ಕುಂದಾಪ್ರ ಡಾಟ್ ಕಾಂ ಸುದ್ದಿ.
ಗಂಗೊಳ್ಳಿ: 2024-25ನೇ ಸಾಲಿನಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ರಾಜ್ಯ ಮಟ್ಟದಲ್ಲಿ 7ನೇ ರ್ಯಾಂಕ್ ಪಡೆದ ಗಂಗೊಳ್ಳಿಯ ಎಸ್.ವಿ. ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿ ಮನಾಲಿ ಅವರನ್ನು ಗಂಗೊಳ್ಳಿಯ ಜಿ.ಎಸ್.ವಿ.ಎಸ್. ಅಸೋಸಿಯೇಶನ್ ಪರವಾಗಿ ಅವರ ಸ್ವಗೃಹದಲ್ಲಿ ಸನ್ಮಾನಿಸಿ ಗೌರವಿಸಲಾಯಿತು.
ಜಿ.ಎಸ್.ವಿ.ಎಸ್.ಅಸೋಸಿಯೇಶನ್ ಅಧ್ಯಕ್ಷ ಡಾ. ಕಾಶೀನಾಥ ಪೈ, ಕಾರ್ಯದರ್ಶಿ ಎಚ್. ಗಣೇಶ ಕಾಮತ್, ಸರಸ್ವತಿ ವಿದ್ಯಾಲಯ ವಿದ್ಯಾಸಂಸ್ಥೆಗಳ ಸಂಚಾಲಕ ಎನ್. ಸದಾಶಿವ ನಾಯಕ್, ಶಾಲೆಯ ಆಡಳಿತ ಮಂಡಳಿ ಸದಸ್ಯರಾದ ಜಿ. ಗೋವಿಂದ್ರಾಯ ಆಚಾರ್ಯ, ಕೆ. ರಾಮನಾಥ ನಾಯಕ್, ಎನ್. ಅಶ್ವಿನ್ ನಾಯಕ್, ಎಂ. ನಾಗೇಂದ್ರ ಪೈ, ಎಸ್.ವಿ. ಆಂಗ್ಲ ಮಾಧ್ಯಮ ಶಾಲೆಯ ಮುಖೋಪಾಧ್ಯಾಯ ರಾಘವೇಂದ್ರ ಶೇರುಗಾರ್, ಸಹಶಿಕ್ಷಕಿ ಸುಜಾತ, ಮಂಜುನಾಥ ಖಾರ್ವಿ, ಮಂಜು ಟೈಲರ್ ಮತ್ತಿತರರು ಉಪಸ್ಥಿತರಿದ್ದರು.