ/ ದೇವಾಲಯದ ವ್ಯವಸ್ಥಾಪನಾ ಸಮಿತಿಗೆ ಮಾತ್ರ ಸದಸ್ಯತ್ವ ಕೋರಿ ಅರ್ಜಿಯನ್ನು ನಮೂನೆ-1(ಬಿ) (22 ನೇ ನಿಯಮ) ನಮೂನೆಯಲ್ಲಿ ಭರ್ತಿ ಮಾಡಿದ ಅರ್ಜಿಯನ್ನು ಮೇ 5 ರ ಒಳಗಾಗಿ ಸಲ್ಲಿಸಬಹುದಾಗಿದೆ.

ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಸಹಾಯಕ ಆಯುಕ್ತರು, ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ಇಲಾಖೆ, ಕೊಠಡಿ ಸಂಖ್ಯೆ 206, ಬಿ ಬ್ಲಾಕ್, ಜಿಲ್ಲಾ ಸಂಕೀರ್ಣ, ರಜತಾದ್ರಿ, ಮಣಿಪಾಲ ಉಡುಪಿ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ. 

Leave a Reply