ಗ್ರಾಮೀಣ, ನಗರ ಪುನರ್ವಸತಿ ಕಾರ್ಯಕರ್ತರ ಹುದ್ದೆ: ಅರ್ಜಿ ಆಹ್ವಾನ

Click Here

Call us

Call us

Call us

Call us

ಕುಂದಾಪ್ರ ಡಾಟ್‌ ಕಾಂ ಸುದ್ದಿ.
ಉಡುಪಿ:
ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ ವಿಕಲಚೇತನರಿಗಾಗಿ ಇಲಾಖೆಯ ಸೌಲಭ್ಯಗಳನ್ನು ತಲುಪಿಸುವ ನಿಟ್ಟಿನಲ್ಲಿ ಜಿಲ್ಲೆಯ ನಗರಸಭೆ ವ್ಯಾಪ್ತಿಯಲ್ಲಿ 02, ಪುರಸಭೆ ಮತ್ತು ಪಟ್ಟಣ ಪಂಚಾಯತ್‌ಗಳಲ್ಲಿ ತಲಾ 01 ರಂತೆ ಮಾಸಿಕ ರೂ. 9000 ಗೌರವಧನದ ನೆಲೆಯಲ್ಲಿ “ನಗರ ಪುನರ್ವಸತಿ ಕಾರ್ಯಕರ್ತರ” (ಯು.ಆರ್.ಡಬ್ಲೂಯ) ಹಾಗೂ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ತಲಾ 01 ರಂತೆ ಮಾಸಿಕ 9,000 ಗೌರವಧನದ ನೆಲೆಯಲ್ಲಿ “ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ” (ವಿ.ಆರ್.ಡಬ್ಲೂಯ) ನೇಮಕಾತಿ ಮಾಡಿಕೊಳ್ಳಲು ಅರ್ಹ ವಿಕಲಚೇತನ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

Click Here

Call us

Click Here

ವಿ.ಆರ್.ಡಬ್ಲೂಯ ನೇಮಕಾತಿಗಾಗಿ ಬಾಕಿ ಇರುವ ಗ್ರಾಮ ಪಂಚಾಯತ್‌ಗಳ ವಿವರ: ಉಡುಪಿ ತಾಲೂಕಿನ ಕಡೆಕಾರು ಹಾಗೂ ಮಣಿಪುರ, ಬ್ರಹ್ಮಾವರ ತಾಲೂಕಿನ 38 ಕಳತ್ತೂರು ಹಾಗೂ ಹೆಗ್ಗುಂಜೆ, ಹೆಬ್ರಿ ತಾಲೂಕಿನ ಹೆಬ್ರಿ, ಶಿವಪುರ ಹಾಗೂ ಬೆಳ್ವೆ, ಕಾಪು ತಾಲೂಕಿನ ಬೆಳಪು, ಮಜೂರು ಹಾಗೂ ಹೆಜಮಾಡಿ, ಕುಂದಾಪುರ ತಾಲೂಕಿನ ಕೆರಾಡಿ ಮತ್ತು ಕಾರ್ಕಳ ತಾಲೂಕಿನ ಕಲ್ಯಾ. ಯು.ಆರ್.ಡಬ್ಲೂಯ ನೇಮಕಾತಿಗಾಗಿ ಖಾಲಿ ಇರುವ ಸ್ಥಳೀಯ ಸಂಸ್ಥೆ -ಕುಂದಾಪುರ ಪುರಸಭೆ.

ಎಸ್.ಎಸ್.ಎಲ್.ಸಿ ಉತ್ತೀರ್ಣ ಅಥವಾ ಅನುತ್ತೀರ್ಣರಾಗಿರುವ, ಶೇ.40 ಕ್ಕಿಂತ ಮೇಲ್ಪಟ್ಟು ವಿಕಲತೆ ಇರುವ ಬಗ್ಗೆ ವೈದ್ಯಕೀಯ ಪ್ರಾಧಿಕಾರದಿಂದ ನೀಡಲ್ಪಟ್ಟಿರುವ ವಿಕಲಚೇತನರ ವಿಶಿಷ್ಟ ಗುರುತುಚೀಟಿ (ಯು.ಡಿ.ಐ.ಡಿ ಕಾರ್ಡ್) ಮತ್ತು ವೈದ್ಯಕೀಯ ಪ್ರಮಾಣ ಪತ್ರ ಹೊಂದಿರುವ ವಿಕಲಚೇತನರು ತಮ್ಮ ವಾಸಸ್ಥಳ ವ್ಯಾಪ್ತಿಯ ಪುರಸಭೆ, ಪಟ್ಟಣ ಪಂಚಾಯತ್ ಅಥವಾ ಗ್ರಾಮ ಪಂಚಾಯತ್‌ನಿಂದ ಪಡೆದ ವಾಸ್ತವ್ಯ ದೃಢೀಕರಣ ಪತ್ರ ಹಾಗೂ 3 ಪಾಸ್‌ಪೋರ್ಟ್ ಅಳತೆಯ ಭಾವಚಿತ್ರಗಳೊಂದಿಗೆ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳು, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ರಜತಾದ್ರಿ, ಮಣಿಪಾಲ, ಉಡುಪಿ ಇವರಿಗೆ ಮೇ 20 ರ ಒಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ.

ಪುರಸಭೆ, ಪಟ್ಟಣ ಪಂಚಾಯತ್ ಹಾಗೂ ತಾಲ್ಲೂಕು ಪಂಚಾಯತ್ ಮುಖ್ಯಸ್ಥರ ಆಯ್ಕೆ ಸಮಿತಿ ಮೂಲಕ ನಗರ ಹಾಗೂ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರನ್ನು ಆಯ್ಕೆ ಮಾಡಲಾಗುವುದು.

 ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳ ಕಛೇರಿ ದೂ.ಸಂಖ್ಯೆ: 0820-2574810, 2574811 ಅಥವಾ ತಾಲೂಕು ಪಂಚಾಯತ್‌ನಲ್ಲಿರುವ ಎಂ.ಆರ್.ಡಬ್ಲೂಯ. (ವಿವಿಧೋದ್ಧೇಶ ಪುನರ್ವಸತಿ ಕಾರ್ಯಕರ್ತರು) ರನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

Click here

Click here

Click here

Call us

Call us

Leave a Reply