ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಮನಸ್ಸಿನ ಸಮಸ್ಯೆ ಸರಿ ಮಾಡಲು ಡಾಕ್ಟರ್ ಇದ್ದಾರೆ. ಮನಸ್ಥಿತಿಯ ಸಮಸ್ಯೆ ಸರಿ ಮಾಡಲು ಯಾರು ಬರುವುದಿಲ್ಲ ನಾವೇ ಸರಿ ಮಾಡಿಕೊಳ್ಳಬೇಕು ಹಾಗೂ ಅವಕಾಶ ಬಳಸಿಕೊಂಡು ಮನ್ನೆಡೆಯಬೇಕು. ನಮ್ಮ ಜೀವನದ ಯಶಸ್ಸು ಪಡೆಯಬೇಕಾದರೆ ಹಾರ್ಡ್ ವರ್ಕ್ ಮಾಡಲೇಬೇಕು. ಸಾಧನೆಗೆ ಶ್ರಮವೇ ಗುರು. ಶ್ರಮ ನಮ್ಮದು ಅದಕ್ಕೆ ಪ್ರತಿಫಲ ಸಿಕ್ಕೆ ಸಿಗುತ್ತದೆ. ಆ ನಿಟ್ಟಿನಲ್ಲಿ ವಿದ್ಯಾರ್ಥಿಗಳು ಪ್ರತಿ ದಿನ ಪ್ರತಿ ಕ್ಷಣ ಶೈಕ್ಷಣಿಕ ಅಭ್ಯಾಸದಲ್ಲಿ ತಮ್ಮನ್ನು ತೊಡಗಿಸಿಕೊಳ್ಳಬೇಕು ಎಂದು ತ್ರಿಷಾ ಸಮೂಹ ಸಂಸ್ಥೆಗಳ ಸಂಸ್ಥಾಪಕರಾದ ಸಿಎ ಗೋಪಾಲಕೃಷ್ಣ ಭಟ್ ಹೇಳಿದರು.
ಅವರು ಇಲ್ಲಿನ ಹೆಮ್ಮಾಡಿಯ ಜನತಾ ಪದವಿ ಪೂರ್ವ ಕಾಲೇಜಿನಲ್ಲಿ ಪ್ರಥಮ ಪಿಯು ವಾಣಿಜ್ಯ ವಿಭಾಗದ ಸಿಎ, ಸಿಎಸ್ ವಿದ್ಯಾರ್ಥಿಗಳಿಗೆ ಆಯೋಜಿಸಿದ ಓರಿಂಟೇಷನ್ ಕಾರ್ಯಕ್ರಮವನ್ನು ಉದ್ಘಾಟಿಸಿ, ಸಂಪನ್ಮೂಲ ವ್ಯಕ್ತಿಯಾಗಿ ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಜನತಾ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಗಣೇಶ್ ಮೊಗವೀರ ಅವರುಮಾತನಾಡಿ, ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ವಿದ್ಯಾರ್ಥಿಗಳು ಸ್ಪರ್ಧಾ ಮನೋಭಾವ ರೂಡಿಸಿಕೊಂಡು ವ್ಯಕ್ತಿತ್ವ ರೂಪಿಸಿಕೊಳ್ಳಬೇಕು. ಗ್ರಾಮೀಣ ಭಾಗದಲ್ಲಿರುವ ನಮ್ಮ ಕಾಲೇಜಿನಲ್ಲಿ ಕಲಿತ ಅನೇಕ ವಿದ್ಯಾರ್ಥಿಗಳು ರಾಜ್ಯ ರಾಷ್ಟ್ರ ಮಟ್ಟದಲ್ಲಿ ಶೈಕ್ಷಣಿಕ ಸಾಧನೆ ಮಾಡಿದ್ದಾರೆ. ನಮ್ಮಲ್ಲಿ ಸಿಗುವ ಅವಕಾಶ ಬಳಸಿಕೊಂಡು ಉತ್ತಮ ವ್ಯಕ್ತಿಗಳಾಗಿ ಎಂದು ಶುಭ ಹಾರೈಸಿದರು.
ಉಪ ಪ್ರಾಂಶುಪಾಲರಾದ ರಮೇಶ್ ಪೂಜಾರಿ ವಿದ್ಯಾರ್ಥಿಗಳಿಗೆ ಕಾಲೇಜಿನ ನಿಯಮ, ಶಿಸ್ತು ಪಾಲನೆ ಕುರಿತು ಮಾಹಿತಿ ನೀಡಿದರು.
ವೇದಿಕೆಯಲ್ಲಿ ಜನತಾ ಸಮೂಹ ಸಂಸ್ಥೆಯ ಕಾರ್ಯದರ್ಶಿ ಶ್ಯಾಮಲಾ ಗಣೇಶ್, ವಾಣಿಜ್ಯ ವಿಭಾಗದ ಉಪನ್ಯಾಸಕರಾದ ಪ್ರತಾಪ್ ಉಪಸ್ಥಿತರಿದ್ದರು. ಉಪನ್ಯಾಸಕರಾದ ಉದಯ್ ನಾಯ್ಕ್ ಕಾರ್ಯಕ್ರಮ ನಿರೂಪಿಸಿ, ಉಪನ್ಯಾಸಕರಾದ ಅಲ್ತಾರು ನಾಗರಾಜ್ ಸ್ವಾಗತಿಸಿದರು.















