ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ರಾಜ್ಯದಲ್ಲಿನ ತಾಲೂಕು ಆಸ್ಪತ್ರೆ ಹಾಗೂ ಜಿಲ್ಲಾ ಆಸ್ಪತ್ರೆಗಳಲ್ಲಿನ ಇ- ಆಸ್ಪತ್ರೆಯ ಡಾಟಾ ಎಂಟ್ರಿ ಆಪರೇಟರ್ ಸಿಬ್ಬಂದಿಗಳನ್ನು ಕೈ ಬಿಡುವ ವಿಚಾರ ಸದ್ಯಕ್ಕೆ ತಡೆಹಿಡಿಯಲಾಗಿದ್ದು ಇರುವ ಸಿಬ್ಬಂದಿಗಳನ್ನೇ ಮುಂದುವರಿಸುವ ಬಗ್ಗೆ ಸಚಿವರು ಭರವಸೆ ನೀಡಿದ್ದಾರೆ ಎಂದು ಕುಂದಾಪುರ ಶಾಸಕ ಕಿರಣ್ ಕುಮಾರ್ ಕೊಡ್ಗಿ ತಿಳಿಸಿದ್ದಾರೆ.

ಇ- ಆಸ್ಪತ್ರೆಯ ಡಾಟಾ ಎಂಟ್ರಿ ಆಪರೇಟರ್ ಸಿಬ್ಬಂದಿಗಳನ್ನು ಕೈ ಬಿಡುವ ವಿಚಾರ ಶಾಸಕರಾದ ಎ. ಕಿರಣ್ ಕುಮಾರ್ ಕೊಡ್ಗಿ ಅವರು ಗಮನಕ್ಕೆ ಬಂದ ನಂತರದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಚಿವರಾದ ದಿನೇಶ್ ಗುಂಡೂರಾವ್ ರವರನ್ನು ಭೇಟಿ ಮಾಡಿ, ಮನವಿಯನ್ನ ಸಲ್ಲಿಸಿದ್ದು ಕುಂದಾಪುರ ಉಪ ವಿಭಾಗೀಯ ಸಾರ್ವಜನಿಕ ಆಸ್ಪತ್ರೆ ಮತ್ತು ತಾಯಿ ಮಕ್ಕಳ ಹೆರಿಗೆ ಆಸ್ಪತ್ರೆಯಲ್ಲಿ ಪ್ರಸ್ತುತ ಸೇವೆ ಸಲ್ಲಿಸುತ್ತಿದ್ದ 5ಜನ ಡಾಟಾ ಎಂಟ್ರಿ ಆಪರೇಟರ್ ಮುಂದುವರಿಸುವ ಬಗ್ಗೆ ಕೋರಿದ್ದರು.
ಇದಕ್ಕೆ ಪೂರಕವಾಗಿ ಸ್ಪಂದನೆ ನೀಡಿದ ಸಚಿವರು ಕುಂದಾಪುರದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಯಾವುದೇ ಸಿಬ್ಬಂದಿಯನ್ನ ಕಡಿತಗೊಳಿಸಿದಂತೆ ಇಲಾಖೆಗೆ ಸೂಚನೆ ನೀಡಿದ್ದಾರೆ. ಅದರಂತೆ ಎಲ್ಲಾ ಸಿಬ್ಬಂದಿಗಳು ತಮ್ಮ ಕರ್ತವ್ಯದಲ್ಲಿ ಮುಂದುವರೆಯಲು ಅವಕಾಶವನ್ನು ಕಲ್ಪಿಸಲಾಗಿದೆ ಎಂದು ತಿಳಿದುಬಂದಿದೆ.










