ಕುಂದಾಪ್ರ ಡಾಟ್ ಕಾಂ ಸುದ್ದಿ.
ಉಡುಪಿ: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಬೆಳಗಾವಿ ಹಾಗೂ ಮೈಸೂರು ಕಂದಾಯ ವಿಭಾಗಗಳಲ್ಲಿ ಅಲ್ಪಸಂಖ್ಯಾತರ ಸಮುದಾಯದ ಯುವ ಜನರಿಗೆ ವಸತಿಯುತ ಪೊಲೀಸ್ ಸಬ್ ಇನ್ಸ್ಪೆಕ್ಟರ್ (ಪಿ.ಎಸ್.ಐ) ನೇಮಕಾತಿ ಪರೀಕ್ಷಾ ಪೂರ್ವ ತರಬೇತಿಗೆ ಆಯ್ಕೆ ಮಾಡುವ ಸಂಬಂಧ ಅರ್ಹ ಅಭ್ಯರ್ಥಿಗಳಿಂದ ಸೇವಾಸಿಂಧು ಪೋರ್ಟಲ್ http://sevasindhu.karnataka.gov.in/sevasindhu/DepartmentServices ಅಥವಾ http://dom.karnataka.govt.in ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ಅವಧಿಯನ್ನು ಜೂನ್ 15 ರ ವರೆಗೆ ವಿಸ್ತರಿಸಲಾಗಿದೆ.
ಹೆಚ್ಚಿನ ಮಾಹಿತಿಗಾಗಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಸಹಾಯವಾಣಿ ಸಂಖ್ಯೆ: 8277799990 ಅಥವಾ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಮೌಲಾನಾ ಆಜಾದ್ ಭವನ, ಅಲೆವೂರು ರಸ್ತೆ, ಮಣಿಪಾಲ ದೂ.ಸಂಖ್ಯೆ: 0820-2573596 ಅಥವಾ ಜಿಲ್ಲಾ ಅಲ್ಪಸಂಖ್ಯಾತರ ಮಾಹಿತಿ ಕೇಂದ್ರ ದೂ.ಸಂಖ್ಯೆ : 0820-2574596, ಕಾರ್ಕಳ ದೂ.ಸಂಖ್ಯೆ: 08258-231101 ಹಾಗೂ ಕುಂದಾಪುರ ದೂ.ಸಂಖ್ಯೆ: 08254-230370 ತಾಲೂಕು ಅಲ್ಪಸಂಖ್ಯಾತರ ಮಾಹಿತಿ ಕೇಂದ್ರಗಳನ್ನು ಸಂಪರ್ಕಿಸಬಹುದಾಗಿದೆ ಎಂದು ಇಲಾಖೆಯ ಕಚೇರಿ ಪ್ರಕಟಣೆ ತಿಳಿಸಿದೆ.










