ಕುಂದಾಪ್ರ ಡಾಟ್ ಕಾಂ ಸುದ್ದಿ.
ಉಡುಪಿ,ಜೂ.11: ಜಿಲ್ಲೆಯಲ್ಲಿ ನಾಲ್ಕೈದು ದಿನ ರೆಡ್ ಅಲರ್ಟ್ ಇರುವುದರಿಂದ ಜಿಲ್ಲೆಯ ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ಜೂನ್.12ರಂದು ಜಿಲ್ಲಾಧಿಕಾರಿಗಳು ರಜೆ ಘೋಷಿಸಿದ್ದಾರೆ.
ಉಳಿದಂತೆ ಪಿಯುಸಿ, ಡಿಪ್ಲೋಮಾ, ಇಂಜಿನಿಯರಿಂಗ್ ಹಾಗೂ ಪದವಿ ಕಾಲೇಜುಗಳಿಗೆ ಎಂದಿನಂತೆ ತರಗತಿಗಳು ಇರಲಿದ್ದು, ಹಾಜರಾತಿ ಕಡ್ಡಾಯವಿರುವುದಿಲ್ಲ.
ಬುಧವಾರ ಮಧ್ಯಾಹ್ನದಿಂದ ಕರಾವಳಿ ಭಾಗದಲ್ಲಿ ನಿರಂತರ ಮಳೆಯಾಗುತ್ತಿದ್ದು, ಹವಾಮಾನ ಇಲಾಖೆ ಶುಕ್ರವಾರ ಶನಿವಾರ, ಭಾನುವಾರ ಸೋಮವಾರ, ಮಂಗಳವಾರ ರೆಡ್ ಅಲರ್ಟ್ ಹಾಗೂ ಗುರುವಾರ, ಶನಿವಾರ ರೆಲ್ಲೋ ಅಲರ್ಟ್ ಘೋಷಿಸಲಾಗಿದೆ.










