ಡಿಪ್ಲೋಮಾ ಇಂಜಿನಿಯರಿಂಗ್ ಕೋರ್ಸುಗಳ ಪ್ರವೇಶಾತಿ: ಅರ್ಜಿ ಆಹ್ವಾನ

Click Here

Call us

Call us

Call us

Call us

ಕುಂದಾಪ್ರ ಡಾಟ್‌ ಕಾಂ ಸುದ್ದಿ.
ಉಡುಪಿ:
ಕಾರ್ಕಳದ ಪ್ರತಿಷ್ಠಿತ ತಾಂತ್ರಿಕ ಶಿಕ್ಷಣ ಸಂಸ್ಥೆ ಸರ್ಕಾರಿ ಪಾಲಿಟೆಕ್ನಿಕ್‌ನಲ್ಲಿ ಪ್ರಸಕ್ತ ಸಾಲಿನ ಡಿಪ್ಲೊಮಾ ಇಂಜಿನಿಯರಿಂಗ್ ಕೋರ್ಸುಗಳಿಗೆ ಪ್ರವೇಶ ಪ್ರಕ್ರಿಯೆ ಆರಂಭಗೊಂಡಿದ್ದು, ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

Click Here

Call us

Click Here

ಎಸ್.ಎಸ್.ಎಲ್.ಸಿ ಉತ್ತೀರ್ಣ ಹಾಗೂ ಪಿಯುಸಿ ಉತ್ತೀರ್ಣ/ಅನುತ್ತೀರ್ಣರಾಗಿರುವ ವಿದ್ಯಾರ್ಥಿಗಳಿಗೆ 3 ವರ್ಷಗಳ ಅವಧಿಯ ಮೆಕ್ಯಾನಿಕಲ್ ಇಂಜಿನಿಯರಿಂಗ್, ಸಿವಿಲ್ ಇಂಜಿನಿಯರಿಂಗ್, ಇಲೆಕ್ಟ್ರಾನಿಕ್ಸ್ & ಕಮ್ಯುನಿಕೇಷನ್ ಇಂಜಿನಿಯರಿಗ್ ಹಾಗೂ ಕಂಪ್ಯೂಟರ್ ಸೈನ್ಸ್ & ಇಂಜಿನಿಯರಿಂಗ್ ಕೋರ್ಸುಗಳು ಲಭ್ಯವಿದ್ದು, ಮೆರಿಟ್ ಆಧಾರಿತ ಮೊದಲು ಬಂದವರಿಗೆ ಆದ್ಯತೆ ನೆಲೆಯಲ್ಲಿ ಸೀಟು ಹಂಚಿಕೆ ಮಾಡಲಾಗುವುದು.

ಅತೀ ಕಡಿಮೆ ಸರ್ಕಾರಿ ಶುಲ್ಕ, ವಿದ್ಯಾರ್ಥಿ ವೇತನ ಸೌಲಭ್ಯ, ನುರಿತ, ಅನುಭವಿ ಬೋಧಕ ವೃಂದ, ಸುಸಜ್ಜಿತ ಕಟ್ಟಡಗಳ ಸಮುಚ್ಚಯ, ಪ್ರಯೋಗಾಲಯಗಳು, ಉತ್ತಮ ಕಲಿಕಾ ವಾತಾವರಣವಿದ್ದು ಡಿಪ್ಲೊಮಾ ಪಾಸಾದ ವಿದ್ಯಾರ್ಥಿಗಳಿಗೆ ಸರ್ಕಾರಿ ಇಲಾಖೆಗಳಲ್ಲಿ ಜೆಇ/ಜೆಟಿಓ ಹುದ್ದೆಗಳು ಸೇರಿದಂತೆ ಅರೆ-ಸರಕಾರಿ ಹಾಗೂ ಖಾಸಗಿ ಉದ್ದಿಮೆಗಳಲ್ಲಿ ವಿಫುಲ ಉದ್ಯೋಗಾವಕಾಶಗಳಿವೆ.

ದಾಖಲಾತಿ ಕುರಿತ ಹೆಚ್ಚಿನ ಮಾಹಿತಿಗಾಗಿ ಪ್ರಾಂಶುಪಾಲರಾದ ಕುಮಾರ ಕೆ.ಎಂ. ಮೊ.ನಂ:9731575859, ಪ್ರವೇಶ ನಿರ್ವಾಹಕ ಗುಣಪಾಲ ಜೈನ್ ಎಂ. 9901631044 ಅಥವಾ ಕಚೇರಿ ದೂರವಾಣಿ ಸಂಖ್ಯೆ: 08258-298240 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಸಂಸ್ಥೆಯ ಪ್ರಾಂಶುಪಾಲರ ಕಚೇರಿ ಪ್ರಕಟಣೆ ತಿಳಿಸಿದೆ.

Leave a Reply