Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಮಕ್ಕಳ ಜ್ಞಾನ ಮಟ್ಟ ಅಳೆಯಲು ಅಂಕ ಗಳಿಕೆಯೊಂದೇ ಆಧಾರವಲ್ಲ: ಅಬ್ದುಲ್ ರವೂಫ್
    ಊರ್ಮನೆ ಸಮಾಚಾರ

    ಮಕ್ಕಳ ಜ್ಞಾನ ಮಟ್ಟ ಅಳೆಯಲು ಅಂಕ ಗಳಿಕೆಯೊಂದೇ ಆಧಾರವಲ್ಲ: ಅಬ್ದುಲ್ ರವೂಫ್

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕುಂದಾಪುರ:
    ಮಕ್ಕಳನ್ನು ಕೇವಲ ಪಠ್ಯಪುಸ್ತಕಗಳಿಗೆ ಮಾತ್ರ ಸೀಮಿತವಾಗಿರಿಸದೆ, ಮಕ್ಕಳು ಎಲ್ಲಾ ವಿಧದ ಜ್ಞಾನಗಳನ್ನು ಪಡೆಯುವ ಅವಕಾಶವನ್ನು ಕಲ್ಪಿಸಿಕೊಡಬೇಕು ಎಂದು ಹೆಸ್ಕುತೂರು  ಶಾಲೆಯ ಮುಖ್ಯ ಶಿಕ್ಷಕ ಅಬ್ದುಲ್ ರವೂಫ್ ಹೇಳಿದರು.

    Click Here

    Call us

    Click Here

    ಅವರು ಇಲ್ಲಿನ ವಿದ್ಯಾರಣ್ಯ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಆಯೋಜಿಸಿದ ಮೂರು ದಿನಗಳ ಶಿಕ್ಷಕರ ತರಬೇತಿ ಕಾರ್ಯಗಾರ ಒರಿಯೆಂಟೇಷನ್ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಮಾತನಾಡಿದರು.

    ಶಿಕ್ಷಣದ ನಿಜವಾದ ಕಲ್ಪನೆಯು ಮಕ್ಕಳಲ್ಲಿ ಅಡಕವಾಗಿರುವ ಎಲ್ಲಾ ಪ್ರತಿಭೆಯನ್ನು ಹೊರ ಜಗತ್ತಿಗೆ ಪರಿಚಯಿಸುವುದಾಗಿದೆ. ಹೆಚ್ಚು ಹೆಚ್ಚು ಚಟುವಟಿಕೆಗಳನ್ನು ಪಠ್ಯದ ಜೊತೆಯಲ್ಲಿ ಅಳವಡಿಸಿಕೊಂಡಾಗ ಮಕ್ಕಳು ಆಸಕ್ತಿದಾಯಕ ಕಲಿಕೆಯಲ್ಲಿ ಪಾಲ್ಗೊಳ್ಳಲು ಸಾಧ್ಯವಾಗುತ್ತದೆ. ಶಿಕ್ಷಕರು ಹೆಚ್ಚು ತರಬೇತಿಗಳಲ್ಲಿ,ಕಾರ್ಯಗಾರಗಳಲ್ಲಿ ಪಾಲ್ಗೊಂಡು ಹೆಚ್ಚಿನ ಜ್ಞಾನವನ್ನು ಪಡೆದಾಗ ಮಕ್ಕಳು ಹೆಚ್ಚು ಕ್ರಿಯಾಶೀಲತೆಯಿಂದ ಕಲಿಕೆಯಲ್ಲಿ ಪಾಲ್ಗೊಳ್ಳುವಂತೆ ಮಾಡಲು ಸಾಧ್ಯವಾಗುತ್ತದೆ ಎಂದರು.

    ಮಕ್ಕಳ ಜ್ಞಾನವನ್ನು, ಬುದ್ಧಿ ಮಟ್ಟವನ್ನು ಅಳೆಯಲು ಪಠ್ಯದ ಅಂಕಗಳಿಕೆಯೊಂದೇ ಮೂಲ ಆಧಾರವಾಗಲಾರದು. ಮಕ್ಕಳು ಎಲ್ಲಾ ಜ್ಞಾನವನ್ನು ಪಡೆದು ಸರ್ವಾಂಗೀಣ ಪ್ರಗತಿ ಹೊಂದಿದಾಗ ಪಡೆದ ಶಿಕ್ಷಣ ಸಾರ್ಥಕವಾಗುತ್ತದೆ. ಇದಕ್ಕೆ ಶಿಕ್ಷಕರ ತರಬೇತಿ ಕಾರ್ಯಗಾರಗಳು ಹೆಚ್ಚು ಸಹಕಾರಿಯಾಗುತ್ತದೆ ಎಂದರು.

    ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿರುವ ಸಂಸ್ಥೆಯ ಆಡಳಿತ ಮಂಡಳಿ ಸುಜ್ಞಾನ ಎಜುಕೇಶನಲ್ ಟ್ರಸ್ಟ್ ನ ಅಧ್ಯಕ್ಷರಾದ ಡಾ. ರಮೇಶ್ ಶೆಟ್ಟಿ ಮಾತನಾಡಿ, “ಇಂತಹ ತರಬೇತಿ ಕಾರ್ಯಕ್ರಮಗಳನ್ನು ನಾವು ಕಳೆದ ಹಲವು ವರ್ಷಗಳಿಂದ ನಡೆಸುತ್ತಿದ್ದು ಶಿಕ್ಷಕರನ್ನು ಇನ್ನಷ್ಟು ಕ್ರಿಯಾಶೀಲರಿನ್ನಾಗಿಸಲು ಸಾಧ್ಯವಾಗುತ್ತದೆ.  ಪ್ರತಿದಿನವೂ ಬದಲಾವಣೆ ಹೊಂದುತ್ತಿರುವ ಇಂದಿನ ಶಿಕ್ಷಣ ವ್ಯವಸ್ಥೆಯಲ್ಲಿ ಶಿಕ್ಷಕರು ಹೊಸ ಹೊಸ ಚಿಂತನೆಗಳನ್ನು ಅಳವಡಿಸಿಕೊಂಡು ಇಂದಿನ ಶೈಕ್ಷಣಿಕ ವಿದ್ಯಾಮಾನಕ್ಕೆ ಹೊಂದಿಕೊಳ್ಳುವುದು ಅತ್ಯಗತ್ಯ. ಇಂದಿನ ಮೊಬೈಲ್ ಯುಗದಲ್ಲಿ ಮಕ್ಕಳನ್ನು ಕಲಿಕಾ ಚಟುವಟಿಕೆಯಲ್ಲಿ ಸಂಪೂರ್ಣವಾಗಿ ತೊಡಗಿಸಿಕೊಳ್ಳುವಂತೆ ಮಾಡಲು ಶಿಕ್ಷಕರ ತರಬೇತಿ ಕಾರ್ಯಾಗಾರಗಳು ತುಂಬಾ ಸಹಕಾರಿಯಾಗುತ್ತಿದೆ” ಎಂದರು.

    Click here

    Click here

    Click here

    Click Here

    Call us

    Call us

    ಮೊದಲ ದಿನದ ಕಾರ್ಯಾಗಾರದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಫ್ರೀಲ್ಯಾನ್ಸ್ ಅಕಾಡೆಮಿಕ್ ಕೌನ್ಸಿಲ್ ಕನ್ಸಲ್ಟೆಂಟ್ ಆಂಡ್ ಸಾಫ್ಟ್ ಸ್ಕಿಲ್ಸ್ ತರಬೇತುದರಾಗಿರುವ ಅರುಣ ಎಸ್. ಭಾಗವಹಿಸಿದ್ದರು. ಕಾರ್ಯಕ್ರಮದಲ್ಲಿ ಸಂಸ್ಥೆಯ ಮುಖ್ಯ ಶಿಕ್ಷಕರಾದ ಪ್ರದೀಪ್ ಕೆ. ಹಾಗೂ ಓರಿಯಂಟಲ್ ಬ್ಲಾಕ್ ಸ್ವಾನ್ ಪ್ರಕಾಶನದ ಚೇತನ್  ಉಪಸ್ಥಿತರಿದ್ದರು.

    ಸಂಸ್ಥೆಯ ಶಿಕ್ಷಕರು ಬಹಳ ಆಸಕ್ತಿಯಿಂದ ತರಬೇತಿಯಲ್ಲಿ ಪಾಲ್ಗೊಂಡರು. ಶಿಕ್ಷಕಿ ಸುಧಾ ಕಾರ್ಯಕ್ರಮ ನಿರೂಪಿಸಿದರು.

    kundapura
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ

    21/05/2026

    ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ

    21/05/2026

    ಶಂಕರನಾರಾಯಣ: ಕಟ್ಟೆಮಕ್ಕಿ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ಶಿಲಾದೇಗುಲ ಲೋಕಾರ್ಪಣೆ

    21/05/2026
    Leave A Reply Cancel Reply

    17 − five =

    Call us

    Click Here

    Call us

    Call us

    Call us
    Highest Viewed Recently
    • ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ
    • 21ನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ ಆಳ್ವಾಸ್ ವಿದ್ಯಾರ್ಥಿನಿಯರು
    • ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ
    • ಶಂಕರನಾರಾಯಣ: ಕಟ್ಟೆಮಕ್ಕಿ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ಶಿಲಾದೇಗುಲ ಲೋಕಾರ್ಪಣೆ
    • ಬಹುಮಾನ ಹಣ ಮಂಜೂರು: ಅರ್ಜಿ ಆಹ್ವಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.