ಕುಂದಾಪ್ರ ಡಾಟ್ ಕಾಂ ಸುದ್ದಿ.
ಉಡುಪಿ: ಮೈಸೂರಿನ ಚಾಮರಾಜೇಂದ್ರ ಸರ್ಕಾರಿ ದೃಶ್ಯಕಲಾ ಕಾಲೇಜು (ಕಾ.ವಾ) ಸಂಸ್ಥೆಯಲ್ಲಿ ಪ್ರಸಕ್ತ ಶೈಕ್ಷಣಿಕ ಸಾಲಿಗೆ ವಿವಿಧ ವಿಷಯಗಳಲ್ಲಿ ಅತಿಥಿ ಉಪನ್ಯಾಸಕರು / ಸಂಪನ್ಮೂಲ ವ್ಯಕ್ತಿಯಾಗಿ ಕಾರ್ಯನಿರ್ವಹಿಸಲು ಇಚ್ಛಿಸುವ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಜೂನ್ 16 ಕೊನೆಯ ದಿನ. ಜೂನ್ 26 ರಂದು ಬೆಳಗ್ಗೆ 11 ಗಂಟೆಗೆ ಸಂಸ್ಥೆಯಲ್ಲಿ ಸಂದರ್ಶನ ನಡೆಯಲಿದೆ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ವೆಬ್‌ಸೈಟ್ www.mysore.nic.in ಮತ್ತು www.cavamysore.karnataka.gov.in ಅಥವಾ ದೂ.ಸಂಖ್ಯೆ: 0821-2438931 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಸಂಸ್ಥೆಯ ಡೀನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.