ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಮಾರುತಿ ಇಂಟರ್ನ್ಯಾಶನಲ್ ಸ್ಕೂಲ್ ಸುಳ್ಯ ಇಲ್ಲಿ ಸಿಐಎಸ್‌ಸಿಇ ಶಾಲೆಗಳ ನ್ಯಾಷನಲ್ ಸ್ಪೋರ್ಟ್ಸ್ ಮತ್ತು ಗೇಮ್ಸ್ 2025-26 ವಲಯಮಟ್ಟದ ಯೋಗಸ್ಪರ್ಧೆಗಳಲ್ಲಿ ಹಟ್ಟಿಯಂಗಡಿಯ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಯ ವಿದ್ಯಾರ್ಥಿಗಳು ಭಾಗವಹಿಸಿದ್ದರು.
14 ವರ್ಷದೊಳಗಿನ ವಯೋಮಿತಿಯ ಬಾಲಕರ ವಿಭಾಗದಲ್ಲಿ 8ನೇ ತರಗತಿಯ ವಿದ್ಯಾರ್ಥಿಗಳಾದ ಅನ್ಮೋಲ್ ಪ್ರಥಮ ಸ್ಥಾನವನ್ನು, ಅಪರಾಜಿತ್ ನಾಲ್ಕನೇ ಸ್ಥಾನವನ್ನೂ ಪಡೆದಿರುತ್ತಾರೆ.
17 ವರ್ಷದೊಳಗಿನ ಬಾಲಕರ ವಿಭಾಗದಲ್ಲಿ 9ನೇ ತರಗತಿಯ ಪ್ರಫುಲ್ ದ್ವಿತೀಯ ಸ್ಥಾನವನ್ನು ಪಡೆದಿರುತ್ತಾನೆ. 14 ವರ್ಷದೊಳಗಿನ ವಯೋಮಿತಿಯ ಬಾಲಕಿಯರ ವಿಭಾಗದಲ್ಲಿ 8ನೇ ತರಗತಿಯ ವಿದ್ಯಾರ್ಥಿನಿಯಾದ ಮಾನ್ಯತಾ ತೃತೀಯ ಸ್ಥಾನವನ್ನು ಪಡೆದಿರುತ್ತಾರೆ.
14 ವರ್ಷದೊಳಗಿನ ವಯೋಮಿತಿಯ ಬಾಲಕರ ವಿಭಾಗದಲ್ಲಿ ಚಾಂಪಿಯನ್ ಸ್ಥಾನವನ್ನು ಅನ್ಮೋಲ್ ಪಡೆದಿರುತ್ತಾನೆ.
ಶ್ರೀ ಸಿದ್ಧಿ ಶೈಕ್ಷಣಿಕ ಪ್ರತಿಷ್ಠಾನದ ಕಾರ್ಯದರ್ಶಿಗಳು ಹಾಗೂ ಶಾಲಾ ಪ್ರಾಂಶುಪಾಲರೂ ಆದ ಶರಣ ಕುಮಾರ ಪ್ರಶಸ್ತಿ ವಿಜೇತ ವಿದ್ಯಾರ್ಥಿಗಳನ್ನು ಮತ್ತು ತರಬೇತಿ ನೀಡಿದ ದೈಹಿಕ ಶಿಕ್ಷಕರನ್ನು ಅಭಿನಂದಿಸಿದರು.















