Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಜಿಲ್ಲೆಯಲ್ಲಿ ಬಾಲಕಾರ್ಮಿಕ ಅನಿಷ್ಠ ಪದ್ಧತಿಯನ್ನು ಸಂಪೂರ್ಣವಾಗಿ ನಿರ್ಮೂಲನೆಗೊಳಿಸಿ: ಜಿಲ್ಲಾಧಿಕಾರಿ
    ಉಡುಪಿ ಜಿಲ್ಲೆ

    ಜಿಲ್ಲೆಯಲ್ಲಿ ಬಾಲಕಾರ್ಮಿಕ ಅನಿಷ್ಠ ಪದ್ಧತಿಯನ್ನು ಸಂಪೂರ್ಣವಾಗಿ ನಿರ್ಮೂಲನೆಗೊಳಿಸಿ: ಜಿಲ್ಲಾಧಿಕಾರಿ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಉಡುಪಿ:
    ಬಾಲಕಾರ್ಮಿಕ ಪದ್ಧತಿಯು ಸಮಾಜದಲ್ಲಿ ಅನಿಷ್ಠ ಪಿಡುಗಾಗಿದೆ. ಜಿಲ್ಲೆಯಲ್ಲಿ ಇದನ್ನು ಸಂಪೂರ್ಣವಾಗಿ ನಿರ್ಮೂಲನೆ ಮಾಡುವುದರೊಂದಿಗೆ ಮಕ್ಕಳನ್ನು ಶಿಕ್ಷಣವಂತರನ್ನಾಗಿಸಬೇಕು ಎಂದು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಅಧಿಕಾರಿಗಳಿಗೆ ಕರೆ ನೀಡಿದರು.

    Click Here

    Call us

    Click Here

    ಅವರು ಅಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಬಾಲಕಾರ್ಮಿಕ ಯೋಜನಾ ಸಂಘದ ಜಿಲ್ಲಾ ಮಟ್ಟದ ಕಾರ್ಯಕಾರಿ ಸಮಿತಿ, ಸಲಹಾ ಸಮಿತಿ ಮತ್ತು ಟಾಸ್ಕ್ ಫೋರ್ಸ್ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

    ಮಕ್ಕಳು ತಮ್ಮ ಬಾಲ್ಯಾವಸ್ಥೆಯಲ್ಲಿಯೇ ದುಡಿಮೆಗೆ ತೊಡಗಿಕೊಂಡಲ್ಲಿ ಅವರುಗಳು ಶಿಕ್ಷಣದಿಂದ ವಂಚಿತರಾಗುವುದರ ಜೊತೆಗೆ ಮಾನಸಿಕ ಹಾಗೂ ದೈಹಿಕ ಶಾರೀರಿಕ ಬೆಳವಣಿಗೆಗೆ ಹಾನಿ ಉಂಟಾಗುವುದರ ಜೊತೆಗೆ ಭವಿಷ್ಯದ ಆಯ್ಕೆಗಳನ್ನು ಸೀಮಿತಗೊಳಿಸುತ್ತದೆ. ಈ ಹಿನ್ನೆಲೆ ಬಾಲಕಾರ್ಮಿಕ ರಕ್ಷಣಾ ಕಾಯಿದೆಯನ್ನು ಜಾರಿಗೆ ತರಲಾಗಿದೆ. ಇದನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸುವ ಕರ್ತವ್ಯ ಜನಸಾಮಾನ್ಯರು ಹಾಗೂ ಅಧಿಕಾರಿಗಳ ಮೇಲಿದ್ದು, ಇದನ್ನು ಜವಾಬ್ದಾರಿಯುತವಾಗಿ ನಿರ್ವಹಿಸುವುದರೊಂದಿಗೆ ಮಕ್ಕಳು ತಮ್ಮ ಬಾಲ್ಯಾವಸ್ಥೆಯನ್ನು ಸವಿಯುವುದರೊಂದಿಗೆ ಶಿಕ್ಷಣವಂತರನ್ನಾಗಿಸಲು ಪೂರಕ ವಾತಾವರಣವನ್ನು ನಿರ್ಮಿಸಬೇಕು ಎಂದರು.

    ಜಿಲ್ಲೆಯ ಮಲ್ಪೆ ಮೀನುಗಾರಿಕೆಯ ಹರಾಜು ಸ್ಥಳಗಳಲ್ಲಿ, ಕೆಲವು ವಾಣಿಜ್ಯ ಸ್ಥಳಗಳಲ್ಲಿ, ಕಲ್ಲುಕೋರೆಗಳಲ್ಲಿ ಮರಳು ತೆಗೆಯುವ ಪ್ರದೇಶಗಳು ಸೇರಿದಂತೆ ಮತ್ತಿತರ ಕಡೆಗಳಲ್ಲಿ ಮಕ್ಕಳು ದುಡಿಮೆಗೆ ತೊಡಗಿಕೊಳ್ಳುತ್ತಿರುವ ಬಗ್ಗೆ ಈ ಹಿಂದೆ ಅನೇಕ ಪ್ರಕರಣಗಳು ಆಗಿವೆ. ಅಲ್ಲಿಯೇ ಪುನರಾವರ್ತಿತವಾಗುವ ಸಾಧ್ಯತೆಗಳು ಇರುತ್ತವೆ. ಇಂತಹ ತಾಣಗಳ ಮೇಲೆ ನಿರಂತರವಾಗಿ ಆಗಿಂದಾಗ್ಗೆ ಹಠಾತ್ ದಾಳಿ ನಡೆಸಿ, ಮಕ್ಕಳು ನಿಯೋಜನೆಗೊಂಡಿರುವುದು ಕಂಡುಬಂದಲ್ಲಿ ಕಾನೂನಿನ ಅಡಿಯಲ್ಲಿ ಪ್ರಕರಣ ದಾಖಲಿಸಿ, ಅವರುಗಳ ಮೇಲೆ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಬೇಕು ಎಂದು ಸೂಚನೆ ನೀಡಿದರು.

    ಕೆಲವು ವರ್ಷಗಳ ಹಿಂದೆ ಬಾಲಕಾರ್ಮಿಕ ಹಾಗೂ ಕಿಶೋರ ಕಾರ್ಮಿಕರಾಗಿ ಕಂಡಿಬಂದ ಮಕ್ಕಳಿಗೆ ಬಾಲ ಕಾರ್ಮಿಕ ಪುನರ್ವಸತಿ ನಿದಿ ಹಾಗೂ ಕಾರ್ಪಸ್ ನಿಧಿ ಒಳಗೊಂಡ ಒಟ್ಟು 35000 ರೂ.ಗಳನ್ನು ಅವರುಗಳಿಗೆ ವಿದ್ಯಾಭ್ಯಾಸಕ್ಕಾಗಿ 18 ವರ್ಷ ತುಂಬಿದ ಮೂರು ತಿಂಗಳ ಒಳಗಾಗಿ ಕಾಯಿದೆ ಅನ್ವಯ ನೀಡಬೇಕು. ಆದರೆ ಅನೇಕ ಪ್ರಕರಣಗಳಲ್ಲಿ ನೀಡದೇ ಇರುವುದು ಕಂಡು ಬಂದಿದೆ. ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಅವರು, ಕೂಡಲೇ ಮಕ್ಕಳಿಗೆ ಅನುದಾನವನ್ನು ನೀಡಬೇಕು ಎಂದು ಸೂಚನೆ ನೀಡಿದರು.

    Click here

    Click here

    Click here

    Click Here

    Call us

    Call us

    ಬಾಲ ಹಾಗೂ ಕಿಶೋರ ಕಾರ್ಮಿಕರನ್ನು ನೇಮಿಸಿಕೊಂಡ ಸಂಸ್ಥೆಯ ವಿರುದ್ಧ ಹಾಕಿರುವ ಮೊಕದ್ದಮೆಗಳನ್ನು ನಿರಂತರವಾಗಿ ಅನುಕರಣೆ ಮಾಡುವುದರೊಂದಿಗೆ ತಪ್ಪಿತಸ್ಥರಿಗೆ ದಂಡ ಹಾಗೂ ಶಿಕ್ಷೆ ವಿಧಿಸುವಂತೆ ನೋಡಿಕೊಳ್ಳಬೇಕು ಎಂದ ಅವರು, ಪುನರಾವರ್ತಿತವಾಗಿ ಬಾಲ ಕಾರ್ಮಿಕರನ್ನು ನಿಯೋಜಿಸಿಕೊಂಡ ಸಂಸ್ಥೆ ಅಥವಾ ವಾಣಿಜ್ಯ ಉದ್ಯಮಿಗಳಿದ್ದಲ್ಲಿ ಅಂತಹ ಸಂಸ್ಥೆಯ ಪರವಾನಿಗೆಯನ್ನು ರದ್ದುಪಡಿಸಲು ಸ್ಥಳೀಯ ಸಂಸ್ಥೆಗಳು ಕ್ರಮ ವಹಿಸುವಂತೆ ವೃತ್ತ ನಿರೀಕ್ಷಕರು ನೋಡಿಕೊಳ್ಳಬೇಕು ಎಂದರು.

     ಜಿಲ್ಲೆಯಲ್ಲಿ ಭಿಕ್ಷಾಟನೆಯನ್ನು ಸಣ್ಣ ಮಗುವಿನೊಂದಿಗೆ ತಾಯಂದಿರು ಮಾಡುತ್ತಿರುವ ಪ್ರಕರಣಗಳು ಆಗಿವೆ. ಅವರನ್ನು ನಿರಾಶ್ರಿತರ ಕೇಂದ್ರಗಳಲ್ಲಿ ಪುನರ್ವಸತಿ ಕಲ್ಪಿಸಲು ನೆರೆಯ ದಕ್ಷಿಣ ಕನ್ನಡ ಜಿಲ್ಲೆಗೆ ಕಳುಹಿಸಿಕೊಟ್ಟಾಗ ಸಣ್ಣ ಮಕ್ಕಳನ್ನು ನಿರಾಶ್ರಿತ ಕೇಂದ್ರದಲ್ಲಿ ನಿಯೋಜಿಸಲು ಅವಕಾಶವಿಲ್ಲ ಎಂಬ ಕಾರಣ ಹೇಳುತ್ತಾರೆ. ಇದರಿಂದ ಸಮಸ್ಯೆ ಉಂಟಾಗುತ್ತಿದೆ. ಜಿಲ್ಲೆಯಲ್ಲಿ ನಿರಾಶ್ರಿತರ ಕೇಂದ್ರ ತೆರೆಯಲು ಸರ್ಕಾರಕ್ಕೆ ಪ್ರಸ್ತಾವನೆಯನ್ನು ಕಳುಹಿಸಬೇಕೆಂದು ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದರು.

    ಜಿಲ್ಲೆಯಲ್ಲಿ 2024-25 ನೇ ಸಾಲಿನಲ್ಲಿ ಕಾರ್ಮಿಕ ಇಲಾಖೆ ವತಿಯಿಂದ ಒಟ್ಟು 1032 ತಪಾಸಣೆ ನಡೆಸಿದಾಗ, 2 ಅಪಾಯಕಾರಿ ಹಾಗೂ 3 ಅಪಾಯಕಾರಿಯಲ್ಲದ ಸಂಸ್ಥೆಗಳಲ್ಲಿ ಕಿಶೋರ ಕಾರ್ಮಿಕರು ಕಾರ್ಯನಿರ್ವಹಿಸಿತ್ತಿರುವ ಬಗ್ಗೆ ಒಟ್ಟು 5 ಪ್ರಕರಣಗಳು ಪತ್ತೆ ಮಾಡಿ, ಪ್ರಕರಣ ದಾಖಲಿಸಲಾಗಿದೆ ಎಂದರು.

    ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್ ಮಾತನಾಡಿ, ಬಾಲಕಾರ್ಮಿಕ ಪದ್ಧತಿಯಿಂದ ರಕ್ಷಿಸಿದ ಮಕ್ಕಳ ಮುಂದಿನ ಭವಿಷ್ಯವನ್ನು ಉತ್ತಮವಾಗಿ ರೂಪಿಸುವ ಜವಾಬ್ದಾರಿಯನ್ನು ಕಾರ್ಮಿಕ ಇಲಾಖೆ, ಶಿಕ್ಷಣ ಇಲಾಖೆ ಸಮನ್ವಯದೊಂದಿಗೆ ಮಾಡಬೇಕು. ಅವಶ್ಯವಿದ್ದಲ್ಲಿ ಮಕ್ಕಳ ಶಿಕ್ಷಣ ಮುಂದುವರೆಸಲು ವಸತಿ ಶಾಲೆ, ಹಾಸ್ಟಲ್‌ಗಳಂತಹ ಸೌಲಭ್ಯವನ್ನು ಕಲ್ಪಿಸಬೇಕು ಎಂದು ಸೂಚನೆ ನೀಡಿದರು.

    ಸಭೆಯಲ್ಲಿ ಜಿಲ್ಲಾ ಕಾರ್ಮಿಕ ಅಧಿಕಾರಿ ಜಿಲ್ಲಾ ಕಾರ್ಮಿಕ ಅಧಿಕಾರಿ ಕಮಲ್ ಷಾ ಅಲ್ತಾಫ್ ಅಹಮದ್, ಕೈಗಾರಿಕಾ ಇಲಾಖೆಯ ಜಂಟಿ ನಿರ್ದೇಶಕ ನಾಗರಾಜ್ ವಿ ನಾಯಕ್, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಅಶೋಕ್ ಕಾಮತ್, ಬಾಲ ಕಾರ್ಮಿಕ ಯೋಜನಾ ಸಂಸ್ಥೆಯ ಯೋಜನಾ ನಿರ್ದೇಶಕಿ ಅಮೃತಾ, ವಿವಿಧ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ʼಸಾಮಾಜಿಕ ನ್ಯಾಯ ಮತ್ತು ಭದ್ರತೆʼ ವಿಷಯದ ಕುರಿತು ಉಪನ್ಯಾಸ

    22/05/2026

    ಜಲಮಾಲಿನ್ಯ ಉಂಟುಮಾಡುವ ವಸತಿ ಸಮುಚ್ಚಯಗಳ ಮಾಲೀಕರ ಮೇಲೆ ಕಾನೂನು ಕ್ರಮ: ಜಿಲ್ಲಾಧಿಕಾರಿ ಸೂಚನೆ

    22/05/2026

    ಸಣ್ಣ ಉದ್ದಿಮೆಗೆ ಸಹಾಯಧನ: ಅರ್ಜಿ ಆಹ್ವಾನ

    22/05/2026
    Leave A Reply Cancel Reply

    four × 3 =

    Call us

    Click Here

    Call us

    Call us

    Call us
    Highest Viewed Recently
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ʼಸಾಮಾಜಿಕ ನ್ಯಾಯ ಮತ್ತು ಭದ್ರತೆʼ ವಿಷಯದ ಕುರಿತು ಉಪನ್ಯಾಸ
    • ಜಲಮಾಲಿನ್ಯ ಉಂಟುಮಾಡುವ ವಸತಿ ಸಮುಚ್ಚಯಗಳ ಮಾಲೀಕರ ಮೇಲೆ ಕಾನೂನು ಕ್ರಮ: ಜಿಲ್ಲಾಧಿಕಾರಿ ಸೂಚನೆ
    • ಸಣ್ಣ ಉದ್ದಿಮೆಗೆ ಸಹಾಯಧನ: ಅರ್ಜಿ ಆಹ್ವಾನ
    • ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯ ಪ್ರವೇಶಾತಿ: ಅರ್ಜಿ ಆಹ್ವಾನ
    • ಸ್ಥಳೀಯ ಸಂಸ್ಥೆಗಳು ಘನತ್ಯಾಜ್ಯ ವಸ್ತುಗಳ ವಿಲೇವಾರಿಯನ್ನು ವೈಜ್ಞಾನಿಕ ರೀತಿಯಲ್ಲಿ ಕೈಗೊಳ್ಳಿ: ಜಿಲ್ಲಾಧಿಕಾರಿ ಸೂಚನೆ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.