ಗ್ರಾ.ಪಂ. ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ: ಚುನಾವಣಾಧಿಕಾರಿಗಳ ನೇಮಕ

Click Here

Call us

Call us

Call us

Call us

ಕುಂದಾಪ್ರ ಡಾಟ್‌ ಕಾಂ ಸುದ್ದಿ.
ಉಡುಪಿ:
ವಿವಿಧ ಕಾರಣಗಳಿಂದ ತೆರವಾಗಿರುವ ಜಿಲ್ಲೆಯ ಬ್ರಹ್ಮಾವರ ತಾಲೂಕಿನ 11 ನೇ ಆವರ್ಸೆ ಗ್ರಾಮ ಪಂಚಾಯತ್‌ನ ಮುಂದಿನ ಅವಧಿಗೆ ಅಧ್ಯಕ್ಷ ಸ್ಥಾನವನ್ನು (ಮೀಸಲಾತಿ-ಹಿಂದುಳಿದ ವರ್ಗ ಅ) ಆಯ್ಕೆ ಮಾಡುವ ಸಲುವಾಗಿ ಬ್ರಹ್ಮಾವರ ಕ್ಷೇತ್ರ ಶಿಕ್ಷಣಾಧಿಕಾರಿ ಶಬನಾ ಅಂಜುಂ ಅವರನ್ನು ಹಾಗೂ ಬಿಲ್ಲಾಡಿ ಗ್ರಾಮ ಪಂಚಾಯತ್‌ನ ಉಪಾಧ್ಯಕ್ಷ ಸ್ಥಾನವನ್ನು (ಮೀಸಲಾತಿ-ಸಾಮಾನ್ಯ) ಆಯ್ಕೆ ಮಾಡುವ ಸಲುವಾಗಿ ಕೋಟ ವಲಯ ಕೃಷಿ ಅಧಿಕಾರಿ ಸುಪ್ರಭ ಅವರನ್ನು ಗೊತ್ತು ಪಡಿಸಿದ ಅಧಿಕಾರಿಯನ್ನಾಗಿ ನೇಮಿಸಲಾಗಿದೆ.

Click Here

Call us

Click Here

ಸದ್ರಿರವರು ಕರ್ನಾಟಕ ಪಂಚಾಯತ್ ರಾಜ್ ಅಧಿನಿಯಮ 1993 ರ ಪ್ರಕರಣ 45 ಹಾಗೂ (ಗ್ರಾಮ ಪಂಚಾಯತ್ ಅಧ್ಯಕ್ಷ ಚುನಾವಣೆ) ನಿಯಮಗಳು 1995 ರ ನಿಯಮ 4 ರಿಂದ 11 ರವರೆಗಿನ ನಿಯಮದಂತೆ ಚುನಾವಣೆ ನಡೆಸಿ, ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನವನ್ನು ಆಯ್ಕೆ ಮಾಡುವಂತೆ ಜಿಲ್ಲಾ ಚುನಾವಣಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ಡಾ. ಕೆ ವಿದ್ಯಾ ಕುಮಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply