ಕುಂದಾಪ್ರ ಡಾಟ್ ಕಾಂ ಸುದ್ದಿ.
ಶಂಕರನಾರಾಯಣ: ಇಲ್ಲಿನ ಸಿದ್ದಾಪುರದ ಐರಬೈಲು ಎಂಬಲ್ಲಿ ಗೋವು ಅಕ್ರಮ ಸಾಗಾಟ ಪತ್ತೆ ಹಚ್ಚಿ ವಾಹನ ಸಹಿತ ಗೋವುಗಳನ್ನು ಶಂಕರನಾರಾಯಣ ಪೊಲೀಸರು ಬುಧವಾರ ಸ್ವಾಧೀನ ಪಡಿಸಿಕೊಂಡಿದ್ದಾರೆ.
ಪಿಎಸ್‌ಐ ನಾಸೀರ್ ಹುಸೇನ್ ಮತ್ತು ಸಿಬ್ಬಂದಿ ಕಾರ್ಯಾಚರಣೆ ನಡೆಸಿದರು. ಮಹಾರಾಷ್ಟ್ರದಲ್ಲಿ ಗೋವು ಕಳವು ಮಾಡಿ ವಾಹನದಲ್ಲಿ ಯಾವುದೇ ಪರವಾನಗಿ ಇಲ್ಲದೆ 3 ಜಾನುವಾರುಗಳನ್ನು ಸಾಗಿಸಲಾಗುತ್ತಿತ್ತು.
ಆರೋಪಿಗಳಾದ ಮುಸ್ತಾಕ್ ಹುಸೇನ್ ಸಾಬ್ ನದಾಫ್, ಇರ್ಫಾನ್ ಇಬ್ರಾಹಿಂ ಸಾಬ್ ಜಮಾದಾರ್, ಮಹಮ್ಮದ್ ಆದಿಲ್ ಭಟ್ಕಳ ಎಂಬವರನ್ನು ದಸ್ತಗಿರಿ ಮಾಡಲಾಗಿದೆ. 3 ಲಕ್ಷ ರೂ. ಮೌಲ್ಯದ ವಾಹನ, 45 ಸಾವಿರ ಮೌಲ್ಯದ ಗೋವುಗಳು, 2 ಮೊಬೈಲ್ ಸ್ವಾಧೀನಪಡಿಸಿಕೊಳ್ಳಲಾಗಿದೆ.
ಈ ಬಗ್ಗೆ ಶಂಕರನಾರಾಯಣ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.