ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಮೂಡ್ಲಕಟ್ಟೆ ತಾಂತ್ರಿಕ ವಿದ್ಯಾಲಯ ಇಲ್ಲಿನ ಎಂ.ಬಿ.ಎ ವಿಭಾಗದ ವತಿಯಿಂದ ವಿಶ್ವ ತಂಬಾಕು ನಿಷೇಧ ದಿನವನ್ನು ಆಚರಿಸಿದರು.
ಈ ಸಂದರ್ಭದಲ್ಲಿ ಪ್ರಥಮ ಎಂ.ಬಿ.ಎ ವಿಭಾಗದ ವಿದ್ಯಾರ್ಥಿಗಳು ತಂಬಾಕಿ ನಿಂದಾಗುವ ದುಷ್ಟಪರಿಣಾಮಗಳನ್ನು ತೋರಿಸುವ ಒಂದು ಕಿರು ನಾಟಕವನ್ನು ಪ್ರದರ್ಶಿಸುವ ಮೂಲಕ ಜನಜಾಗೃತಿಯನ್ನು ಮೂಡಿಸಿದರು.
ಕಾರ್ಯಕ್ರಮದಲ್ಲಿ ಎಂ.ಬಿ.ಎ ವಿಭಾಗದ ಮುಖ್ಯಸ್ಥೆ ಡಾ. ಸುಚಿತ್ರಾ ಪೂಜಾರಿ ಅವರು ಉಪಸ್ಥಿತರಿದ್ದು ವಿದ್ಯಾರ್ಥಿಗಳ ಜನಜಾಗೃತಿ ಮೂಡಿಸುವ ಪ್ರಯತ್ನವನ್ನು ಹೊಗಳಿದರು. ವಿಭಾಗದ ವಿದ್ಯಾರ್ಥಿಗಳು ಮತ್ತು ಉಪನ್ಯಾಸಕರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ಅಸಿಸ್ಟೆಂಟ್ ಪ್ರೊಫೆಸರ್ ಚೈತಾಲಿ ಕಾರ್ಯಕ್ರಮವನ್ನು ನಿರ್ವಹಿಸಿದರು.










