Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಸಮಾಜದಲ್ಲಿ ಶಿಕ್ಷಣದಿಂದ ಬದಲಾವಣೆ ಸಾಧ್ಯ: ಶಾಸಕ ಯಶ್‌ಪಾಲ್ ಎ ಸುವರ್ಣ
    ಉಡುಪಿ ಜಿಲ್ಲೆ

    ಸಮಾಜದಲ್ಲಿ ಶಿಕ್ಷಣದಿಂದ ಬದಲಾವಣೆ ಸಾಧ್ಯ: ಶಾಸಕ ಯಶ್‌ಪಾಲ್ ಎ ಸುವರ್ಣ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.   
    ಉಡುಪಿ:
    ಸಮಾಜದಲ್ಲಿ ಉತ್ತಮ ಸ್ಥಾನ ಪಡೆಯುವಂತೆ ಹಾಗೂ ಭವಿಷ್ಯದ ಕನಸನ್ನು ನನಸು ಮಾಡುವ ಶಕ್ತಿ ಶಿಕ್ಷಣಕ್ಕೆ ಇದ್ದು, ಪ್ರತಿಯೊಬ್ಬರಿಗೂ ಉತ್ತಮ ಶಿಕ್ಷಣ ನೀಡುವ ಕಾರ್ಯ ಶಿಕ್ಷಕರ ಮೇಲಿದ್ದು, ಇದನ್ನು ಜವಾಬ್ದಾರಿಯುತವಾಗಿ ಮಾಡಬೇಕು ಎಂದು ಶಾಸಕ ಯಶ್‌ಪಾಲ್ ಎ ಸುವರ್ಣ ಕರೆ ನೀಡಿದರು. 

    Click Here

    Call us

    Click Here

    ಅವರು ಅಂದು ನಗರದ ಸೈಂಟ್ ಸಿಸಿಲಿ ಪ್ರೌಢಶಾಲೆಯಲ್ಲಿ, ಮಾರ್ಚ್ 2022-23 ಮತ್ತು 2023-24 ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಶೇಕಡಾ ನೂರರಷ್ಟು ಫಲಿತಾಂಶ ಪಡೆದ ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಶಾಲೆಗಳಿಗೆ ನಡೆದ ಅಭಿನಂದನಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.

    ಶೈಕ್ಷಣಿಕ ವ್ಯವಸ್ಥೆಯಲ್ಲಿ ಉಡುಪಿ ಜಿಲ್ಲೆಯು ಶಿಕ್ಷಣದ ಕಾಶಿ ಎಂದೇ ಹೆಸರುವಾಸಿಯಾಗಿದೆ. ಶಿಕ್ಷಣ ಹಾಗೂ ಆರೋಗ್ಯದಲ್ಲಿ ರಾಜಿ ಮಾಡಿಕೊಳ್ಳಬಾರದು. ಜಿಲ್ಲೆಯ ಶಿಕ್ಷಕರುಗಳು ತಮ್ಮ ವೃತ್ತಿಯನ್ನು ಉತ್ತಮವಾಗಿ ನಿರ್ವಹಿಸುವುದರೊಂದಿಗೆ ಮಕ್ಕಳ ಸಾಧನೆಗೆ ಬೆನ್ನೆಲುಬಾಗಿ ನಿಂತಿದ್ದಾರೆ. ಜೊತೆಗೆ ವಿದ್ಯಾರ್ಥಿಗಳ ಪರಿಶ್ರಮದಿಂದಾಗಿ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಜಿಲ್ಲೆಗೆ ಉತ್ತಮ ಫಲಿತಾಂಶ ದೊರೆತಿದೆ ಎಂದರು.

    ವಿದ್ಯಾರ್ಥಿಗಳು ಇಂಜಿನಿಯರ್, ಡಾಕ್ಟರ್ ವೃತ್ತಿಗಳ ಕಡೆಗೆ ಗಮನಹರಿಸುತ್ತಿದ್ದಾರೆ. ಇದರೊಂದಿಗೆ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿಯೂ ಸಹ ಎದುರಿಸಿ, ಐ.ಎ.ಎಸ್, ಐ.ಪಿ.ಎಸ್ ನಂತಹ ಉತ್ತಮ ಹುದ್ದೆಯನ್ನು ಪಡೆದುಕೊಂಡು ಜಿಲ್ಲೆ, ರಾಜ್ಯ ಹಾಗೂ ದೇಶದ ಅಭಿವೃದ್ಧಿಗೆ ಕೊಡುಗೆ ನೀಡುವಂತಾಗಬೇಕು ಎಂದರು.

    ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಮಾತನಾಡಿ, ಜಿಲ್ಲೆಯ ಪ್ರೌಢಶಾಲೆಗಳು ಸರ್ಕಾರ ಹಾಗೂ ಜಿಲ್ಲಾಡಳಿತದ ಸೂಚನೆಗಳನ್ನು ಗಂಭೀರವಾಗಿ ಪರಿಗಣಿಸಿ, ಅದನ್ನು ಪರಿಣಾಮಕಾರಿಯಾಗಿ ಅನುಷ್ಠಾನ ಮಾಡುವ ಮೂಲಕ ಜಿಲ್ಲೆಗೆ ಉತ್ತಮ ಫಲಿತಾಂಶ ದೊರಕಿದೆ. ಕೆಲ ಶಾಲೆಗಳಿಗೆ ಸಂಜೆಯ ವೇಳೆಯಲ್ಲಿ ಅನಿರೀಕ್ಷತ ಭೇಟಿ ನೀಡಿದಾಗಲೂ ಸಹ ವಿದ್ಯಾರ್ಥಿಗಳು ಗಂಭೀರತೆಯಿಂದ ಅಧ್ಯಯನ ಮಾಡುವುದನ್ನು ಗಮನಿಸಿದ್ದು, ಜಿಲ್ಲೆಯ ಶೈಕ್ಷಣಿಕ ಮಟ್ಟ ಹೆಚ್ಚಿಸಲು ಸಹ ಇಂತಹ ವಿಶೇಷ ತರಗತಿಗಳು ಸಹಕಾರಿಯಾಗಿವೆ ಎಂದರು.

    Click here

    Click here

    Click here

    Call us

    Call us

    ಜಿಲ್ಲೆಯ ಶೈಕ್ಷಣಿಕ ಸಾಧನೆಗೆ ಶಿಕ್ಷಕರುಗಳು ಹಲವಾರು ಆಯಾಮಗಳಲ್ಲಿ ತೊಡಗಿಸಿಕೊಂಡಿದ್ದಾರೆ. ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಿ, ಫಲಿತಾಂಶ ಸುಧಾರಣೆಗೆ ಶ್ರಮವಹಿಸಿದ್ದಾರೆ. ಮುಂದಿನ ವರ್ಷ ನಮ್ಮ ಗುರಿ ಏನು ಎಂಬುದನ್ನು ಈಗಿನಿಂದಲೇ ರೂಢಿಸಿಕೊಳ್ಳಬೇಕು. ಪ್ರಾರಂಭಿಕ ಹಂತದಿAದಲೇ ಮಕ್ಕಳು ನಿಗಧಿತ ಗುರಿ ಸಾಧನೆಗಳನ್ನು ತೊಡಗಿಸಿಕೊಳ್ಳುವಂತೆ ನೋಡಿಕೊಳ್ಳಬೇಕು ಎಂದ ಅವರು, ಪ್ರಸ್ತಕ್ತ ಸಾಲಿನಲ್ಲಿ ಪಡೆದ ಸ್ಥಾನವನ್ನು ಉಳಿಸಿಕೊಳ್ಳುವುದರೊಂದಿಗೆ ಅದನ್ನು ಮತ್ತಷ್ಟು ಹೆಚ್ಚಿಸುವುದು ಶಿಕ್ಷಕರ ಜವಾಬ್ದಾರಿಯಾಗಿದೆ ಎಂದರು.

    ಇದೇ ಸಂದರ್ಭದಲ್ಲಿ ಪ್ರಸಕ್ತ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಗಳಿಸಿದ ಸ್ವಸ್ತಿ ಕಾಮತ್, ನಿಧಿ ಪೈ ಹಾಗೂ ಸಾಯಿಸ್ಪರ್ಶ ಅವರನ್ನು ಸನ್ಮಾನಿಸಲಾಯಿತು. 2022-23 ಮತ್ತು 2023-24 ನೇ ಸಾಲಿನಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಶೇಕಡಾ ನೂರರಷ್ಟು ಫಲಿತಾಂಶ ಪಡೆದ ಜಿಲೆಯ 147 ಸರ್ಕಾರಿ, ಅನುದಾನಿತ ಹಾಗೂ ಅನುದಾನ ರಹಿತ ಪ್ರೌಢಶಾಲೆಗಳಿಗೆ ನಗದು ಹಾಗೂ ಸ್ಮರಣಿಕೆಯನ್ನು ನೀಡಿ ಗೌರವಿಸಲಾಯಿತು. ಬ್ರಹ್ಮಾವರ ತಾಲೂಕು ಮಟ್ಟದಲ್ಲಿ ಮೊದಲ ಮೂರು ಸ್ಥಾನ ಪಡೆದ ಸರಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್ ಅನ್ನು ವಿತರಿಸಲಾಯಿತು

    ಇದೇ ಸಂದರ್ಭದಲ್ಲಿ ಈ ತಿಂಗಳ ಅಂತ್ಯಕ್ಕೆ ನಿವೃತ್ತಿ ಹೊಂದಲಿರುವ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಗಣಪತಿ ಅವರನ್ನು ಸನ್ಮಾನಿಸಲಾಯಿತು.

    ಕಾರ್ಯಕ್ರಮದಲ್ಲಿ ಉಡುಪಿ, ಬ್ರಹ್ಮಾವರ, ಕುಂದಾಪುರ, ಬೈಂದೂರು ಹಾಗೂ ಕಾರ್ಕಳ ತಾಲೂಕುಗಳ ಕ್ಷೇತ್ರ ಶಿಕ್ಷಣಾಧಿಕಾರಿಗಳು, ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಅಧ್ಯಕ್ಷ ಕಿರಣ್ ಹೆಗಡೆ, ಶಿಕ್ಷಕರ ಸಂಘದ ಪ್ರತಿನಿಧಿ ಪ್ರಭಾಕರ ಶೆಟ್ಟಿ, ಕೊಂಡಳ್ಳಿ, ಸೈಂಟ್ ಸಿಸಿಲಿ ಪ್ರೌಢಶಾಲೆಯ ಮುಖ್ಯ ಶಿಕ್ಷಕಿ ಪ್ರೀತಿ ಸಿಸ್ಟರ್, ಜಿಲ್ಲೆಯ ಎಲ್ಲಾ ಪ್ರೌಢಶಾಲೆಗಳ ಮುಖ್ಯೋಪಾಧ್ಯಾಯರುಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.

    ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಗಣಪತಿ ಪ್ರಾಸ್ತಾವಿಕವಾಗಿ ಮಾತನಾಡಿ ಸಾಗತಿಸಿ, ಮುಖ್ಯ ಶಿಕ್ಷಕ ರಾಜೇಂದ್ರ ಭಟ್ ನಿರೂಪಿಸಿ, ವಿಷಯ ಪರಿವೀಕ್ಷಕ ನಾಗರಾಜ ಮೈರ್‌ಕೊಮೆ ವಂದಿಸಿದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಉಡುಪಿ: ವಿದ್ಯಾರ್ಥಿವೇತನ ಸೌಲಭ್ಯಕ್ಕೆ ಅರ್ಜಿ ಆಹ್ವಾನ

    04/07/2026

    ಮುಂಗಾರು ಹಂಗಾಮಿನಲ್ಲಿ ರೈತರಿಂದಲೇ ಬೆಳೆ ಸಮೀಕ್ಷೆಗೆ ಅವಕಾಶ

    04/07/2026

    ವಚನ ಸಾಹಿತ್ಯ ಉಳಿವಿಗೆ ಅವಿರತ ಶ್ರಮ ವಹಿಸಿದ ಫ.ಗು ಹಳಕಟ್ಟಿ: ಎಂ.ಎ ಗಫೂರ್

    03/07/2026
    Leave A Reply Cancel Reply

    4 × 1 =

    Call us

    Click Here

    Call us

    Call us

    Call us
    Highest Viewed Recently
    • ಮರಳಿ ಸಾಲಿಗ್ರಾಮ ಯಕ್ಷ ರಂಗದಂಗಳಕ್ಕೆ ಸಮಾರಂಭದಲ್ಲಿ ಕೋಟ ಶಿವಾನಂದ ಅವರಿಗೆ ಸನ್ಮಾನ
    • ಗಾಳಿಯಿಂದ ಹಾನಿಗೊಂಡ ಮನೆಗಳಿಗೆ ಮಾಜಿ ಸಂಸದ ಕೆ. ಜಯಪ್ರಕಾಶ್ ಹೆಗ್ಡೆ ಭೇಟಿ
    • ಜೆಸಿಐ ಶಿರೂರು ಘಟಕಕ್ಕೆ ಜೆಎಸಿ ಗೋಲ್ಡನ್ ಪ್ರೆಸಿಡೆಂಟ್ ಪ್ರಶಸ್ತಿ
    • ಕೋಟ ಸಹಕಾರಿ ವ್ಯವಸಾಯಕ ಸಂಘದ ಸಂಯೋಜನೆಯಲ್ಲಿ ಪಂಚವರ್ಣದ ಹಸಿರು ಹೆಜ್ಜೆ ಆಯೋಜನೆ
    • ಅರೆಶಿರೂರು ಪ್ರೌಢಶಾಲೆಯ ವಿದ್ಯಾರ್ಥಿ ಸರಕಾರ ಉದ್ಘಾಟನೆ ಮತ್ತು ಶ್ರೀ ದೇವಳದಿಂದ ನೀಡಿದ ವಿವಿಧ ಸವಲತ್ತುಗಳ ವಿತರಣೆ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.