ಕುಂದಾಪ್ರ ಡಾಟ್ ಕಾಂ ಸುದ್ದಿ.
ಗಂಗೊಳ್ಳಿ: ಇಲ್ಲಿನ ಗುಜ್ಜಾಡಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಹಳೆ ವಿದ್ಯಾರ್ಥಿ ಸಂಘದ ’ರಜತ ಸಂಭ್ರಮ-2025’ ಕಾರ್ಯಕ್ರಮದಲ್ಲಿ ಸಂಘದ ವತಿಯಿಂದ ನಿರ್ಮಿಸಲಾಗಿರುವ ನೂತನ ತರಗತಿ ಕೊಠಡಿಗಳ ನಿರ್ಮಾಣಕ್ಕೆ ಸಹಕರಿಸಿದ ದಾನಿಗಳನ್ನು ಮತ್ತು ಹಳೆ ವಿದ್ಯಾರ್ಥಿ ಸಂಘದ ಮಾಜಿ ಅಧ್ಯಕ್ಷರು ಹಾಗೂ ಕಾರ್ಯದರ್ಶಿಗಳನ್ನು ಗೌರವಿಸಲಾಯಿತು.

ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ರಾಮನಾಥ ಚಿತ್ತಾಲ್, ಗುಜ್ಜಾಡಿ ಗ್ರಾಪಂ ಅಧ್ಯಕ್ಷ ತಮ್ಮಯ್ಯ ದೇವಾಡಿಗ, ಶಾಲೆಯ ಶತಮಾನೋತ್ಸವ ಸಮಿತಿ ಅಧ್ಯಕ್ಷ ಉಮೇಶ ಎಲ್. ಮೇಸ್ತ, ಬಳ್ಳಾರಿಯ ಉದ್ಯಮಿ ಪದ್ಮನಾಭ ಕೊತ್ವಾಲ್, ಬೈಂದೂರು ವಲಯ ಕ್ಷೇತ್ರ ಶಿಕ್ಷಣಾಧಿಕಾರಿ ನಾಗೇಶ ನಾಯ್ಕ್, ಪತ್ರಕರ್ತ ಬಿ. ರಾಘವೇಂದ್ರ ಪೈ, ಶಾಲೆಯ ಹಳೆ ವಿದ್ಯಾರ್ಥಿಗಳಾದ ಡಾ. ಸುಬ್ಬುಲಕ್ಷ್ಮೀ ಎನ್. ಕಾರಂತ್, ವಿದ್ಯಾಲಕ್ಷ್ಮೀ ಶರತ್ ಕೊಠಾರಿ, ರಾಷ್ಟ್ರೀಯ ಈಜು ಪಟು ನಾಗರಾಜ ಖಾರ್ವಿ, ಶಾಲೆಯ ಎಸ್‌ಡಿಎಂಸಿ ಅಧ್ಯಕ್ಷ ನಾರಾಯಣ ಕೆ., ಶಾಲೆಯ ಮುಖ್ಯೋಪಾಧ್ಯಾಯ ಗಂಗಾಧರ ಬಂಟ್, ದಾನಿ ಅಬ್ದುಲ್ ಸಲಾಂ, ಸಂಘದ ಕಾರ್ಯದರ್ಶಿ ರಾಘವೇಂದ್ರ ಡಿ., ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು.










