ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಇಲ್ಲಿನ ಭಂಡಾರ್ಕಾರ್ಸ್ ಕಲಾ ಮತ್ತು ವಿಜ್ಞಾನ ಕಾಲೇಜಿನಲ್ಲಿ ಗಣಕಯಂತ್ರ ವಿಭಾಗ ಮತ್ತು ಐಕ್ಯೂಎಸಿ ಇವರ ಸಹಯೋಗದೊಂದಿಗೆ ವ್ಯಕ್ತಿತ್ವ ವಿಕಾಸನ ಮತ್ತು ಉದ್ಯೋಗ ಸಂದರ್ಶನ ಮಾಹಿತಿ ಕಾರ್ಯಗಾರ ನಡೆಯಿತು.
ನೆಟ್ ಅನಾಲಿಟಿಕ್ಸ್ ಕಂಪೆನಿಯಲ್ಲಿ ಹ್ಯೂಮನ್ ಕ್ಯಾಪಿಟಲ್ ಮ್ಯಾನೇಜರ್ ಆಗಿ ಕೆಲಸ ನಿರ್ವಹಿಸುತ್ತಿರುವ ಶ್ರೀರಕ್ಷಾ ಅವರು ಮುಖ್ಯ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ್ದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಡಾ. ಶುಭಕರಾಚಾರಿ ಅವರು ವಹಿಸಿದ್ದರು.
ಒಂದು ದಿನ ನಡೆದ ಕಾರ್ಯಾಗಾರದಲ್ಲಿ ಕಾಲೇಜಿನ ವಿದ್ಯಾರ್ಥಿಗಳು ಭಾಗವಹಿಸಿ, ಕಾರ್ಯಕ್ರಮದ ಉಪಯೋಗ ಪಡೆದುಕೊಂಡರು.
ಗಣಕಯಂತ್ರ ವಿಭಾಗ ಮುಖ್ಯಸ್ಥರಾದ ಪ್ರೊಫೆಸರ್ ಗಣೇಶ್ ಕೆ., ಐಕ್ಯೂಎಸಿ ಸಂಚಾಲಕರಾದ ಸತ್ಯನಾರಾಯಣ ಉಪಸ್ಥಿತರಿದ್ದರು.
ಗಣಕ ವಿಜ್ಞಾನ ವಿಭಾಗದ ಉಪನ್ಯಾಸಕಿಯಾದ ನಿಧಿ ಹೆಗ್ಡೆ ಅವರು ಕಾರ್ಯಕ್ರಮವನ್ನು ನಿರೂಪಿಸಿ, ವಂದಿಸಿದರು.















