ಕುಂದಾಪ್ರ ಡಾಟ್ ಕಾಂ ಸುದ್ದಿ.
ಉಡುಪಿ: ತೋಟಗಾರಿಕೆ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಕೇಂದ್ರ ಪುರಸ್ಕೃತ ರಾಷ್ಟ್ರೀಯ ಖಾದ್ಯ ತೈಲ ಅಭಿಯಾನ – ತಾಳೆ ಬೆಳೆ ಯೋಜನೆಯಡಿ ಖಾದ್ಯ ತೈಲ ಉತ್ಪಾದನೆಯಲ್ಲಿ ಸ್ವಾವಲಂಬನೆಯನ್ನು ಸಾಧಿಸುವ ನಿಟ್ಟಿನಲ್ಲಿ ತಾಳೆ ಬೆಳೆ ಬೇಸಾಯವನ್ನು ರೈತರು ಕೈಗೊಳ್ಳಲು ಇಲಾಖೆಯ ಹಸಿರು ತಂತ್ರಾಂಶದಲ್ಲಿ ಅರ್ಜಿ ನೋಂದಣಿ ಕಾರ್ಯವನ್ನು ಪ್ರಾರಂಭಿಸಿದ್ದು, ತಾಳೆ ಬೆಳೆಯನ್ನು ಬೆಳೆಯಲು ಇಚ್ಛಿಸುವ ರೈತರು ತೋಟಗಾರಿಕೆ ಇಲಾಖೆಗೆ ನೇರವಾಗಿ ಸಂಪರ್ಕಿಸಿ ನೋಂದಣಿ ಮಾಡಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ.
ಉತ್ತಮ ಗುಣಮಟ್ಟದ 12 ರಿಂದ 18 ತಿಂಗಳಿನ ತಾಳೆ ಸಸಿಗಳನ್ನು 3ಎಫ್ ಕಂಪನಿಯಿಂದ ಅರ್ಹ ರೈತರಿಗೆ ಉಚಿತವಾಗಿ ಒದಗಿಸಲಾಗುತ್ತಿದ್ದು, ರೈತರು ಈ ಯೋಜನೆಯ ಸದುಪಯೋಗ ಪಡೆದುಕೊಳ್ಳುವಂತೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಇಲಾಖೆಯ ಹೋಬಳಿ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳನ್ನು ಆಯಾ ತಾಲೂಕಿನ ಇಲಾಖೆಯ ಕಚೇರಿಗಳಲ್ಲಿ ಸಂಪರ್ಕಿಸಬಹುದಾಗಿದೆ ಎಂದು ತೋಟಗಾರಿಕೆ ಇಲಾಖೆಯ ಉಪನಿರ್ದೇಶಕರ ಕಚೇರಿ ಪ್ರಕಟಣೆ ತಿಳಿಸಿದೆ.