ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: 2024-25 ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ ತೆಕ್ಕಟ್ಟೆಯ ವಿಶ್ವ ವಿನಾಯಕ ಸಿ.ಬಿ.ಎಸ್.ಇ ಸ್ಕೂಲ್ ಸತತ 12 ನೇ ಬಾರಿ ಶೇ. 100 ರಷ್ಟು ಫಲಿತಾಂಶ ದಾಖಲಿಸಿದ್ದಾರೆ.
ವಿದ್ಯಾರ್ಥಿಗಳಾದ ಸ್ನೇಹ ಎಸ್. ಆಚಾರ್ಯ (455), ಕೀರ್ತನಾ ಶೆಟ್ಟಿ (453), ಆಯಿಷಾ ಸಮಾ (447), ಹಂಸವಿ ಕಾಂಚನ್ (444), ಸೈಯದ್ ಅನಾಸ್ (435), ಕೀರ್ತನಾ ಕೆ. ಶೆಟ್ಟಿ (426), ಹರ್ಷಿತಾ ಶೆಟ್ಟಿ (410), ದೀಪ್ತಿ (408), ತುಷಾರ ಜಿ. ಆಚಾರ್ಯ (401) ಅಂಕಗಳನ್ನು ಗಳಿಸಿದ್ದಾರೆ.
ಪರೀಕ್ಷೆಗೆ ಹಾಜರಾಗಿದ್ದು ಒಟ್ಟು 60 ವಿದ್ಯಾರ್ಥಿಗಳಲ್ಲಿ 9 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ, 22 ವಿದ್ಯಾರ್ಥಿಗಳು ಉನ್ನತ ಶ್ರೇಣಿಯಲ್ಲಿ, 17 ವಿದ್ಯಾರ್ಥಿಗಳು ಪ್ರಥಮ ದರ್ಜೆಯಲಿ, 12 ವಿದ್ಯಾರ್ಥಿಗಳು ದ್ವಿತೀಯ ದರ್ಜೆಯಲ್ಲಿ ಉತ್ತೀರ್ಣರಾಗಿರುತ್ತಾರೆ ಎಂದು ಶಾಲಾ ಪ್ರಾಂಶುಪಾಲ ನಿತಿನ್ ಡಿ. ಆಲ್ಮೇಡಾ ತಿಳಿಸಿದರು.
ಉತ್ತಮ ಫಲಿತಾಂಶವನ್ನು ಗಳಿಸಿದ ವಿದ್ಯಾರ್ಥಿಗಳಿಗೆ ಶಿಕ್ಷಕ ವೃಂದದವರಿಗೆ ಹಾಗೂ ಸಹಕರಿಸಿದ ಪೋಷಕರಿಗೆ ಶಾಲಾ ಮ್ಯಾನೆಜಿಂಗ್ ಡೈರೆಕ್ಟರ್ ಎಮ್. ಪ್ರಭಾಕರ ಶೆಟ್ಟಿ ಅವರು ಅಭಿನಂದನೆಗಳನ್ನು ತಿಳಿಸಿದರು.










