ಕುಂದಾಪ್ರ ಡಾಟ್ ಕಾಂ ಸುದ್ದಿ.
ಕೋಟ: ದೇಶವನ್ನೆ ಸ್ವಚ್ಛವಾಗಿಡಲು ಪ್ರಧಾನಮಂತ್ರಿಗಳು ಸ್ವಚ್ಛ ಭಾರತ ಪರಿಕಲ್ಪನೆಯನ್ನು ತಂದರು ಆದರೆ ಜನಸಾಮಾನ್ಯರು ಸ್ವಚ್ಛತೆಯ ಬಗ್ಗೆ ಇನ್ನಷ್ಟು ಜಾಗೃತರಾಗಿ ಪ್ರಧಾನಮಂತ್ರಿಗಳ ಕನಸು ಸಾಕಾರಗೊಳಿಸೋಣ ಎಂದು ಕೋಟತಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷ ಸತೀಶ್ ಕುಂದರ್ ಬಾರಿಕೆರೆ ನುಡಿದರು.
ಅವರು ಭಾನುವಾರ ಕೋಟದ ಪಂಚವರ್ಣ ಯುವಕ ಮಂಡಲ ಪ್ರವರ್ತಿತ ಸಂಸ್ಥೆ ಪಂಚವರ್ಣ ಮಹಿಳಾ ಮಂಡಲ ಇದರ ನೇತೃತ್ವದಲ್ಲಿ ಹಂದಟ್ಟು ಮಹಿಳಾ ಬಳಗ ಕೋಟ, ಮಣೂರು ಫ್ರೆಂಡ್ಸ್, ಜೆಸಿಐ ಕೋಟ ಸಿನಿಯರ್ ಲಿಜನ್ ಸಹಯೋಗದೊಂದಿಗೆ ಕೋಟತಟ್ಟು ಗ್ರಾಮಪಂಚಾಯತ್, ಬಾರಿಕೆರೆ ಯುವಕ ಮಂಡಲದ ಸಂಯೋಜನೆಯೊಂದಿಗೆ 256ನೇ ಪರಿಸರಸ್ನೇಹಿ ಅಭಿಯಾನದ ಪ್ರಯುಕ್ತ ಕೋಟತಟ್ಟು ಕೊರಗ ಕಾಲೋನಿ ಸ್ವಚ್ಛತಾ ಕಾರ್ಯಕ್ಕೆ ಚಾಲನೆ ನೀಡಿ ಮಾತನಾಡಿದರು.
ಪರಿಸರದ ಬಗ್ಗೆ ಪಂಚವರ್ಣ ಸಂಘಟನೆ ಸಾಕಷ್ಟು ಶ್ರಮಿಸುತ್ತಿದೆ ಅದೇ ಮನೋಭಾವನೆ ಪ್ರತಿಯೊಂದು ಮನೆ ಮನದಲ್ಲಿ ಮೊಳಗಬೇಕು, ಪಂಚಾಯತ್ ವ್ಯಾಪ್ತಿಯಲ್ಲಿ ತ್ಯಾಜ್ಯ ಎಸೆಯುವ ಬ್ಲ್ಯಾಕ್ ಸ್ಪಾಟ್ ಪ್ರದೇಶಗಳಲ್ಲಿ ಸಿಸಿ ಕ್ಯಾಮರ ಕಣ್ಗಾವಲು ಇರಿಸಲಾಗುವುದು ಎಂದರು.
ಕೋಟತಟ್ಟು ಗ್ರಾಮಪಂಚಾಯತ್ ಸದಸ್ಯರಾದ ಪ್ರಮೋದ್ ಹಂದೆ, ವಾಸು ಪೂಜಾರಿ, ಬಾರಿಕೆರೆ ಯುವಕ ಮಂಡಲದ ಅಧ್ಯಕ್ಷ ರವಿ ಕುಂದರ್, ಪಂಚವರ್ಣ ಯುವಕ ಮಂಡಲದ ಅಧ್ಯಕ್ಷ ಕೆ.ಮನೋಹರ್ ಪೂಜಾರಿ, ಉಪಾಧ್ಯಕ್ಷ ದಿನೇಶ್ ಆಚಾರ್, ಪಂಚವರ್ಣ ಮಹಿಳ ಮಂಡಲದ ಉಪಾಧ್ಯಕ್ಷೆ ಪುಷ್ಭಾ ಕೆ. ಹಂದಟ್ಟು ಮತ್ತಿತರರು ಇದ್ದರು.
ಪಂಚವರ್ಣದ ನಿಕಟಪೂರ್ವ ಅಧ್ಯಕ್ಷ ಅಜಿತ್ ಆಚಾರ್ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು. ಸಲಹಾ ಸಮಿತಿ ಅಧ್ಯಕ್ಷ ರವೀಂದ್ರ ಕೋಟ ಸಂಯೋಜಿಸಿದರು.















