ಬೈಂದೂರು ಶ್ರೀರಾಮ ಸೌಹಾರ್ದದ ನಾಗೂರು ಶಾಖೆ ಉದ್ಘಾಟನೆ

Call us

Call us

Call us

ಬೈಂದೂರು: ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಹಕಾರಿ ಸಂಘಗಳು ಕೇವಲ ಲಾಭಗಳಿಸುವ ದೃಷ್ಟಿಯಲ್ಲಿ ಕಾರ್ಯನಿರ್ವಹಿಸದೇ, ಸಂಕಷ್ಟದಲ್ಲಿರುವ ಕೃಷಿಕರು, ಮೀನುಗಾರರು, ಕೂಲಿಕಾರ್ಮಿಕರಿಗೆ ನೆರವು ನೀಡುವುದರ ಮೂಲಕ ಆತ್ಮಸ್ಥೈರ್ಯ ತುಂಬುವ ಕಾರ್ಯ ನಿರ್ವಹಿಸುತ್ತಿದೆ ಎಂದು ವಿಧಾನ ಪರಿಷತ್ ಸದಸ್ಯ ಪ್ರತಾಪಶ್ಚಂದ್ರ ಶೆಟ್ಟಿ ಹೇಳಿದರು.

Call us

Click Here

ಅವರು ಬೈಂದೂರು ಶ್ರೀರಾಮ ಸೌಹಾರ್ದ ಸಹಕಾರಿ ಸಂಘದ ನಾಗೂರು ಶಾಖೆ ಉದ್ಘಾಟಿಸಿ ಮಾತನಾಡಿದರು. ಬೈಂದೂರು ಶಾಸಕ ಕೆ. ಗೋಪಾಲ ಪೂಜಾರಿ ಅಧ್ಯಕ್ಷತೆ ವಹಿಸಿ ಮಾತನಾಡಿ ಇಂದಿನ ದಿನಗಳಲ್ಲಿ ಸಹಕಾರಿ ಸಂಘಗಳು ರಾಷ್ಟ್ರೀಯ ಬ್ಯಾಂಕುಗಳಿಗೆ ಸರಿಸಮನಾಗಿ ತನ್ನ ಗ್ರಾಹಕರಿಗೆ ಸುಲಭ ದರದಲ್ಲಿ ಸಾಲ ಸೌಲಭ್ಯ ನೀಡುವುದರ ಮೂಲಕ ಜನಸ್ನೇಹಿಯಾಗಿ ಕಾರ್ಯನಿರ್ವಹಿಸುತ್ತಿದೆ ಎಂದರು. (ಕುಂದಾಪ್ರ ಡಾಟ್ ಕಾಂ ಸುದ್ದಿ)

ಜಿಲ್ಲಾ ಪಂಚಾಯತ್ ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷೆ ಗೌರಿ ದೇವಾಡಿಗ, ತಾಪಂ ಸದಸ್ಯರಾದ ಕೆ. ರಮೇಶ ಗಾಣಿಗ, ಮಹೇಂದ್ರ ಪೂಜಾರಿ, ಸಂಯುಕ್ತ ಸಹಕಾರಿ ಒಕ್ಕೂಟದ ನಿರ್ದೇಶಕ ಭಾಸ್ಕರ್ ಕಾಮತ್, ಖಂಬದಕೋಣೆ ರೈತರ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಪ್ರಕಾಶ್ಚಂದ್ರ ಶೆಟ್ಟಿ, ಕೊಲ್ಲೂರು ಮೂಕಾಂಬಿಕಾ ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷ ವಿಶ್ವೇಶ್ವರ ಹೆಗಡೆ, ಬೈಂದೂರು ವೃತ್ತ ನಿರೀಕ್ಷಕ ಸುದರ್ಶನ್ ಎಂ., ಬೈಂದೂರು – ಉಪ್ಪುಂದ ಲಯನ್ಸ್ ಕ್ಲಬ್ ಅಧ್ಯಕ್ಷ ಜಿ. ಗೋಕುಲ್ ಶೆಟ್ಟಿ, ಸಂಘದ ಕಾರ್ಯನಿರ್ವಹಣಾಕಾರಿ ನಾಗರಾಜ ಪಿ. ಯಡ್ತರೆ, ಪ್ರಬಂಧಕ ರಾಜೇಂದ್ರ ಮೊದಲಾದವರು ಉಪಸ್ಥಿತರಿದ್ದರು. ಈ ಸಂದರ್ಭ ಕಟ್ಟಡ ಮಾಲೀಕ ಸುರೇಶ ದೇವಾಡಿಗ ಹಾಗೂ ಕಛೇರಿ ಒಳಾಂಗಣ ವಿನ್ಯಾಸಮಾಡಿದ ಜಯಾನಂದ ಉಡುಪಿ ಇವರನ್ನು ಸನ್ಮಾನಿಸಲಾಯಿತು. ಸಂಘದ ಅಧ್ಯಕ್ಷ ಎಸ್. ರಾಜು ಪೂಜಾರಿ ವಂದಿಸಿದರು. 

??????????????????????????????? ??????????????????????????????? ??????????????????????????????? news shriram1

Leave a Reply