ಉಡುಪಿ: ನೀರು ಸರಬರಾಜು ಮತ್ತು ನೈರ್ಮಲ್ಯ ಮಿಷನ್ ಸಮಿತಿ ಸಭೆ

Click Here

Call us

Call us

Call us

Call us

ಕುಂದಾಪ್ರ ಡಾಟ್‌ ಕಾಂ ಸುದ್ದಿ.
ಉಡುಪಿ:
ಜಿಲ್ಲೆಯಲ್ಲಿ ಗ್ರಾಮೀಣ ಭಾಗದ ಜನರಿಗೆ ನಿರಂತರ ಶುದ್ಧ ಕುಡಿಯುವ ನೀರು ಒದಗಿಸುವ ಕಾಮಗಾರಿಗಳನ್ನು ಗುಣಮಟ್ಟದೊಂದಿಗೆ ನಿಗಧಿತ ಕಾಲಾವಧಿಯ ಒಳಗೆ ಅದ್ಯತೆಯ ಮೇಲೆ ಕೈಗೊಂಡು ಶುದ್ಧ ನೀರನ್ನು ಒದಗಿಸಲು ಮುಂದಾಗಬೇಕು ಎಂದು ಅಧಿಕಾರಿಗಳಿಗೆ ಕೇಂದ್ರ ಜಲ ಜೀವನ್ ಮಿಷನ್ ಯೋಜನೆಯ ನೋಡೆಲ್ ಅಧಿಕಾರಿ ಆಶೀಶ್ ಕುಂದಾಲ್ ಅವರು ಸೂಚನೆ ನೀಡಿದರು.

Click Here

Call us

Click Here

ಅವರು ಅಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ನೀರು ಸರಬರಾಜು ಮತ್ತು ನೈರ್ಮಲ್ಯ ಮಿಷನ್ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಜಿಲ್ಲೆಯ ಗ್ರಾಮೀಣ ಭಾಗದ ಜನರಿಗೆ ನಿರಂತರ ಶುದ್ಧ ಕುಡಿಯುವ ನೀರು ಒದಗಿಸುವ ಜಲ್ ಜೀವನ್ ನಳ ನೀರನ್ನು ಒದಗಿಸುವ ಕಾಮಗಾರಿ ಗಳನ್ನು ಆದ್ಯತೆಯ ಮೇಲೆ ಕೈಗೊಳ್ಳಬೇಕು. ವಾರಾಹಿ ನದಿ ನೀರಿನ ಮೂಲದಿಂದ ಕಾರ್ಕಳ, ಹೆಬ್ರಿ ಹಾಗೂ ಕಾಪು ತಾಲೂಕಿನ 69 ಗ್ರಾಮಗಳ 1904 ವಾಸಸ್ಥಾನಗಳಿಗೆ ಕುಡಿಯುವ ನೀರನ್ನು ಒದಗಿಸುವ ಯೋಜನೆಯ ಕಾಮಗಾರಿಗಳನ್ನು ಮುಂಬರುವ ಡಿಸೆಂಬರ್ ಒಳಗೆ ಪೂರ್ಣಗೊಳಿಸಿ, ಜನರಿಗೆ ಶುದ್ಧ ಕುಡಿಯುವ ನೀರು ಒದಗಿಸಬೇಕು ಎಂದರು.

ಬಹುಗ್ರಾಮ ಕುಡಿಯುವ ನೀರಿನ ಪೈಪ್‌ಲೈನ್ ಕಾಮಗಾರಿ, ನೀರು ಶುದ್ಧೀಕರಣ ಘಟಕ, ಸೇರಿದಂತೆ ಮತ್ತಿತರ ಕಾಮಗಾರಿಗಳ ಪ್ರಗತಿಯ ಬಗ್ಗೆ ಮಾಹಿತ ಪಡೆದು ಮಾತನಾಡಿ, ಪೈಪ್‌ಲೈನ್ ಕಾಮಗಾರಿಯು ಮೀಸಲು ಅರಣ್ಯ ಪ್ರದೇಶ ಹಾಗೂ ವನ್ಯಜೀವಿ ಅರಣ್ಯ ಪ್ರದೇಶಗಳಲ್ಲಿ ಹಾದುಹೋಗಲಿದ್ದು, ಈಗಾಗಲೇ ಅರಣ್ಯ ಇಲಾಖೆ ವತಿಯಿಂದ ಒಪ್ಪಿಗೆ ನೀಡಿದೆ. ಕಾಮಗಾರಿಗಳನ್ನು ತ್ವರಿತವಾಗಿ ಕೈಗೊಳ್ಳಬೇಕು ಎಂದರು.

ಈ ಯೋಜನೆಗೆ ಅಗತ್ಯವಿರುವ ವಿದ್ಯುತ್‌ಚ್ಛಕ್ತಿ ಸಬ್‌ಸ್ಟೇಷನ್, ಪಂಪ್‌ಹೌಸ್, ಟ್ಯಾಂಕುಗಳ ನಿರ್ಮಾಣ ಕಾಮಗಾರಿಗಳನ್ನು ಶೀಘ್ರದಲ್ಲಿಯೇ ಪೂರ್ಣಗೊಳಿಸಬೇಕು ಎಂದ ಅವರು, ಗ್ರಾಮೀಣ ಭಾಗದಲ್ಲಿ ಅಂತರ್ಜಲ ಹೆಚ್ಚಿಸಲು ಅಗತ್ಯವಿರುವ ಕಾಮಗಾರಿಗಳನ್ನು ಆದ್ಯತೆಯ ಮೇಲೆ ಕೈಗೊಳ್ಳಬೇಕು ಎಂದರು.

Click here

Click here

Click here

Call us

Call us

ಸಭೆಯಲ್ಲಿ ಜಿಲ್ಲಾಧಿಕಾರಿ ಡಾ. ಕೆ. ವಿದ್ಯಾಕುಮಾರಿ, ಕೇಂದ್ರ ಜಲ ಜೀವನ್ ಮಿಷನ್ ಯೋಜನೆಯ ತಾಂತ್ರಿಕ ಸಹಾಯಕ ನಾರಾಯಣ ದಾಸ್ ಮಿಶ್ರಾ, ಜಿಲ್ಲಾ ಪಂಚಾಯತ್ ಮುಖ್ಯ ಯೋಜನಾಧಿಕಾರಿ ಡಾ. ಉದಯ್ ಕುಮಾರ್ ಶೆಟ್ಟಿ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದ ಕಾರ್ಯನಿರ್ವಾಹಕ ಅಭಿಯಂತರ ಉದಯ್ ಕುಮಾರ್, ವಿವಿಧ ಅಧಿಕಾರಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.

Leave a Reply