ಕುಂದಾಪ್ರ ಡಾಟ್ ಕಾಂ ಸುದ್ದಿ.
ಶಂಕರನಾರಾಯಣ: ತಾಲೂಕಿನ ಆಜ್ರಿ ಗ್ರಾಮದ ಕೂಲಿ ಕಾರ್ಮಿಕ ಚಂದ್ರ (48) ಅವರು ಇತ್ತೀಚಿಗೆ ಮನೆಯ ದನದ ಕೊಟ್ಟಿಗೆಯ ಹಿಂಬದಿಯ ಪೇರಳೆ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡು ಮೃತಪಟ್ಟಿದ್ದಾರೆ.
ಅವರ ಪತ್ನಿ ಎರಡು ವರ್ಷಗಳ ಹಿಂದೆ ಮೃತಪಟ್ಟಿದ್ದು ಅನಂತರ ಅವರು ಮೌನಕ್ಕೆ ಶರಣಾಗಿದ್ದರು. ಅಡಿಕೆ ಮರಕ್ಕೆ ಔಷಧ ಸಿಂಪರಣೆಗೆ ಚಂದ್ರ ಅವರು ಬರದೆ ಇದ್ದ ಕಾರಣ ಪಕ್ಕದ ಮನೆಯವರು ವಿಚಾರಿಸಲು ಅವರ ಮನೆಗೆ ಹೋಗಿದ್ದು, ಆಗ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವಿಚಾರ ಬೆಳಕಿಗೆ ಬಂದಿದೆ.
ಈ ಬಗ್ಗೆ ಶಂಕರನಾರಾಯಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.