ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್, ಕುಂದಾಪುರ ತಾಲೂಕು ಘಟಕದ ಸಹಯೋಗದಲ್ಲಿ ಭಾನುವಾರ ಹಮ್ಮಿಕೊಂಡ ಹಿರಿಯರೆಡೆಗೆ ಸಾಹಿತ್ಯದ ನಡಿಗೆ ಕಾರ್ಯಕ್ರಮದಲ್ಲಿ ಹಿರಿಯ ಮುತ್ಸದ್ದಿ ಮಾಣಿ ಗೋಪಾಲ್ ಅವರನ್ನು ಅವರ ನಿವಾಸದಲ್ಲಿ ಸನ್ಮಾನಿಸಲಾಯಿತು.
ಸಾಹಿತ್ಯ ಪರಿಷತ್ ವತಿಯಿಂದ ಮಾಣಿ ಗೋಪಾಲ್ ಅವರನ್ನು ಸನ್ಮಾನಿಸಿದ ಬಳಿಕ ಮಾಜಿ ಸಚಿವ ಕೆ. ಜಯಪ್ರಕಾಶ್ ಹೆಗ್ಡೆ ಅವರು ಮಾತನಾಡಿ ಮೌಲ್ಯಾಧಾರಿತ, ತತ್ವಾಧರಿತ ರಾಜಕಾರಣವನ್ನು ಜೀವನುದ್ದಕ್ಕೂ ಪಾಲಿಸಿಕೊಂಡು ಬಂದ ಅಪರೂಪದ ಜನನಾಯಕ ಮಾಣಿ ಗೋಪಾಲ್, ದೇವರಾಜು ಅರಸು ಅವರ ತತ್ವಾದರ್ಶದಡಿಯಲ್ಲಿ ನಡೆದ ಮಾಣಿ ಗೋಪಾಲ್ ದೇವರಾಜು ಅರಸು ಪ್ರಶಸ್ತಿಗೆ ಅರ್ಹರು. ಈ ಬಗ್ಗೆ ಸರಕಾರದ ಗಮನ ಸೆಳೆಯುವೆ ಎಂದರು.

ಸಂಸದ ಕೋಟ ಶ್ರೀನಿವಾಸ ಪೂಜಾರಿ ಮಾತನಾಡಿ, ಪ್ರಾಮಾಣಿಕತೆ, ವೈಚಾರಿಕ ಸ್ಪಷ್ಟತೆ, ತಳ ವರ್ಗದ ಜನರ ಪರ ಹೋರಾಟ, ಗೇಣಿದಾರರು ಮತ್ತು ಮೂರ್ತೆದಾರರ ಪರ ಮಾಣಿಗೋಪಾಲ್ ಹೋರಾಟ ಪ್ರಶ್ನಾತೀತ. ಚುನಾವಣಾ ರಾಜಕೀಯ ಜನಸಾಮಾನ್ಯರ ಕಲ್ಯಾಣಕ್ಕಾಗಿ ಮೀಸಲಿಟ್ಟ ಧೀಮಂತ ನಾಯಕ. ಸಾಹಿತ್ಯ ಪರಿಷತ್ ಯೋಗ್ಯ ಸಂದರ್ಭ ಅವರನ್ನು ಗುರುತಿಸಿದೆ ಎಂದರು.

ಕುಂದಾಪುರ ಶಾಸಕ ಕಿರಣ್ ಕುಮಾರ ಕೊಡ್ಗಿ, ಹಿರಿಯ ಸಾಹಿತಿ ಎ.ಎಸ್.ಎನ್. ಹೆಬ್ಬಾರ್, ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ನೀಲಾವರ ಸುರೇಂದ್ರ ಅಡಿಗ ಮಾತನಾಡಿದರು.

ಗುಲ್ವಾಡಿ ಟಾಕೀಸ್ ವತಿಯಿಂದ ಸಾಹಿತಿ ಯಾಕೂಬ್ ಖಾದರ್ ಗುಲ್ವಾಡಿ ಸನ್ಮಾನಿಸಿದರು. ನಾನಾ ಸಂಘ ಸಂಸ್ಥೆಯ ಪ್ರಮುಖರು ಹೂಮಾಲೆ ಸಮರ್ಪಿಸಿ ಗೌರವ ಸಲ್ಲಿಸಿದರು. ಪುರಸಭೆ ಅಧ್ಯಕ್ಷ ಮೋಹನದಾಸ ಶೆಣೈ, ಕಾಂಗ್ರೆಸ್ ಮುಖಂಡ ದಿನೇಶ್ ಹೆಗ್ಡೆ ಮೊಳಹಳ್ಳಿ, ಉಡುಪಿ ಜಿಲ್ಲಾ ಬಿಜೆಪಿ ಅಧ್ಯಕ್ಷ ಕಿಶೋರ್ ಕುಂದಾಪುರ ಕುಂದಾಪುರ, ಬಿಜೆಪಿ ದಕ್ಷಿಣ ಕನ್ನಡ ಜಿಲ್ಲಾ ಸಹಪ್ರಭಾರಿ ರಾಜೇಶ್ ಕಾವೇರಿ, ಕುಂದಾಪುರ ನಗರ ಯೋಜನಾ ಪ್ರಾಧಿಕಾರ ಮಾಜಿ ಅಧ್ಯಕ್ಷ ವಿಕಾಸ್ ಹೆಗ್ಡೆ, ಕುಂದಾಪುರ ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ವಿನೋದ್ ಕ್ರಾಸ್ತಾ, ತಾಲೂಕು ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷ ಅಶೋಕ ಪೂಜಾರಿ ಬೀಜಾಡಿ, ಹಿರಿಯ ಸಮಾಜ ಸೇವಕ ನಾರಾಯಣ ನಾಯಕ್ ನೇರಳಕಟ್ಟೆ, ಗಿರಿಜಾ ಮಾಣಿಗೋಪಾಲ್, ರಂಜನ್ ಮಾಣಿಗೋಪಾಲ್, ಕಲ್ಪನಾ ಭಾಸ್ಕರ್, ಡಾ. ಸೋನಿ ಡಿಕೋಸ್ತಾ, ರಶ್ಮಿರಾಜ್, ವಿಜಯ್ ಎಸ್. ಪೂಜಾರಿ, ಜೋಯ್ ಕರ್ವಾಲೊ, ಚಂದ್ರಶೇಖರ ಶೆಟ್ಟಿ, ದೀಪಕ್ ನಾವುಂದ, ನರಸಿಂಹ ಮೂರ್ತಿ, ಉಡುಪಿ ಜಿಲ್ಲಾ ಕನ್ನಡ ಸಾಹಿತಿ ಪರಿಷತ್ ಗೌರವ ಕಾರ್ಯದರ್ಶಿಗಳಾದ ಸುಬ್ರಹ್ಮಣ್ಯ ಶೆಟ್ಟಿ, ನರೇಂದ್ರ ಕುಮಾರ ಕೋಟ, ಕುಂದಾಪುರ ತಾಲೂಕು ಕಸಾಪ ಕಾರ್ಯದರ್ಶಿ ಅಕ್ಷತಾ ಗಿರೀಶ್ ಐತಾಳ್, ಕಸಾಪ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಗೌರವ ಕಾರ್ಯದರ್ಶಿ ಸುಬ್ರಹ್ಮಣ್ಯ ಶೆಟ್ಟಿ ಸ್ವಾಗತಿಸಿದರು. ಕಸಾಪ ತಾಲೂಕು ಕಾರ್ಯದರ್ಶಿ ದಿನಕರ ಆರ್. ಶೆಟ್ಟಿ ಕಾರ್ಯಕ್ರಮ ನಿರ್ವಹಿಸಿದರು.















