ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ತಾಲೂಕಿನ ಅಂಪಾರು ಸಮೀಪದ ನೆಲ್ಲಿಕಟ್ಟೆ ಎಂಬಲ್ಲಿ ಬೈಕ್ ಡಿಕ್ಕಿ ಹೊಡೆದು ಸೈಕಲ್ ಸವಾರ ಮೃತಪಟ್ಟ ಘಟನೆ ಇತ್ತೀಚಿಗೆ ಸಂಭವಿಸಿದೆ. ಮೃತ ಪಟ್ಟ ವ್ಯಕ್ತಿ ಕಾವಾಡಿ ನಿವಾಸಿ ಕೊರಗ (77) ಎಂದು ಗುರುತಿಸಲಾಗಿದೆ.
ಅವರ ಮಗನ ಮನೆಯಾದ ನೆಲ್ಲಿಕಟ್ಟೆಗೆ ಸೈಕಲ್ ನಲ್ಲಿ ಹೋಗಿ ವಾಪಸ್ ಬರುತ್ತಿರುವಾಗ ಅಂಪಾರಿನಿಂದ ಕುಂದಾಪುರದ ಕಡೆಗೆ ಬರುತ್ತಿದ್ದ ಬೈಕ್, ಅತೀ ವೇಗ ಹಾಗೂ ಅಜಾಗರೂಕತೆಯಿಂದ ಸೈಕಲ್‌ಗೆ ಡಿಕ್ಕಿ ಹೊಡೆದಿದ್ದು, ಸೈಕಲ್ ಸವಾರ ಗಂಭೀರ ಗಾಯಗೊಂಡಿದ್ದರು. ಅವರನ್ನು ಚಿಕಿತ್ಸೆಗ್ಗೆ ಮಣಿಪಾಲ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆಗೆ ಸ್ಪಂದಿಸದೆ ಮೃತ ಪಟ್ಟಿದ್ದಾರೆ.
ಈ ಬಗ್ಗೆ ಶಂಕರನಾರಾಯಣ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.