ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಜಿಲ್ಲೆಯ ಬಿಜೆಪಿ ಶಾಸಕರುಗಳು ಕಾಂಗ್ರೆಸ್ ಪಕ್ಷದ ಪಂಚ ಗ್ಯಾರಂಟಿಗಳನ್ನು ಟೀಕಿಸುತ್ತಾ, ಸರ್ಕಾರ ದಿವಾಳಿಯಾಗಿದೆ, ಕ್ಷೇತ್ರಕ್ಕೆ ಅನುದಾನ ಬರುತ್ತಿಲ್ಲಾ ಎನ್ನುವ ಅನಗತ್ಯ ಟೀಕೆಗಳನ್ನು ಮಾಡುತ್ತಿದ್ದರೆ ಎಂದು ಉಡುಪಿ ಜಿಲ್ಲಾ ಕಾಂಗ್ರೆಸ್ ವಕ್ತಾರ ಕೆ. ವಿಕಾಸ್ ಹೆಗ್ಡೆ ಹೇಳಿದ್ದಾರೆ.
ಕುಂದಾಪುರ ವಿಧಾನ ಸಭಾ ಕ್ಷೇತ್ರದಲ್ಲಿ ಪಂಚ ಗ್ಯಾರಂಟಿಗಳ ಯಶಸ್ವಿ ಅನುಷ್ಠಾನದ ಜೊತೆ ರಾಜ್ಯ ಹೆದ್ದಾರಿಗಳಿಗೆ, ಜಿಲ್ಲಾ ಮುಖ್ಯ ರಸ್ತೆಗಳಿಗೆ ಮರು ಡಾಂಬರಿಕರಣ ಮಾಡಿ ರಸ್ತೆ ಅಗಲಗೋಳಿಸುತ್ತಿರುವ, ಕುಂದಾಪುರ ರಿಂಗ್ ರಸ್ತೆಗೆ ಕಾಂಕ್ರೀಟಿಕರಣ ಮಾಡುತ್ತಿರುವ, ಕುಂದಾಪುರದಲ್ಲಿ ನೂತನ ಪ್ರವಾಸಿ ಮಂದಿರ ನಿರ್ಮಾಣ ಮಾಡುತ್ತಿರುವ, ಲೋಕೋಪಯೋಗಿ ಇಲಾಖೆಯ ಮೂಲಕ ಹಲವಾರು ರಸ್ತೆ ಹಾಗೂ ಸೇತುವೆಗಳನ್ನು ನಿರ್ಮಾಣ ಮಾಡುತ್ತಿರುವ, ಸಣ್ಣ ನೀರಾವರಿ, ಬೃಹತ್ ನೀರಾವರಿ, ಜಿಲ್ಲಾ ಪಂಚಾಯತ್, ತಾಲ್ಲೂಕು ಪಂಚಾಯತ್ ಗಳ ಅನುದಾನದ ಮೂಲಕ ಹಲವಾರು ಕಾಮಗಾರಿಗಳನ್ನು ನಿರ್ವಹಿಸುತ್ತಿರುವ, ಕೃಷಿ, ತೋಟಗಾರಿಕೆ ಇಲಾಖೆಗಳ ಮೂಲಕ ಕೃಷಿಕರಿಗೆ ಸವಲತ್ತು ನೀಡುತ್ತಿರುವ, ಎಸ್‌ಸಿಪಿ, ಟಿಎಸ್‌ಪಿ ಅನುದಾನದಡಿ ಹಲವಾರು ಕಾಮಗಾರಿಗಳನ್ನು ನಿರ್ವಹಿಸುತ್ತಿರುವ ಹಾಗೂ ಅರ್ಹ ಫಲಾನುಭವಿಗಳಿಗೆ ಸವಲತ್ತುಗಳನ್ನು ವಿತರಿಸುತ್ತಿರುವ ಕರ್ನಾಟಕ ರಾಜ್ಯ ಸರ್ಕಾರಕ್ಕೆ ಅವರು ಕೃತಜ್ಞತೆ ಸಲ್ಲಿಸಿದ್ದಾರೆ.