ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಎಂಜಿನಿಯರಿಂಗ್ ಸೇರಿದಂತೆ ವಿವಿಧ ವೃತ್ತಿ ಶಿಕ್ಷಣ ಕೋರ್ಸ್ಗಳ ಪ್ರವೇಶಕ್ಕಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸಿದ್ದ 2025 ನೇ ಸಾಮಾನ್ಯ ಪ್ರವೇಶ ಪರೀಕ್ಷೆಯಲ್ಲಿ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ ಅಮೂಲ್ಯ ಸಿ. ಶೆಟ್ಟಿ ಎಂಜಿನಿಯರಿಂಗ್ ವಿಭಾಗದಲ್ಲಿ ರಾಜ್ಯ ಮಟ್ಟದಲ್ಲಿ 209 ನೇ ರ‍್ಯಾಂಕ್ ಪಡೆದಿದ್ದಾಳೆ.
ಪ್ರತಿ ದಿನ ಕಾಲೇಜಿನಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗೆ ತರಬೇತಿ ನೀಡಲಾಗುತ್ತಿದ್ದು, ಇದರ ಸದುಪಯೋಗವನ್ನು ಪಡೆದುಕೊಂಡು ಅದ್ಭುತ ಸಾಧನೆ ಮೆರೆದಿದ್ದಾಳೆ.
ವಿದ್ಯಾರ್ಥಿನಿಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ – ಬೋಧಕೇತರ ಸಿಬ್ಬಂದಿ ವರ್ಗ ಅಭಿನಂದನೆ ಸಲ್ಲಿಸಿದ್ದಾರೆ.










