ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಕಾಂತಾರ ಚಾಪ್ಟರ್ – 1 ಸಿನಿಮಾದಲ್ಲಿ ಜ್ಯೂನಿಯರ್ ಆರ್ಟಿಸ್ಟ್ ಆಗಿದ್ದ ಕೇರಳ ಮೂಲಕ ಯುವಕ ನದಿಯಲ್ಲಿ ಮುಳುಗಿ ಮೃತಪಟ್ಟ ಘಟನೆ ನಡೆದಿದೆ. ಕೊಲ್ಲೂರು ಸೌಪರ್ಣಿಕಾ ನದಿಯಲ್ಲಿ ಮುಳುಗಿ ಎಂ.ಎಫ್. ಕಪಿಲ್ ಮೃತಪಟ್ಟಿದ್ದಾರೆ.
ಶೂಟಿಂಗ್ ಮುಗಿಸಿ ಮಧ್ಯಾಹ್ನದ ಊಟದ ಬಳಿಕ ಕೊಲ್ಲೂರಿನ ಸೌಪರ್ಣಿಕ ನದಿಯಲ್ಲಿ ಕಪಿಲ್ ಅವರು ತಮ್ಮ ತಂಡದವರ ಜೊತೆ ಈಜಲು ತೆರಳಿದ್ದರು. ನೀರಿನ ಆಳ ತಿಳಿಯದೇ ಅವರು ನದಿಗೆ ಇಳಿದರು. ಈ ವೇಳೆ ಅವರು ಮುಳುಗಿ ಸಾವಿಗೀಡಾಗಿದ್ದಾರೆ. ಸಂಜೆ ಅವರ ಮೃತದೇಹವನ್ನು ಅಗ್ನಿಶಾಮಕ ದಳದ ಸಹಾಯದಿಂದ ಮೇಲಕ್ಕೆತ್ತಲಾಯಿತು.
ಕೊಲ್ಲೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.