ಗಂಗೊಳ್ಳಿಯಲ್ಲಿ ಪ್ರತಿಭಾ ಪುರಸ್ಕಾರ ಮತ್ತು ಪುಸ್ತಕ ವಿತರಣೆ ಕಾರ್ಯಕ್ರಮ

Click Here

Call us

Call us

Call us

Call us

ಕುಂದಾಪ್ರ ಡಾಟ್‌ ಕಾಂ ಸುದ್ದಿ.
ಗಂಗೊಳ್ಳಿ:
ಹಳೆಯ ಸೋಲುಗಳ ಬಗ್ಗೆ ಚಿಂತಿಸುತ್ತ ಕೂರುವುದರ ಬದಲು ಮುಂದಿನ ಗೆಲುವುಗಳ ಬಗ್ಗೆ ಯೋಜನೆಯನ್ನು ಹಾಕಿಕೊಳ್ಳಬೇಕು. ಛಲ ಬದ್ಧತೆ ಮತ್ತು ಪರಿಶ್ರಮದಿಂದ  ಹೊಸ ಚರಿತ್ರೆ ಸೃಷ್ಟಿಸಲು ಸಾಧ್ಯ ಎಂದು ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕ  ನರೇಂದ್ರ ಎಸ್. ಗಂಗೊಳ್ಳಿ ಅಭಿಪ್ರಾಯಪಟ್ಟರು. 

Click Here

Call us

Click Here

ಅವರು ಕಲಾಶ್ರೀ ಶಿಕ್ಷಣ ಪ್ರೇಮಿಗಳ ಬಳಗದ ವತಿಯಿಂದ ಮೇಲ್ ಗಂಗೊಳ್ಳಿಯ  ಅಂಬೇಡ್ಕರ್ ಭವನದಲ್ಲಿ ನಡೆದ ವಿದ್ಯಾರ್ಥಿ ಪ್ರತಿಭಾ ಪುರಸ್ಕಾರ ಮತ್ತು ಪುಸ್ತಕ ವಿತರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು. 

ಈ ಸಂದರ್ಭದಲ್ಲಿ ರಾಜ್ಯಮಟ್ಟದಲ್ಲಿ ಎರಡನೇ ರಾಂಕ್ ಗಳಿಸಿದ ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಎಸ್ಎಸ್ಎಲ್ ಸಿ ವಿದ್ಯಾರ್ಥಿನಿ ಸುಶ್ಮಿತಾ ಎಸ್. ಗಾಣಿಗ, ಸರಸ್ವತಿ ವಿದ್ಯಾಲಯ  ಪದವಿ ಪೂರ್ವ ಕಾಲೇಜಿನ ಅಗ್ರಸ್ಥಾನಿ ಕ್ಷಮಾ ಆರ್ ಆಚಾರ್ಯ, ಪಿಯುಸಿ ಯಲ್ಲಿ ಉತ್ತಮ ಸಾಧನೆ ಮಾಡಿದ ಜಯಶ್ರೀ ಮತ್ತು ಜ್ಯೋತಿಕಾ ಹಾಗೂ ಎಸ್ ಎಸ್ ಎಲ್ ಸಿ ಯಲ್ಲಿ ಉತ್ತಮ ಅಂಕಗಳನ್ನು ಗಳಿಸಿದ ರಿಷಿಕೇಶ, ಜ್ಯೋತಿಕಾ, ಸಂಜನಾ ಖಾರ್ವಿ ಮತ್ತು ಭಾಸ್ಕರ್ ಅವರನ್ನು ಸನ್ಮಾನಿಸಲಾಯಿತು. ಅರ್ಹ ವಿದ್ಯಾರ್ಥಿಗಳನ್ನು ಗುರುತಿಸಿ ಉಚಿತ ಪುಸ್ತಕಗಳು ಮತ್ತು ಕಲಿಕಾ ಸಾಮಗ್ರಿಗಳನ್ನು ವಿತರಿಸಲಾಯಿತು.

ಗಂಗೊಳ್ಳಿಯ ಗ್ರಾಮ ಪಂಚಾಯತ್ ಸದಸ್ಯ ಚಂದ್ರ ಖಾರ್ವಿ ಅಧ್ಯಕ್ಷತೆ ವಹಿಸಿದ್ದರು.  ಉಪ ವಲಯ ಅರಣ್ಯಾಧಿಕಾರಿ ಕೆ. ಸದಾಶಿವ  ಶುಭ ಹಾರೈಸಿದರು. ಗಂಗೊಳ್ಳಿ ಗ್ರಾಮ ಪಂಚಾಯತ್ ಉಪಾಧ್ಯಕ್ಷ ತಬ್ರೇಜ್, ಕೆನರಾ ಬ್ಯಾಂಕಿನ  ನಿವೃತ್ತ ಉದ್ಯೋಗಿ ಪ್ರಮೋದ್ ಗಾಣಿಗ, ಅಂಬೇಡ್ಕರ್ ಸೇನೆಯ ಉಡುಪಿ ಜಿಲ್ಲಾಧ್ಯಕ್ಷ ಸತೀಶ್ ಕಂಚುಗೋಡು, ಕಲಾಶ್ರೀ ಶಿಕ್ಷಣ ಪ್ರೇಮಿ ಬಳಗದ ಅಧ್ಯಕ್ಷೆ ಸುಮಿತ್ರ ಈಶ್ವರ್, ಅರ್ಚನ ಮಹಿಳಾ ಮಂಡಲದ ಅಧ್ಯಕ್ಷೆ ಜ್ಯೋತಿ ಆನಂದ ಉಪಸ್ಥಿತರಿದ್ದರು. 

ಕಲಾಶ್ರೀ ಶಿಕ್ಷಣ ಪ್ರೇಮಿಗಳ ಬಳಗದ ಗೌರವಾಧ್ಯಕ್ಷರಾದ ಈಶ್ವರ ಗಂಗೊಳ್ಳಿ ಅತಿಥಿಗಳನ್ನು  ಸ್ವಾಗತಿಸಿದರು. ಶಂಕರ  ಕಾರ್ಯಕ್ರಮವನ್ನು ನಿರೂಪಿಸಿ ವಂದಿಸಿದರು.

Click here

Click here

Click here

Call us

Call us

Leave a Reply