ಜಿಲ್ಲೆಯಲ್ಲಿ ಮಾದಕ ವಸ್ತುಗಳ ಸಂಪೂರ್ಣ ನಿಯಂತ್ರಣಕ್ಕೆ ಕ್ರಮ ವಹಿಸಿ: ಜಿಲ್ಲಾಧಿಕಾರಿ

Click Here

Call us

Call us

Call us

Call us

ಕುಂದಾಪ್ರ ಡಾಟ್‌ ಕಾಂ ಸುದ್ದಿ.
ಉಡುಪಿ:
ಜಿಲ್ಲೆಯಲ್ಲಿ ಮಾದಕ ವಸ್ತುಗಳ ಸಾಗಾಣಿಕೆ, ಮಾರಾಟ ಹಾಗೂ ಅವುಗಳ ಬಳಕೆಯಾಗುವುದನ್ನು ಸಂಪೂರ್ಣವಾಗಿ ನಿಯಂತ್ರಿಸಲು ಎಲ್ಲಾ ಇಲಾಖೆಗಳು ಸಮನ್ವಯದೊಂದಿಗೆ ಕಾರ್ಯನಿರ್ವಹಿಸಿ ಎಂದು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಅಧಿಕಾರಿಗಳಿಗೆ ಸೂಚನೆ ನೀಡಿದರು.

Click Here

Call us

Click Here

ಅವರು ಅಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಎನ್.ಸಿ.ಓ.ಆರ್.ಡಿ (Narco Co-ordination Center) ಜಿಲ್ಲಾ ಮಟ್ಟದ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಮಾದಕ ವಸ್ತುಗಳಿಗೆ ಯುವ ಸಮುದಾಯ ಹೆಚ್ಚು ಆಕರ್ಷಿತವಾಗುತ್ತಿದೆ. ಇವುಗಳ ಬಳಕೆಯಿಂದ ದೇಹದ ಮೇಲಾಗುವ ದುಷ್ಪರಿಣಾಮಗಳ ಬಗ್ಗೆ ಅರಿವು ಮೂಡಿಸಿ, ಇವುಗಳಿಂದ ದೂರ ಉಳಿಯುವಂತೆ ನೋಡಿಕೊಳ್ಳಲು ಜಾಗೃತಿ ಕಾರ್ಯಕ್ರಮಗಳು ಹಾಗೂ ವಿವಿಧ ಸ್ಪರ್ಧೆಗಳನ್ನು ಹೆಚ್ಚು ಹೆಚ್ಚು ವಿದ್ಯಾಸಂಸ್ಥೆಗಳಲ್ಲಿ ಮಾಡಬೇಕು ಎಂದು ಸೂಚನೆ ನೀಡಿದ ಅವರು, ಈಗಾಗಲೇ ಕೆಲವು ವಿದ್ಯಾಸಂಸ್ಥೆಗಳಲ್ಲಿ ಈ ರೀತಿಯ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಇವುಗಳು ಎಷ್ಟು ಪ್ರಮಾಣದಲ್ಲಿ ಉಪಯುಕ್ತವಾಗುತ್ತದೆ ಎಂಬ ಬಗ್ಗೆಯೂ ಮಾಹಿತಿ ಕಲೆ ಹಾಕಬೇಕು ಎಂದರು.

ತಂಬಾಕು ಉತ್ಪನ್ನಗಳು ಸೇರಿದಂತೆ ಮಾದಕ ವಸ್ತುಗಳ ದುಶ್ಚಟಗಳಿಗೆ ಕಾರ್ಮಿಕರು ವ್ಯಸನಿಗಳಾಗುತ್ತಿದ್ದಾರೆ.  ಇವರಿಗೂ ಸಹ ಅರಿವು ಮೂಡಿಸುವುದು ಸೇರಿದಂತೆ ಮನಪರಿವರ್ತಿತ ಕಾರ್ಯಕ್ರಮಗಳನ್ನು ಕಾರ್ಮಿಕ ಇಲಾಖೆಯ ವತಿಯಿಂದ ಅವರು ಕಾರ್ಯನಿರ್ವಹಿಸುತ್ತಿರುವ ಸ್ಥಳಗಳಲ್ಲಿ ಹಮ್ಮಿಕೊಂಡು ಇವುಗಳಿಂದ ದೂರ ಉಳಿಯುವ ಹಾಗೆ ನೋಡಿಕೊಳ್ಳಬೇಕು ಎಂದು ಕಾರ್ಮಿಕ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಕೃಷಿ, ತೋಟಗಾರಿಕೆ, ಅರಣ್ಯ ಇಲಾಖೆಯ ಸಿಬ್ಬಂದಿಗಳು ಆಗಿಂದಾಗ್ಗೆ ಕೃಷಿ ಜಮೀನುಗಳು, ತೋಟಗಳಿಗೆ ಭೇಟಿ ನೀಡಿ, ಗಾಂಜಾ ಬೆಳೆಗಳನ್ನು ಬೆಳೆಯುತ್ತಿದ್ದಾರಾ ಎಂಬ ಬಗ್ಗೆ ಪರಿಶೀಲಿಸಬೇಕು. ಅಂಚೆ ಇಲಾಖೆಯ ಪಾರ್ಸೆಲ್‌ಗಳಲ್ಲಿ ಮಾದಕ ವಸ್ತುಗಳನ್ನು ಸರಬರಾಜು ಮಾಡುತ್ತಿರುವ ಬಗ್ಗೆ ಯಾವುದೇ ದೂರುಗಳು ಕಂಡುಬರುತ್ತಿಲ್ಲ. ಅದೇ ರೀತಿ ಖಾಸಗಿ ಪಾರ್ಸೆಲ್ ಸರ್ವೀಸ್‌ಗಳ ಕಚೇರಿಗಳನ್ನು ಹಾಗೂ ಆನ್‌ಲೈನ್ ಮಾರುಕಟ್ಟಯೆ ಗೋದಾಮುಗಳನ್ನು ಪರಿಶೀಲಿಸಬೇಕು. ರೈಲ್ವೆ ಇಲಾಖೆಯ ಸಿಬ್ಬಂದಿಗಳು ಸಹ ನಿಲ್ದಾಣದಲ್ಲಿ ಮಾದಕ ವಸ್ತುಗಳ ಸರಬರಾಜು ಬಗ್ಗೆ ನಿಗಾ ವಹಿಸಬೇಕು. ಅನುಮಾಸ್ಪದ ವ್ಯಕ್ತಿಗಳು ಕಂಡುಬಂದಲ್ಲಿ ಅವರ ಬಗ್ಗೆ ತನಿಖೆ ಮಾಡಬೇಕು ಎಂದು ಸೂಚನೆ ನೀಡಿದರು.

Click here

Click here

Click here

Call us

Call us

ಕರಾವಳಿ ಪೊಲೀಸನವರು ಮೀನುಗಾರಿಕಾ ಜೆಟ್ಟಿಗಳಲ್ಲಿ ಇವುಗಳ ಸರಬರಾಜು ಆಗುತ್ತಿವೆಯೇ ಎಂಬ ಬಗ್ಗೆ ಆಗಾಗ ಪರಿಶೀಲಿಸಬೇಕು. ಬೀಚ್‌ಗಳಲ್ಲಿ ಮಾದಕ ವಸ್ತುಗಳ ಮಾರಾಟ ಹಾಗೂ ಸಾಗಾಣಿಕೆ ಬಗ್ಗೆ ನಿಗಾ ವಹಿಸಬೇಕು ಎಂದರು.

ಜಿಲ್ಲೆಯಲ್ಲಿ ಅಸುರಕ್ಷಿತ ಆಹಾರ ಪದಾರ್ಥಗಳ ಮಾಡಿದ 9 ಪ್ರಕರಣಗಳು ಜಿಲ್ಲೆಯ ಅಪರ ಜಿಲ್ಲಾಧಿಕಾರಿಗಳ ನ್ಯಾಯಾಲಯದಲ್ಲಿ ಪ್ರಕರಣ ದಾಖಲಾಗಿದ್ದು, ಅವುಗಳಲ್ಲಿನ 6 ಪ್ರಕರಣಗಳಲ್ಲಿ 80,000 ರೂ. ದಂಡ ವಿಧಿಸಲಾಗಿದೆ. ಇನ್ನು 3 ಪ್ರಕರಣಗಳು ಚಾಲ್ತಿಯಲ್ಲಿವೆ. ಜೀವಕ್ಕೆ ಹಾನಿ ಉಂಟು ಮಾಡುವಂತಹ  ಆಹಾರ ಪದಾರ್ಥಗಳ ಮಾರಾಟ ಮಾಡಿದ 6 ಪ್ರಕರಣಗಳು ಜೆ.ಎಂ.ಎಫ್.ಸಿ ನ್ಯಾಯಾಲಯದಲ್ಲಿ ದಾಖಲಾಗಿದ್ದು, ಪ್ರಗತಿಯಲ್ಲಿವೆ ಎಂದ ಅವರು ಮಾರಾಟವಾಗುವ ಸಿದ್ಧ ಆಹಾರಗಳ ಗುಣಮಟ್ಟ ಹಾಗೂ ಮತ್ತಿತರ ಆಹಾರ ಪದಾರ್ಥಗಳ ನಿರಂತರವಾಗಿ ಸ್ಯಾಂಪಲ್‌ಗಳನ್ನು ತೆಗೆದು ಪ್ರಯೋಗ ಶಾಲೆಗಳಿಗೆ ವಿಶ್ಲೇಷಣೆಗೆ ಕಳುಹಿಸಬೇಕು  ಎಂದು ಸೂಚನೆ ನೀಡಿದರು.

ಜಿಲ್ಲಾ ಪೊಲೀಸ್ ಅಧೀಕ್ಷಕ ಡಾ..ಅರುಣ್ ಕೆ ಮಾತನಾಡಿ, ನಿರ್ಬಂಧಿತ ಮತ್ತುಬರಿಸುವ ಔಷಧಿಗಳು ಜನಸಾಮಾನ್ಯರೆಲ್ಲರಿಗೂ ಮಾರಾಟ ಮಾಡುವ ಹಾಗಿಲ್ಲ. ಈ ಬಗ್ಗೆ ಜಿಲ್ಲೆಯ ಔಷಧ ನಿಯಂತ್ರಣ ಅಧಿಕಾರಿಗಳು ಔಷಧಿ ಅಂಗಡಿಗಳ ಬಗ್ಗೆ ಎಚ್ಚರವಹಿಸಬೇಕು ಎಂದ ಅವರು, ಜಿಲ್ಲೆಯನ್ನು ಮಾದಕ ವ್ಯಸನ ಮುಕ್ತ ಜಿಲ್ಲೆಯನ್ನಾಗಿಸಲು ಎಲ್ಲರೂ ಕೈಜೋಡಿಸಬೇಕು ಎಂದರು.

ಸಭೆಯಲ್ಲಿ ಎ.ಎಸ್.ಪಿ ಪಿ.ಎ ಹೆಗಡೆ, ಡಿ.ಎಫ್.ಓ ಗಣಪತಿ, ವಿವಿಧ ಜಿಲ್ಲಾ ಮಟ್ಟದ ಅನುಷ್ಠಾನ ಅಧಿಕಾರಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.

Leave a Reply