Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಆತಿಥ್ಯ ನೀಡುವುದರಲ್ಲಿ ಬಂಟ ಸಮುದಾಯ ಪ್ರಸಿದ್ಧಿ: ಬೆಳಗಾವಿ ಬಂಟರ ಭವನ ಉದ್ಘಾಟಿಸಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್
    ರಾಜ್ಯ

    ಆತಿಥ್ಯ ನೀಡುವುದರಲ್ಲಿ ಬಂಟ ಸಮುದಾಯ ಪ್ರಸಿದ್ಧಿ: ಬೆಳಗಾವಿ ಬಂಟರ ಭವನ ಉದ್ಘಾಟಿಸಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

    Updated:15/06/2025No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಬೆಳಗಾವಿ:
    ಯಾವುದೇ ಭೇದ ಭಾವವಿಲ್ಲದೆ ಆತಿಥ್ಯ ನೀಡುವುದರಲ್ಲಿ ಬಂಟರ ಸಮುದಾಯ ಹೆಸರುವಾಸಿ. ಈ ಸಮುದಾಯದವರು ಅತ್ಯಂತ ಶ್ರಮಜೀವಿಗಳು, ಅತಿಥಿ ದೇವೋಭವ ಎನ್ನುವ ಹಾಗೆ ಅತಿಥಿಗಳನ್ನು ದೇವರ ರೀತಿ ಭಾವಿಸುತ್ತಾರೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.

    Click Here

    Call us

    Click Here

    Watch Live Video

    ಬೆಳಗಾವಿಯ ಬಂಟರ ಯಾನೆ ನಾಡವರ ಸಂಘದ ವತಿಯಿಂದ ರಾಷ್ಟ್ರೀಯ ಹೆದ್ದಾರಿ 4 ರ  ನ್ಯೂ ಗಾಂಧಿ ನಗರದಲ್ಲಿ ನವೀಕೃತಗೊಂಡಿರುವ ಬಂಟರ ಭವನದ ಉದ್ಘಾಟನಾ ಸಮಾರಂಭ ಹಾಗೂ ಮಾಣಿಕ್ಯ ಸಂಭ್ರಮದಲ್ಲಿ ಮಾತನಾಡಿದ ಸಚಿವರು, ಚಿಕ್ಕ ವಯಸ್ಸಿನಲ್ಲೇ ಮನೆಬಿಟ್ಟು ಹೋಗಿ ಸ್ವಂತ ಕಾಲಮೇಲೆ ನಿಲ್ಲುವ ಸ್ವಾಭಿಮಾನಿಗಳು. ದೇಶದ ವಿವಿಧೆಡೆ ಸ್ವಾವಲಂಬಿ ಬದುಕನ್ನು ಕಟ್ಟಿಕೊಂಡಿದ್ದಾರೆ ಎಂದು ಹೇಳಿದರು.

     ಸಂಸ್ಕೃತಿ, ಕಲೆ‌ಯಲ್ಲಿ ನಿಮ್ಮ‌ ಸಮಾಜಕ್ಕೆ ಇರುವ ಆಸಕ್ತಿ ನೋಡಿ ಮಂತ್ರಮುಗ್ಧಳಾಗಿದ್ದೇನೆ. ಈ ಸಮುದಾಯದವರು ನಿಸ್ವಾರ್ಥಗಳು, ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆಯಾಗಿರುವುದು ನನ್ನ ಪೂರ್ವ ಜನ್ಮದ ಪುಣ್ಯ. ಉಡುಪಿ ಶ್ರೀ ಕೃಷ್ಣ, ಕಟೀಲು ದುರ್ಗಾಪರಮೇಶ್ವರಿ, ಕಾಪು ಮಾರಿಗುಡಿ ದೇವರ ದರ್ಶನ ಭಾಗ್ಯ ನನಗೆ ಸಿಗುತ್ತಿದೆ. ಭೂತಾರಾಧನೆ ಸೇರಿದಂತೆ ಕರಾವಳಿಯ ಸಂಸ್ಕೃತಿ ಬಂಟರ ಸಮುದಾಯದವರಿಂದ ಶ್ರೀಮಂತವಾಗಿದೆ ಎಂದು ಹೇಳಿದರು.

    ಬಂಟರ ಸಮುದಾಯದ ಸಂಖ್ಯೆ ಕಡಿಮೆ ಇದ್ದರೂ ಇಡೀ ವಿಶ್ವದ ಹೃದಯವನ್ನು ಗೆದ್ದಿದ್ದೀರಾ. ದೇಶಕ್ಕೆ ರಾಜ್ಯಕ್ಕೆ ಬಂಟರು ಗುರುತರ ಕಾಣಿಕೆ ನೀಡಿದ್ದಾರೆ.‌ ಸ್ವಾತಂತ್ರ್ಯ ಹೋರಾಟಕ್ಕೆ, ಕಲೆ‌, ಸಾಹಿತ್ಯಕ್ಕೂ ಕೊಡುಗೆ ನೀಡಿದ್ದಾರೆ. ಹೃದಯ ಶ್ರೀಮಂತಿಕೆ ಮರೆವ, ಆತಿಥ್ಯಕ್ಕೆ ಹೆಸರಾದ ಸಮಾಜ ನಿಮ್ಮದು. ಹೊಟೆಲ್ ಉದ್ಯಮ‌ವನ್ನು ಯಶಸ್ವಿಯಾಗಿ ನಿರ್ವಹಿಸುವುದರಲ್ಲಿ ಬಂಟರು ನಿಸ್ಸೀಮರು ಎಂದು ಹೇಳಿದರು.

    ಭಗವಂತನ ಕೃಪಾಶೀರ್ವಾದ ನಿಮ್ಮ‌ ಮೇಲಿದೆ. ಯಾವುದೇ ಊರಿಗೆ ಹೋದರೂ ಎಲ್ಲರನ್ನೂ ಪ್ರೀತಿ ವಿಶ್ವಾಸದಿಂದ ನೋಡುತ್ತೀರಿ. ಎಲ್ಲರನ್ನು ಒಟ್ಟಿಗೆ ಕರೆದೊಯ್ಯುತ್ತೀರಿ. ಇದು ಬಂಟರ ಸಮುದಾಯದವರಿಗೆ ಇರುವ ಕಲೆ ಎಂದರು.

    Click here

    Click here

    Click here

    Click Here

    Call us

    Call us

    ಕಾರ್ಯಕ್ರಮದಲ್ಲಿ ಸಿಎಂಡಿ‌ ಅಂಡ್ ಎಂಆರ್ ಜಿ ಗ್ರೂಪ್ ನ ಡಾ. ಕೆ ಪ್ರಕಾಶ ಶೆಟ್ಟಿ, ಶಾಸಕರಾದ ಆಸಿಫ್ ಸೇಠ್, ಉದ್ಯಮಿಗಳಾದ ಜಯಶೀಲ ಶೆಟ್ಟಿ, ಮುಂಬೈ ಬಂಟರ ಸಂಘದ ಅಧ್ಯಕ್ಷರಾದ ಪ್ರವೀಣ ಬೋಜ ಶೆಟ್ಟಿ, ಸಂಗೀತ ನಿರ್ದೇಶಕರಾದ ಗುರುಕಿರಣ್, ಡಾ.ಮಹಾಬಳೇಶ್ ಶೆಟ್ಟಿ, ಗೌರವಾಧ್ಯಕ್ಷರಾದ ವಿಠ್ಠಲ ಹೆಗ್ಡೆ, ಅಧ್ಯಕ್ಷರಾದ ವಿಜಯ ಶೆಟ್ಟಿ, ಶ್ರೀಧರ್ ಶೆಟ್ಟಿ, ಹಸ್ತ ಶೆಟ್ಟಿ, ಪ್ರಸನ್ನ ಶೆಟ್ಟಿ, ಚೇತನ ಶೆಟ್ಟಿ, ಕರುಣಾಕರ್ ಶೆಟ್ಟಿ, ಪ್ರಣಯ ಶೆಟ್ಟಿ ಬಂಟ ಸಮುದಾಯದ ಅನೇಕರು ಉಪಸ್ಥಿತರಿದ್ದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಕುಂದಾಪುರವನ್ನು ಪ್ರವಾಸಿ ಕೇಂದ್ರವಾಗಿಸುವುದಕ್ಕೆ ಮೊದಲ ಆದ್ಯತೆ: ಕುಂದಾಪ್ರ ಕನ್ನಡ ಹಬ್ಬ ಸಮಾರೋಪದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಭರವಸೆ

    28/07/2025

    ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಉಡುಪಿ ಜಿಲ್ಲೆಗೆ ಪ್ರಥಮ ಸ್ಥಾನ

    08/04/2025

    ಕಸ್ತೂರಿ ರಂಗನ್ ವರದಿ ತಿರಸ್ಕರಿಸಲು ರಾಜ್ಯ ಸಂಪುಟ ಸಭೆಯಲ್ಲಿ ನಿರ್ಣಯ

    27/09/2024
    Leave A Reply Cancel Reply

    nine + twenty =

    Call us

    Click Here

    Call us

    Call us

    Call us
    Highest Viewed Recently
    • ಡಾ. ಬಿ. ಬಿ. ಹೆಗ್ಡೆ ಕಾಲೇಜು: ಜೀವನ ಮೌಲ್ಯ ಉಪನ್ಯಾಸ ಮಾಲಿಕೆ
    • ಜೆಸಿಐ ಹಾಲಾಡಿ ವಾರಾಹಿ ವತಿಯಿಂದ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರ
    • ಕೊರವಡಿ ಶಾಲಾ ಕಟ್ಟಡ ನಿರ್ಮಾಣಕ್ಕೆ ಶ್ರೀ‌ಕ್ಷೇತ್ರ ಧ.ಗ್ರಾ.ಯೋ. ಅನುದಾನ, ಮಂಜೂರಾತಿ ಪತ್ರ ಹಸ್ತಾಂತರ
    • ಆಳ್ವಾಸ್‌ನ ‘ಲಿಪಿ’ ಮುದ್ರಣಾಲಯ ಲೋಕಾರ್ಪಣೆ
    • ಮಕ್ಕಳ ಸಾಹಿತ್ಯ ಉತ್ಸವದ ಆಶುಲೇಖನ ಸ್ಪರ್ಧೆಯಲ್ಲಿ ಸಮೃದ್ಧಿ ವಿ. ಪೂಜಾರಿ ದ್ವಿತೀಯ ಸ್ಥಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.