Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಆಳ್ವಾಸ್‌ನಲ್ಲಿ ಮಹಾವೀರ ಸ್ವಾಮಿ ಜನ್ಮ ಕಲ್ಯಾಣ ಮಹೋತ್ಸವ
    alvas nudisiri

    ಆಳ್ವಾಸ್‌ನಲ್ಲಿ ಮಹಾವೀರ ಸ್ವಾಮಿ ಜನ್ಮ ಕಲ್ಯಾಣ ಮಹೋತ್ಸವ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಮೂಡುಬಿದಿರೆ:
    ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆ ಹಾಗೂ ಮಲೆನಾಡಿನ ಸಮಸ್ತ ಜೈನ ಬಾಂಧವರ ಸಹಯೋಗದೊಂದಿಗೆ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವತಿಯಿಂದ ಭಗವಾನ್ ಶ್ರೀ ಮಹಾವೀರ ಸ್ವಾಮಿ ಜನ್ಮ ಕಲ್ಯಾಣ ಮಹೋತ್ಸವವನ್ನು ವಿದ್ಯಾಗಿರಿಯ ಕೃಷಿಸಿರಿ ವೇದಿಕೆಯಲ್ಲಿ ಆದಿತ್ಯವಾರ ಹಮ್ಮಿಕೊಳ್ಳಲಾಯಿತು.

    Click Here

    Call us

    Click Here

    ಸಂಜೆ 4ಕ್ಕೆ ಆರಂಭಗೊಂಡ ಕಾರ್ಯಕ್ರಮದಲ್ಲಿ ಮೊದಲಿಗೆ ಆಳ್ವಾಸ್ ವಿದ್ಯಾರ್ಥಿಗಳಿಂದ ಜಿನಭಜನೆ ನಡೆಯಿತು. ಕೊಂಬು ವಾದ್ಯ, ನಾದಸ್ವರ, ಪೂರ್ಣಕುಂಭದೊಂದಿಗೆ ಮಹಾವೀರ ಸ್ವಾಮಿ ಜಿನಬಿಂಬದ ಮೆರವಣಿಗೆ, ತೋರಣ ಮುಹೂರ್ತ, ದ್ರವ್ಯಾಭಿಷೇಕ, ಅಷ್ಟವಿಧಾರ್ಚನೆ ಪೂಜೆ, ಮಹಾಮಂಗಳಾರತಿ ಹಮ್ಮಿಕೊಳ್ಳಲಾಯಿತು. ಹೊರನಾಡಿನ ಜಯಶ್ರೀ ಧರಣೇಂದ್ರ ಜೈನ್ ಮತ್ತು ಬಳಗದವರಿಂದ ಜಿನಭಕ್ತಿ ಗಾಯನ ನಡೆಯಿತು.

    ನಂತರ ನಡೆದ ಧಾರ್ಮಿಕ ಸಭೆಯಲ್ಲಿ ಆಶೀರ್ವಚನ ಗೈದ ಮೂಡುಬಿದಿರೆ ಜೈನ ಮಠದ ಶ್ರೀ ಭಟ್ಟಾರಕ ಚಾರುಕೀರ್ತಿ ಪಂಡಿತಾಚಾರ್ಯವರ್ಯ ಸ್ವಾಮೀಜಿ, ಕರಾವಳಿಯ ಜೈನರನ್ನು ಆಹ್ವಾನಿಸಿ ಅಭೂತಪೂರ್ವ ಮಹೋತ್ಸವ ಹಮ್ಮಿಕೊಂಡ ಡಾ. ಎಂ. ಮೋಹನ್ ಆಳ್ವ ಓರ್ವ ಧರ್ಮಸಹಿಷ್ಣುತೆ ಹೊಂದಿರುವ ವ್ಯಕ್ತಿ ಎಂದು ಸಂತಸ ವ್ಯಕ್ತ ಪಡಿಸಿದರು. 

    ಸ್ವಾಭಾವಿಕ ವಿಚಾರಗಳನ್ನು ಮಾತ್ರವೇ ಮಹಾವೀರ ಸ್ವಾಮಿ ಸಂದೇಶ ನೀಡಿದ್ದಾರೆ. ಜಗತ್ತಿನ ಪ್ರತಿಯೊಂದು ಧರ್ಮಗಳಲ್ಲಿ ಒಂದು ಧ್ಯೇಯ ಇದೆ. ಆ ಗುರಿಯನ್ನು ತಲುಪಬೇಕಾದರೆ ಬಂಧನಗಳಿಂದ ಮುಕ್ತಗೊಳ್ಳಬೇಕು. ಜಗತ್ತಿನ ಎಲ್ಲಾ ಜೀವಿಗಳು ಮೋಕ್ಷ ಪಡೆಯಬೇಕು ಎನ್ನುವುದು ಜೈನ ಧರ್ಮದ ಸಂದೇಶ. ವರ್ತನೆಗಳನ್ನು ಬದಲಿಸಿಕೊಂಡು ದೈವಿಕ ಗುಣಗಳನ್ನು ಬೆಳೆಸಿಕೊಂಡಾಗ ಶ್ರೇಷ್ಟರಾಗಬಹುದು. ಇಂದ್ರಿಯ ಗೆದ್ದವನು ಜಿನ, ಗೆಲ್ಲುವ ಪ್ರಯತ್ನ ಮಾಡುವವನು ಜೈನ ಎಂದರು.

    ಕಾರ್ಯಕ್ರಮದಲ್ಲಿ ಧರ್ಮಸ್ಥಳದ ಹರ್ಷೆಂದ್ರ ಕುಮಾರ್ ಹಾಗೂ ಸಹಕಾರಿ ಕ್ಷೇತ್ರದ ಸಾಧಕ  ರಾಜೇಂದ್ರ ಕುಮಾರ್ ಅವರನ್ನು ಸನ್ಮಾನಿಸಲಾಯಿತು.

    Click here

    Click here

    Click here

    Call us

    Call us

    ಸನ್ಮಾನ ಸ್ವೀಕರಿಸಿ ಮಾತನಾಡಿದ ಶ್ರೀ ಕ್ಷೇತ್ರ ಧರ್ಮಸ್ಥಳದ ಹರ್ಷೇಂದ್ರ ಕುಮಾರ್, ವ್ಯವಸ್ಥೆಗಳನ್ನು ಹುಟ್ಟುಹಾಕುವುದು ದೊಡ್ಡದಲ್ಲ, ಟೀಕೆಗಳನ್ನು ಮೀರಿ ನಡೆಸುವುದು ಬೆಳೆಸುವುದು ಬಹಳ ಕಷ್ಟ, ಅಂತಹ ಸಾಧನೆ ಮಾಡುವಲ್ಲಿ ಮೋಹನ್ ಆಳ್ವರು ಮಾದರಿ ಎಂದರು. ಅಚ್ಚುಕಟ್ಟಾಗಿ ನಡೆಸಿಕೊಂಡು ಬರುತ್ತಿರುವ ಕಾರ್ಯಕ್ರಮ ಇನ್ನಷ್ಟು ಯಶಸ್ಸು ಕಾಣಲಿ ಎಂದು ಹಾರೈಸಿದರು.

    ರಾಜೇಂದ್ರ ಕುಮಾರ್ ಮಾತನಾಡಿ, ಜಗತ್ತಿನಾದ್ಯಂತ ಹಿಂಸೆ ಹೆಚ್ಚುತ್ತಿರುವ ಕಾಲಘಟ್ಟದಲ್ಲಿ, ಎಲ್ಲಾ ಧರ್ಮವನ್ನು ಪ್ರೀತಿಸಿ ಸರ್ವರೂ ಶಾಂತಿಯಿಂದ ಬಾಳಬೇಕು ಎಂದರು. 

    ಸುತ್ತಲಿನ ವಾತವರಣ ಧಾರ್ಮಿಕ ವೈಭವವನ್ನು ಹೆಚ್ಚಿಸಲು ಮಾದರಿಯಂತೆ 24 ತೀಥಂಕರರ ವಿಗ್ರಹಗಳ ಕೆತ್ತನೆ, ಹೂವಿನಿಂದ ಮಾಡಲ್ಪಟ್ಟ ಆನೆಯ ಆಕೃತಿ, ವಿವಿಧ ಪ್ರಾಣಿ ಪ್ರಕ್ಷಿಗಳ ಆಕೃತಿ, ಸಭಾಂಗಣದ ಎರಡು ಕಡೆಗಳಲ್ಲಿ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಲೋಗೊದ ಆಕೃತಿಯನ್ನು ಹೂವಿನನಿಂದ ನಿರ್ಮಿಸಲಾಗಿತ್ತು.

    ಜೈನ ಸಂಪ್ರದಾಯದಂತೆ ಧಾರ್ಮಿಕ ವಿಧಿಗಳನ್ನು ನಡೆಸಲಾಯಿತು. ಬೃಹತ್ ಆಕಾರದ 14 ವಿದ್ಯುತ್ ದೀಪಗಳು ಸಭಾಂಗಣದ ಮೆರಗನ್ನು ಹೆಚ್ಚಿಸದವು. ವೇದಿಕೆಯ ಮುಂಭಾಗದಲ್ಲಿ ಇರಿಸಲಾಗಿದ್ದ 108  ತುಪ್ಪದ ದೀಪಗಳು ಅಜ್ಞಾನವನ್ನು ಹೋಗಲಾಡಿಸಿ, ಶಾಂತಿಯಜ್ಞಾನವನ್ನು ಪಸರಿಸುವ ಸಂದೇಶ ನೀಡುತ್ತಿದ್ದವು. ಜಲಾಭಿಷೇಕ, ಏಳನೀರು, ಇಕ್ಷು ರಸ, ಕ್ಷೀರ, ಕಷಾಯ, ಕಾಶ್ಮೀರಿ ಕೇಸರಿ, ಕಲ್ಕ ಚೂರ್ಣ, ಅರಸಿನ, ಚತುಷ್ಕೋನ ಕಳಶ, ಚಂದನ, ಅಷ್ಟಗಂಧ, ಕನಕ ಪುಷ್ಟವೃಷ್ಠಿಯ ದ್ರವ್ಯಗಳ ಅಭಿಷೇಕದ ನಂತರ, ಶಾಂತಿ ಮಂತ್ರದೊಂದಿಗೆ ಪೂರ್ಣಕುಂಭ, ಮಹಾಮಂಗಳಾರತಿ ನಡೆಯಿತು.  ಆಗಮಿಸಿದ ಎಲ್ಲರಿಗೂ ಉಪಹಾರದ ವ್ಯವಸ್ಥೆ ಮಾಡಲಾಗಿತ್ತು.

    ಕಾರ್ಯಕ್ರಮದಲ್ಲಿ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ. ಮೋಹನ್ ಆಳ್ವ, ಮಾಜಿ ಸಚಿವ ಅಭಯಚಂದ್ರ ಜೈನ್, ಚೌಟರ ಅರಮನೆಯ ಕುಲದೀಪ್ ಎಂ, ಪಟ್ಟಣಶೆಟ್ಟಿ ಸುದೇಶ್ ಕುಮಾರ್, ಚೌಟರ ಅರಮನೆಯ ಆದರ್ಶ್ ಜೈನ್, ರತ್ನಾಕರ್ ಜೈನ್, ಜೈನ್ ಮಿಲನ್ ರಾಜ್ಯಾಧ್ಯಕ್ಷ ಯುವರಾಜ್, ಪಡುಬಿದ್ರಿ ಅರಮನೆಯ ಅರಸರು, ಕೂಳೂರಿನ ಆಶಿಕ್‌ಕುಮಾರ್, ಪಡ್ಯಾರ್‌ಬೆಟ್ಟಿನ ಜೀವಂಧರ ಕುಮಾರ್, ಉದ್ಯಮಿ ಶ್ರೀಪತಿ ಭಟ್ ಇದ್ದರು.  

    ನಿವೃತ್ತ ಮುಖ್ಯ ಶಿಕ್ಷಕ ಮುನಿರಾಜ ರೆಂಜಾಳ ಹಾಗೂ ಉಪನ್ಯಾಸಕ ವೇಣುಗೋಪಾಲ್ ಕಾರ್ಯಕ್ರಮ ನಿರೂಪಿಸಿದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಸೇವಾ ಮನೋಭಾವದಿಂದ ಮಾಡುವ ಕೆಲಸ ಮನಸ್ಸಿಗೆ ಸಂತೋಷ ನೀಡುತ್ತದೆ: ಅನುಪಮ ಎಸ್. ಶೆಟ್ಟಿ

    18/12/2025

    ಸುಜ್ಞಾನ ಪಿಯು ವಿದ್ಯಾರ್ಥಿಗಳಿಂದ ಕೈಗಾರಿಕಾ ಅಧ್ಯಯನ ಪ್ರವಾಸ

    18/12/2025

    ಆರೋಗ್ಯ ಸೇವೆಯಲ್ಲಿ ಹೊಸ ಅಧ್ಯಾಯ: ಮೂಡುಬಿದಿರೆ ಭಾಗದ ಮೊದಲ ಹೃದಯ ಚಿಕಿತ್ಸಾ ಕೇಂದ್ರ

    18/12/2025
    Leave A Reply Cancel Reply

    Call us

    Click Here

    Call us

    Call us

    Call us
    Highest Viewed Recently
    • ಗಂಗೊಳ್ಳಿ ಕೊಂಚಾಡಿ ರಾಧಾ ಶೆಣೈ ಸ.ಹಿ.ಪ್ರಾ ಶಾಲೆಯ ವಾರ್ಷಿಕ ಕ್ರೀಡಾಕೂಟ
    • ಹಟ್ಟಿಅಂಗಡಿ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಗೆ ʼಸ್ಟಾರ್ ಎಜುಕೇಶನ್ ಅವಾರ್ಡ್ʼ ಗೌರವ
    • ಸೇವಾ ಮನೋಭಾವದಿಂದ ಮಾಡುವ ಕೆಲಸ ಮನಸ್ಸಿಗೆ ಸಂತೋಷ ನೀಡುತ್ತದೆ: ಅನುಪಮ ಎಸ್. ಶೆಟ್ಟಿ
    • ಸುಜ್ಞಾನ ಪಿಯು ವಿದ್ಯಾರ್ಥಿಗಳಿಂದ ಕೈಗಾರಿಕಾ ಅಧ್ಯಯನ ಪ್ರವಾಸ
    • ಮಹಿಳಾ ಅಭಿವೃದ್ಧಿ ನಿಗಮದ ವಿವಿಧ ಯೋಜನೆ: ಅರ್ಜಿ ಸಲ್ಲಿಕೆ-ಅವಧಿ ವಿಸ್ತರಣೆ

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.